Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಚಾರ ನಿಯಮ ಉಲ್ಲಂಘನೆ ಶೇ.50ರ ರಿಯಾಯಿತಿ ದಂಡ ಪಾವತಿಗೆ ಅವಕಾಶ!
    ಬೆಂಗಳೂರು

    ಸಂಚಾರ ನಿಯಮ ಉಲ್ಲಂಘನೆ ಶೇ.50ರ ರಿಯಾಯಿತಿ ದಂಡ ಪಾವತಿಗೆ ಅವಕಾಶ!

    vartha chakraBy vartha chakraಫೆಬ್ರವರಿ 3, 2023Updated:ಮಾರ್ಚ್ 20, 202357 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.3-

    ‘ಸಂಚಾರ ನಿಯಮ ಉಲ್ಲಂಘನೆ ದಂಡದ ಶೇ.50ರ ರಿಯಾಯಿತಿ ಮೊತ್ತವನ್ನು ಪರಿಶೀಲಿಸಿ ಪಾವತಿ ಮಾಡಲು ನಾಲ್ಕು ವಿಧಾನಗಳಿವೆ. ಬಾಕಿ ಇರುವ ದಂಡವನ್ನು ವೀಕ್ಷಿಸುವ ಮತ್ತು ಪಾವತಿಸಲು ಕರ್ನಾಟಕ ಒನ್​ ವೆಬ್​ಸೈಟ್ (Karnataka One Website) ​ನಲ್ಲಿ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ’ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ‌ಎಂ.ಎನ್.ಅನುಚೇತ್ ತಿಳಿಸಿದ್ದಾರೆ.

    ‘ಪೇಟಿಎಂ (Paytm) ಆಪ್​ ಮುಖಾಂತರವೂ ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ. ಅಲ್ಲದೇ ಹತ್ತಿರದ ಸಂಚಾರ ಪೊಲೀಸ್​ ಠಾಣೆಗಳಲ್ಲಿ ನಿಮ್ಮ ವಾಹನದ ನೋಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ, ದಂಡವನ್ನು ಪಾವತಿಸಿ, ರಶೀದಿಯನ್ನು ಪಡೆದುಕೊಳ್ಳಬಹುದು. ಸಂಚಾರ ನಿರ್ವಹಣಾ ಕೇಂದ್ರದ ಮೊದಲನೆ ಮಹಡಿಯಲ್ಲೂ ಪಾವತಿಸಬಹುದಾಗಿದೆ.

    Paytm ನಲ್ಲಿ ಪಾವತಿ:

    1. Paytm ಆ್ಯಪ್​ ಓಪನ್​ ಮಾಡಿ, ಬಳಿಕ ರೀಚಾರ್ಜ್​ ಮತ್ತು ಬಿಲ್​ ಪೇಮೆಂಟ್ (Recharge and bill payments)​ ವಿಧಾನವನ್ನು ಆಯ್ಕೆ ಮಾಡಿಕೊಳ್ಳಿ.
    2. ಚಲನ್​ (Challan) ಎಂಬ ಆಯ್ಕೆ ಕಾಣದಿದ್ದರೆ View more ಮೇಲೆ ಕ್ಲಿಕ್​ ಮಾಡಿ.
    3. ನಂತರ ಟ್ರಾನ್ಸಿಟ್​ (Transit) ವಿಧಾನ ಆಯ್ಕೆ ಮಾಡಿಕೊಂಡು, ಟ್ರಾಫಿಕ್​ ಸಂಕೇತ ಇರುವ ಚಲನ್​ ಎಂಬ ಆಯ್ಕೆಯ ಮೇಲೆ ಕ್ಲಿಕ್​ ಮಾಡಿ.
    4. ಇದಾದ ಬಳಿಕ ಬೆಂಗಳೂರು ಟ್ರಾಫಿಕ್​ ಪೊಲೀಸ್​ ಎಂಬ ಆಯ್ಕೆಯ ಮೇಲೆ ಕ್ಲಿಕ್​ ಮಾಡಿ, ನಿಮ್ಮ ವಾಹನ ಸಂಖ್ಯೆಯನ್ನು ನಮೂದಿಸಿದರೆ ರಿಯಾಯಿತಿಯೊಂದಿಗೆ ನಿಮ್ಮ ದಂಡದ ಮೊತ್ತ ಕಾಣುತ್ತದೆ.
    5. ನಂತರ ದಂಡವನ್ನು ಪಾವತಿಸಿ.

    ವಿನಾಯಿತಿ ನೀಡಿದ್ದೇಕೆ:

    ಹೈಕೋರ್ಟ್ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ನ್ಯಾ. ಬಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ಎಲ್ಲರಿಗೂ ನ್ಯಾಯ ಒದಗಿಸುವ ಸಲುವಾಗಿ ಬಾಕಿ ಇರುವ ಉಲ್ಲಂಘನೆ ದಂಡ ಪಾವತಿಗೆ ವಿನಾಯಿತಿ ನೀಡುವಂತೆ ಚರ್ಚೆ ನಡೆಸಿದ್ದರು. ಇದಕ್ಕೆ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಗ್ರೀನ್ ಸಿಗ್ನಲ್ ತೋರಿದ್ದರು.

    ಇದರ ಮೇರೆಗೆ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯಾದ್ಯಂತ ಸಂಚಾರ ಪೊಲೀಸರು ದಾಖಲಿಸಿರುವ ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಬಗ್ಗೆ ಕಾನೂನು ಇಲಾಖೆ ಅಧಿಕಾರಿಗಳ ಒಪ್ಪಿಗೆ ಪಡೆದ ಸಾರಿಗೆ ಇಲಾಖೆ, ಶೇ.50 ವಿನಾಯಿತಿ ನೀಡಿದೆ. ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿರುವ ಸಂಚಾರ ದಂಡವನ್ನು ಫೆ.11ರ ಒಳಗೆ ಪಾವತಿಸಿದರೆ ಶೇ.50 ವಿನಾಯಿತಿ ಸಿಗಲಿದೆ.

    ಬಾಕಿ‌ ಇತ್ಯರ್ಥ:

    ‘ನಿಗದಿತ ದಿನಾಂಕದಂದು ಬಾಕಿ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳುವವರಿಗೆ ಮಾತ್ರ ಇದು ಅನ್ವಯ ಆಗಲಿದೆ. ಆನಂತರ ಬಂದವರಿಗೆ ವಿನಾಯಿತಿ ಸಿಗುವುದಿಲ್ಲ’ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

    ಬೆಂಗಳೂರು ನಗರ ಸಂಚಾರ ಪೊಲೀಸ್ ವಿಭಾಗದಲ್ಲಿ ಹಲವು ವರ್ಷಗಳಿಂದ ಅಂದಾಜು 2 ಕೋಟಿ ಪ್ರಕರಣಗಳು ಬಾಕಿ ಉಳಿದಿವೆ. ರಾಜ್ಯ ಸರ್ಕಾರ ಕೊಟ್ಟಿರುವ ಅವಕಾಶವನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು. ಆನ್‌ಲೈನ್ ಅಥವಾ ಸಂಚಾರ ಪೊಲೀಸ್ ಠಾಣೆಯಲ್ಲಿ ದಂಡದ ಮೊತ್ತವನ್ನು ಪಾವತಿಸಿ ವಿನಾಯಿತಿ ಪಡೆಯವಂತೆ ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದ್ದಾರೆ.

    Verbattle
    Verbattle
    Verbattle
    Bangalore challan fine payment HAL Karnataka m paytm Traffic rules ಕಾನೂನು ನಿಯಮ ಉಲ್ಲಂಘನೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleSoftware ಉದ್ಯೋಗದ ಆಸೆ ಹುಟ್ಟಿಸಿ ವಂಚಿಸುತ್ತಿದ್ದ ಗ್ಯಾಂಗ್
    Next Article Congress ರಣಕಹಳೆ!
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!

    ಫೆಬ್ರವರಿ 9, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • LinwoodGah ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Мигрень у женщин лечение ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.