ಬೆಂಗಳೂರು,ಸೆ.17-
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಮುಖ್ಯಮಂತ್ರಿ ಆಗಿರುವ ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿರುವ ಸೈಬರ್ ವಂಚಕರು ಆ ಖಾತೆಗಳಿಂದ ಮೂರು ಲಕ್ಷ ರೂಪಾಯಿಗಳನ್ನು ದೋಚಿದ್ದಾರೆ.
ಸದಾನಂದ ಗೌಡ ಅವರು ಹೊಂದಿರುವ ಹೆಚ್‌ಡಿಎಫ್‌ಸಿ, ಎಸ್‌ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದಾರೆ.
ಸೈಬರ್ ವಂಚಕರ ವಿಷಯದಲ್ಲಿ ದೊಡ್ಡ ಪ್ರಮಾಣದಲ್ಲಿ ಅರಿವು ಮೂಡಿಸುವ ಕೆಲಸ ನಡೆದಿರುವ ಸಮಯದಲ್ಲೇ ಮಾಜಿ ಮುಖ್ಯಮಂತ್ರಿಯೂ ಆಗಿರುವ ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗಳಿಗೆ ಸೈಬರ್ ವಂಚಕರು ಕನ್ನ ಹಾಕಿರುವ ವಿಷಯ ದೊಡ್ಡ ಪ್ರಮಾಣದಲ್ಲಿ ಚರ್ಚೆಯಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸದಾನಂದ ಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಸೈಬರ್ ವಂಚಕರು ತಮ್ಮ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಹಣ ದೋಚಿರುವ ಅಂಶವನ್ನು ಬಹಿರಂಗಪಡಿಸಿದ್ದಾರೆ.
ತಮ್ಮ ಹೆಸರಿನಲ್ಲಿರುವ ಖಾತೆಗಳಿಂದ ಸೈಬರ್ ವಂಚಕರು ತಲಾ ಒಂದು ಲಕ್ಷ ರೂಪಾಯಿಯಂತೆ ಮೂರು ಲಕ್ಷ ರೂಪಾಯಿಗಳನ್ನು ತೋರಿಸಿದ್ದಾರೆ ನಕಲಿ ಯುಪಿಐ ಐಡಿ ತಯಾರಿಸಿ, ಹಣ ದೋಚಿದ್ದಾರೆ ಈ ಬಗ್ಗೆ ಸೈಬರ್ ಕ್ರೈಮ್ ಗೆ ದೂರು ನೀಡುತ್ತೇನೆ ಎಂದು ಹೇಳಿದರು.
Previous Articleಸುತ್ತಿಕೊಳ್ಳುತ್ತಿದೆ ಮುಡಾ ಹಗರಣದ ಉರುಳು.
Next Article ಇವರಿಗೆ ಬೆಂಗಳೂರು ಬೇಡವಂತೆ.