ಬೆಂಗಳೂರು
ಡಿವೈಎಸ್ಪಿ ಗಣಪತಿ ಆತಹತ್ಯೆ ಪ್ರಕರಣದಲ್ಲಿ
ಕಾಂಗ್ರೆಸ್ ಹಿರಿಯ ನಾಯಕ ಕೆ.ಜೆ.ಜಾರ್ಜ್ ವಿರುದ್ದ ಸುಳ್ಳು ಆರೋಪಗಳನ್ನು ಮಾಡಿದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಅವರ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಜಾರ್ಜ್ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಸಿಬಿಐ ನೀಡಿರುವ ತನಿಖಾ ವರದಿಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ ಈ ಹಿನ್ನೆಲೆಯಲ್ಲಿ ಜೆಡಿಎಸ್-ಬಿಜೆಪಿ ಪಕ್ಷಗಳಿಗೆ ತಮ್ಮ ತಪ್ಪಿನ ಅರಿವಾಗಿದ್ದರೆ ಸಚಿವ ಕೆ.ಜೆ.ಜಾರ್ಜ್ ಅವರ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆಗ್ರಹಿಸಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ಸುಳ್ಳುಗಳನ್ನೇ ಹೇಳಿಕೊಂಡು ಇನ್ನೊಬ್ಬರ ಚಾರಿತ್ರ್ಯವಧೆ ಮಾಡುವ ಕಾರ್ಯ ಒಳ್ಳೆಯ ಸಂಪ್ರದಾಯವಲ್ಲ. ಕರ್ನಾಟಕದಲ್ಲಿ ಸಭ್ಯ ರಾಜಕಾರಣಿಗಳನ್ನು ಗುರಿಯಾಗಿಸಿಕೊಂಡು ಸುಳ್ಳು ಕೇಸುಗಳನ್ನು ಸೃಷ್ಟಿಸಿದ ಖ್ಯಾತಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಸಲ್ಲುತ್ತದೆ ಎಂದು ಟೀಕಿಸಿದ್ದಾರೆ.
ಗಣಪತಿ ಅವರ ಆತಹತ್ಯೆ ಪ್ರಕರಣದಲ್ಲಿ ಸಭ್ಯ ರಾಜಕಾರಣಿ ಜಾರ್ಜ್ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ವ್ಯವಸ್ಥಿತವಾಗಿ ಸಂಚು ರೂಪಿಸಿ, ಸುಳ್ಳು ಆರೋಪಗಳನ್ನು ಹೊರಿಸಿದ್ದರು ಈಗ ಅವುಗಳಿಗೆಲ್ಲ ಉತ್ತರ ಸಿಕ್ಕಿರುವ ಹಿನ್ನೆಲೆಯಲ್ಲಿ ಈ ಪಕ್ಷದ ನಾಯಕರು ಬೇಷರತ್ ಕ್ಷಮೆ ಯಾಚಿಸಬೇಕು ಎಂದು
ಒತ್ತಾಯಿಸಿದ್ದಾರೆ.
Previous Articleಮಗಳನ್ನು ನೋಡಲು ಬಂದ ಮಹಿಳೆ ನಾಯಿಗೆ ಬಲಿ..
Next Article ಪರಿಶಿಷ್ಟರಿಗೆ ಒಳಮಿಸಲಾತಿ.