Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸದ್ಯಕ್ಕಿಲ್ಲ ಒಳ ಮೀಸಲಾತಿ
    Viral

    ಸದ್ಯಕ್ಕಿಲ್ಲ ಒಳ ಮೀಸಲಾತಿ

    vartha chakraBy vartha chakraಮಾರ್ಚ್ 27, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.27:
    ರಾಜ್ಯದ ಪರಿಶಿಷ್ಟ ಜಾತಿ ಮತ್ತು ವರ್ಗದವರು ಜಾತಕ ಪಕ್ಷಿಗಳಂತೆ ಕಾಯುತ್ತಿರುವ ಒಳ ಮೀಸಲಾತಿಯ ತೀರ್ಮಾನ ಇನ್ನೂ ಕೆಲವು ತಿಂಗಳುಗಳ ಕಾಲ ಹೊರಬೀಳಲು ಸಾಧ್ಯವಿಲ್ಲ.
    ಒಳ ಮೀಸಲಾತಿ ನೀಡುವ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲು ನೇಮಿಸಲಾಗಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಇದರಲ್ಲಿ ಒಳ ಮೀಸಲಾತಿ ನೀಡಲು ಬೇಕಾದ ಅಂಕಿ ಅಂಶಗಳ ಸಂಗ್ರಹಕ್ಕೆ ಕಾಲಾವಕಾಶ ಬೇಕಾಗಿದೆ ಎಂದು ತಿಳಿಸಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ಒಳ ಮೀಸಲಾತಿ ನೀಡಲು ಕೆಲವು ಜಾತಿಗಳ ಬಗ್ಗೆ ಮರು ಸಮೀಕ್ಷೆ ನಡೆಸಬೇಕಾದ ಅಗತ್ಯವಿದೆ ಎಂದು ಹೇಳಿದೆ.
    ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯ ಎಡಗೈ ಮತ್ತು ಬಲಗೈ ಎಂದು ಕರೆಯಲಾಗುವ ಸಮುದಾಯದವರು ತಮ್ಮ ಜಾತಿಯ ಹೆಸರಿನಲ್ಲಿ ಕೆಲವು ಕಡೆ ಆದಿ ಕರ್ನಾಟಕ,ಆದಿ ದ್ರಾವಿಡ, ಆದಿ ಆಂಧ್ರ ಎಂದು ನಮೂದಿಸಿದ್ದು ಈ ಸಮುದಾಯವನ್ನು ಒಂದೊಂದು ಪ್ರದೇಶದಲ್ಲಿ ಒಂದೊಂದು ಜಾತಿ ಎಂದು ಗುರುತಿಸಲಾಗುತ್ತಿದೆ ಹೀಗಾಗಿ ಈ ರೀತಿ ನಮೂದಿಸಿರುವ ವ್ಯಕ್ತಿಗಳ ಉಪಜಾತಿ ಪತ್ತೆ ಕಾರ್ಯ ಕಷ್ಟವಾಗಿದೆ ಎಂದು ತಿಳಿಸಿದೆ.
    ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು ಎಂದು ತಿಳಿಸಿದೆ.
    ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸದಾದ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯಪಡುತ್ತಾರೆ.
    ಆದರೆ,ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ಧಪಡಿಸಬೇಕು, ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಮೀಕ್ಷೆ ಮಾಡುವ ಸಿಬ್ಬಂದಿಗೆ ತರಬೇತಿ, ಅಗತ್ಯವಿರುವ ಸಂಪನ್ಮೂಲಗಳ ಕ್ರೋಢೀಕರಣ ಇತ್ಯಾದಿಗಳ ಉಸ್ತುವಾರಿ ನೋಡಿಕೊಳ್ಳಲು ಉನ್ನತಮಟ್ಟದ ಸಮಿತಿಯೊಂದನ್ನು ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಡುತ್ತದೆ.
    ಎಂದು ತನ್ನ ವರದಿಯಲ್ಲಿ ಉಲ್ಲೇಖಿಸಿದೆ
    ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯ ಉಪಜಾತಿಗಳ ವರ್ಗೀಕರಣ ಮಾಡಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆಯ ಮೇಲೆ ಹಂಚಿಕೆ ಮಾಡಬೇಕು ಎಂದು ಹೇಳಿದೆ.
    ವರದಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನ್ಯಾಯಮೂರ್ತಿ ನಾಗ ಮೋಹನ್ ದಾಸ್, ಮಧ್ಯಂತರ ವರದಿ ಕೊಡಿ ಎಂದು ಸರ್ಕಾರ ಕೇಳಿರಲಿಲ್ಲ. ಆದರೂ ನಾವು ಸುಮಾರು 104 ಪುಟಗಳ ವರದಿ ಕೊಟ್ಟಿದ್ದೇವೆ’ ಈ ವರದಿ ಮೇಲೆ ಸರ್ಕಾರ ಏನು ತೀರ್ಮಾನ ಮಾಡುತ್ತೊ ನೋಡೋಣ’ ಎಂದರು.
    ಉದ್ಯೋಗಕಾಂಕ್ಷಿಗಳಿಗೆ ಅನ್ಯಾಯ ಆಗಬಾರದು. ಅವರಿಗೆ ಶಾಶ್ವತವಾದ ಪರಿಹಾರ ಕೊಡಬೇಕು.‌ ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ.‌ ವರದಿ ಬಗ್ಗೆ ಸರ್ಕಾರ ಏನೂ ಉತ್ತರ ಕೊಟ್ಟಿಲ್ಲ. ನೇಮಕಾತಿ ಬಗ್ಗೆ ನಾವು ಏನೂ ಸಲಹೆ ಕೊಟ್ಟಿಲ್ಲ’ ಎಂದು ಹೇಳಿದರು
    ಈ ವೇಳೆ ಸಮಾಜ ಕಲ್ಯಾಣ ಸಚಿವ ಎಚ್. ಸಿ. ಮಹದೇವಪ್ಪ, ಆಹಾರ ಸಚಿವ ಕೆ. ಎಚ್.ಮುನಿಯಪ್ಪ, ಅಬಕಾರಿ ಸಚಿವ ತಿಮ್ಮಾಪುರ, ಮಾಜಿ ಸಚಿವ ಎಚ್.ಆಂಜನೇಯ ಇದ್ದರು

    Verbattle
    Verbattle
    Verbattle
    ಕರ್ನಾಟಕ ತಂತ್ರಜ್ಞಾನ ನ್ಯಾಯ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಎಕ್ಸ್ ಖಾತೆಯಲ್ಲಿ ಯತ್ನಾಳ್ ಅಳಲು
    Next Article ಸಿಕ್ಕಿಬಿದ್ದ ಚಿನ್ನದ ವ್ಯಾಪಾರಿ
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    1 ಟಿಪ್ಪಣಿ

    1. avigroup on ಡಿಸೆಂಬರ್ 30, 2025 7:55 ಅಪರಾಹ್ನ

      Нужен трафик и лиды? реклама в яндекс директ SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kupit-saydingonest ರಲ್ಲಿ ಸೈಫ್ ಅಲಿ ಖಾನ್ ಗೆ ಚಾಕು ಹಾಕಿದ್ದು ಯಾರು ಗೊತ್ತಾ
    • kupit-saydingonest ರಲ್ಲಿ 3ಕೋಟಿಗೆ ಕಿಡ್ನಾಪ್ ಮಾಡಿ 300 ರೂ ಕೊಟ್ಟು ಬಿಡುಗಡೆ ಮಾಡಿ ಗುಂಡೇಟು ತಿಂದರು
    • Donniezew ರಲ್ಲಿ ಸಿಎಂ ವಿರುದ್ಧ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಬೇಕು.
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.