ಬೆಂಗಳೂರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜವಾದಿ. ಹೀಗಿದ್ದೂ ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ.
ಚುನಾವಣಾ ಸುಧಾರಣೆ ಮತ್ತು ಅಕ್ರಮಗಳ ಕುರಿತು ಕೆಲಸ ಮಾಡುವ ಸ್ವಯಂಸೇವಾ ಸಂಸ್ಥೆ ADR ದೇಶದ ಎಲ್ಲಾ ಮುಖ್ಯಮಂತ್ರಿಗಳ ಘೋಷಿತ ಆಸ್ತಿಪಾಸ್ತಿಯ ವಿವರಗಳನ್ನು ಪ್ರಕಟಿಸಿದೆ
ದೇಶದ 31 ಮುಖ್ಯಮಂತ್ರಿಗಳ ಒಟ್ಟು ಆಸ್ತಿ 1,630 ಕೋಟಿ ರೂಪಾಯಿಯಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿಯಾಗಿದ್ದಾರೆ.ಚರ ಮತ್ತು ಸ್ಥಿರ ಆಸ್ತಿ ಸೇರಿ ಇವರು ಒಟ್ಟು 15 ಲಕ್ಷ ರೂಪಾಯಿ ಆಸ್ತಿ ಹೊಂದಿದ್ದಾರೆ.
ನಂತರದ ಸ್ಥಾನದಲ್ಲಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರಿದ್ದಾರೆ. ಇವರ ಒಟ್ಟು ಆಸ್ತಿ 55 ಲಕ್ಷ ರೂಪಾಯಿ ಇದೆ. ಮೂರನೆಯ ಸ್ಥಾನದಲ್ಲಿ ಎಡಪಕ್ಷದ ನಾಯಕ ಹಾಗೂ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 1 ಕೋಟಿ ರೂಪಾಯಿಗಿಂತ ಸ್ವಲ್ಪ ಹೆಚ್ಚು ಆಸ್ತಿ ಹೊಂದಿದ್ದಾರೆ.
ಒಟ್ಟು 931 ಕೋಟಿ ರೂಪಾಯಿ ಆಸ್ತಿಯೊಂದಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮೊದಲ ಸ್ಥಾನದಲ್ಲಿದ್ದಾರೆ. ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು 332 ಕೋಟಿ ರೂಪಾಯಿ ಆಸ್ತಿಯೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಶ್ರೀಮಂತ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಇದ್ದಾರೆ. ಇವರ ಒಟ್ಟು ಆಸ್ತಿ 51 ಕೋಟಿ ರೂಪಾಯಿ ಎಂದು ಎಡಿಆರ್ ಸಂಸ್ಥೆ ತಿಳಿಸಿದೆ.
Previous Articleನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !
Next Article ನಾನ್ ಅವನಲ್ಲ.. ನಾನ್ ಅವನಲ್ಲ.