ಬೆಂಗಳೂರು,ಡಿ.02:
ಕೈ ತುಂಬಾ ಸಂಬಳ ಮತ್ತು ಸವಲತ್ತುಗಳು ಸಿಗುತ್ತಿರುವ ಸರ್ಕಾರಿ ಕೆಲಸಕ್ಕೆ ಗುಡ್ ಬೈ ಹೇಳಿ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಸನ್ಯಾಸಿಯಾಗಲು ಹೊರಟಿದ್ದಾರೆ.
ಬೆಂಗಳೂರು ಹೊರ ವಲಯದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠಾಧೀಶರಾದ ಚಂದ್ರಶೇಖರನಾಥ ಸ್ವಾಮೀಜಿ ಅವರು ಆರೋಗ್ಯ ಮತ್ತು ವಯಸ್ಸಿನ ಹಿನ್ನೆಲೆಯಲ್ಲಿ ಸೂಕ್ತ ಉತ್ತರಾಧಿಕಾರಿ ಹುಡುಕಾಟದಲ್ಲಿದ್ದಾರೆ. ಈಗ ಈ ಸ್ಥಾನಕ್ಕೆ ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಹೆಚ್.ಎಲ್.ನಾಗರಾಜು ನೇಮಕಗೊಳ್ಳುವ ಸಾಧ್ಯತೆ ಇದೆ ಇದಕ್ಕಾಗಿ ಅವರು ಸನ್ಯಾಸತ್ವ ಸ್ವೀಕರಿಸುತ್ತಿದ್ದಾರೆ.
ಒಕ್ಕಲಿಗ ಸಮಾಜದ ಸಂಘಟನೆ ಸೇರಿದಂತೆ ಹಲವಾರು ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ
ಹೆಚ್.ಎಲ್.ನಾಗರಾಜು ಇದೀಗ ಕೈತುಂಬಾ ಸಂಬಳ ಬರುವ ಉನ್ನತ ಹುದ್ದೆ ಮತ್ತು ಸಾಂಸಾರಿಕ ಜೀವನವನ್ನು ತೊರೆದು ಸನ್ಯಾಸತ್ವವನ್ನು ಸ್ವೀಕರಿಸುತ್ತಿದ್ದಾರೆ ಈ ಉದ್ದೇಶದಿಂದಾಗಿ ಅವರು
ಶೀಘ್ರದಲ್ಲೇ ಕೆಲಸಕ್ಕೆ ರಾಜೀನಾಮೆ ನೀಡಲಿದ್ದಾರೆ.
ಬಳಿಕ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ ಸ್ವೀಕಾರ ಮಾಡಲಿದ್ದಾರೆ. ಚಂದ್ರಶೇಖರನಾಥಶ್ರೀ ಶಿಷ್ಯರಾಗಿ ಮುಂದುವರೆಯಲಿದ್ದಾರೆ.
ಈ ಹಿಂದೆಯೂ ಹೆಚ್.ಎಲ್.ನಾಗರಾಜು ಸನ್ಯಾಸತ್ವ ಸ್ವೀಕರಿಸಿದ್ದರು. 2011ರಲ್ಲಿ ಆದಿಚುಂಚನಗಿರಿ ಮಠದಲ್ಲಿ ಸ್ವಾಮೀಜಿಯಾಗಿ ದೀಕ್ಷೆ ಪಡೆದಿದ್ದರು. ‘ನಿಶ್ಚಲಾನಂದನಾಥ’ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದರು. ತಹಶೀಲ್ದಾರ್ ಹುದ್ದೆ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದರು. ಆದರೆ ಹಿತೈಷಿಗಳು, ಸಾರ್ವಜನಿಕರ ಒತ್ತಾಯಕ್ಕೆ ಮಣಿದು ಸನ್ಯಾಸತ್ವ ತ್ಯಜಿಸಿ ಅಧಿಕಾರಿಯಾಗಿದ್ದರು.
ಇದೀಗ ಮತ್ತೆ ಕಾವಿ ಧರಿಸಲು ನಿರ್ಧರಿಸಿರುವ ಹೆಚ್.ಎಲ್ ನಗರಾಜು, ಮತ್ತೆ ಸನ್ಯಾಸತ್ವ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
Previous Articleಯತ್ನಾಳ್ ಗೆ ವಿನಾಶ ಕಾಲ ಬಂದಿದೆಯಂತೆ.
Next Article ಚಾರ್ಜಿಂಗ್ ನಿಂದ ಫೋನ್ ತೆಗೆಯುವಾಗ ಶಾಕ್ ಹೊಡೆದು ಸಾವು