ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಘ ಪರಿವಾರಕ್ಕೆ ಸೇರಿದವರಲ್ಲ ಹೀಗಾಗಿ ಅವನನ್ನು ಬದಲಾಯಿಸಲು ಆರ್ ಎಸ್ಎಸ್ ನವರು ಹೊರಟಿದ್ದಾರೆ ಸದ್ಯದಲ್ಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಜನತಾ ಪರಿವಾರಕ್ಕೆ ಸೇರಿದವರಾಗಿದ್ದಾರೆ ಹೀಗಾಗಿ ಆರ್ ಸ್ ಎಸ್ ನವರು ಇವರನ್ನು ಸಿಎಂ ಅಗಿ ಮುಂದುವರೆಸುವುದಿಲ್ಲ. ನಮ್ಮ ಜೊತೆಯಲ್ಲೇ ಇದ್ದ ಬಸವರಾಜ ಬೊಮ್ಮಾಯಿ ನಮ್ಮ ಪಟ್ಟುಗಳನ್ನು ಕಲಿಯಲಿಲ್ಲ ಎಂದರು.
ರಾಜ್ಯದಲ್ಲಿ ರಾಜ್ಯ ಸರ್ಕಾರ ಸತ್ತು ಹೋಗಿದೆ. ಸಿಎಂ, ಗೃಹ ಸಚಿವರು ಇಬ್ಬರು ಅಶಕ್ತರು. ಗೃಹ ಸಚಿವರು ಅತ್ಯಂತ ಅಸಮರ್ಥರಾಗಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಸತ್ತು ಹೋಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಸರ್ಕಾರವೇ ಇದೆ ಎಂಬ ಭಾವನೆಯೇ ಬರುತ್ತಿಲ್ಲ ಸರ್ಕಾರದಲ್ಲಿರುವವರಿಗೆ ಆಡಳಿತ ಮಾಡುವುದಕ್ಕೆ ಬರುತ್ತಿಲ್ಲ.ಸರ್ಕಾರಿ ಹುದ್ದೆ ನೇಮಕಾತಿಯ ಎಲ್ಲಾ ಪರೀಕ್ಷೆಗಳಲ್ಲೂ ದುಡ್ಡು ದುಡ್ಡು ಎನ್ನುತ್ತಿದ್ದಾರೆ. ವರ್ಗಾವಣೆಯೂ ದುಡ್ಡಿನಿಂದ ನಡೆಯುತ್ತಿದೆ ದುಡ್ಡು ಕೊಟ್ಟು ಬಂದ ಅಧಿಕಾರಿಗಳು ಇವರ ಮಾತು ಕೇಳುತ್ತಿಲ್ಲ ಎಂದು ಆರೋಪಿಸಿದರು.
ಅಧಿಕಾರಿಗಳು ಯಾವ ಸಚಿವರ ಮಾತನ್ನು ಕೇಳುತ್ತಿಲ್ಲ. ಸಚಿವರುಗಳಿಗೂ ಇದರ ಬಗ್ಗೆ ಜ್ಞಾನವಿಲ್ಲ. ಇಂತಹ ಸರ್ಕಾರವನ್ನು ಕರ್ನಾಟಕ ಎಂದೂ ನೋಡಿರಲಿಲ್ಲ. ಇದೊಂದು ಭ್ರಷ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.