ಬೆಂಗಳೂರು,ಜು.3-
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ನಿವೇಶನ ನೀಡಿದ್ದಾರೆ 60 ನಿವೇಶನ ನೀಡಲಾಗಿದೆ ಎಂದು ಬಿಜೆಪಿ ಆಪಾದಿಸಿದೆ.
ಮುಡಾ ನಿವೇಶನ ಅಭಿವೃದ್ಧಿಗೆ ವಶಪಡಿಸಿಕೊಂಡ ಜಮೀನಿನ ಮಾಲೀಕರಿಗೆ 50:50 ಅನುಪಾತದಲ್ಲಿ ನಿವೇಶನಗಳನ್ನು ಹಂಚಬೇಕು. ಈ ನಿಯಮದ ಹೆಸರಲ್ಲಿ 3-4 ಸಾವಿರ ಕೋಟಿ ರೂ. ಲೂಟಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಅಶೋಕ್ ಆಪಾದಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿವೇಶನ ಕೋರಿ 86 ಸಾವಿರ ಮಂದಿ ನಿವೇಶನ ರಹಿತರು ಅರ್ಜಿಗಳನ್ನು ಸಲ್ಲಿಸಿದ್ದರು ಆದರೆ,ಅವರಿಗೆ ನಿವೇಶನ ನೀಡಿಲ್ಲ.ಮುಖ್ಯಮಂತ್ರಿಗಳ ಕುಟುಂಬದವರಿಗೆ 50:50 ಅನುಪಾತದಲ್ಲಿ15 ನಿವೇಶನ ನೀಡಬೇಕು ಇದಕ್ಕೆ ಬದಲಾಗಿ 60 ನಿವೇಶನ ನೀಡಲಾಗಿದೆ ಎಂದು ದೂರಿದರು.
ಮುಖ್ಯಮಂತ್ರಿಗಳು ತಮ್ಮ ತವರು ಜಿಲ್ಲೆಯಲ್ಲೇ ನಿವೇಶನ ದೋಚಿದ್ದಾರೆ. ಸರ್ಕಾರ ಕೂಡಲೇ ಈ ನಿವೇಶನ ಯೋಜನೆಯನ್ನು ರದ್ದು ಮಾಡಬೇಕು. ತನಿಖೆಯನ್ನು ಸಿಬಿಐಗೆ ವಹಿಸಿದರೆ ಸತ್ಯ ಹೊರಬರಲಿದೆ. ಈ ವಿಚಾರವನ್ನು ಸದನದಲ್ಲಿ ಮಾತನಾಡಿ ಸತ್ಯ ಬಯಲಿಗೆ ತರುತ್ತೇವೆ ಎಂದರು.
ಸಿಬಿಐ ತನಿಖೆ:
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಮುಡಾ ದಲ್ಲಿ ನಡೆದಿರುವ ನಿವೇಶನ ಹಂಚಿಕೆ ಹಗರಣವನ್ನು ರಾಜ್ಯಸರ್ಕಾರ ಕೂಡಲೇ ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.
ಇದರಲ್ಲಿ ಸುಮಾರು 4 ಸಾವಿರ ಕೋಟಿ ಹಗರಣ ನಡೆದಿರುವುದು ಬೆಳಕಿಗೆ ಬಂದಿದೆ. ಇದರಲ್ಲಿ ಅನೇಕ ಪ್ರಭಾವಿಗಳೂ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು.
ಹಗರಣ ಹೊರಬರುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಡಬರಿಸಿ ಸಭೆ ನಡೆಸಿದರು. ಅಕ್ರಮ ನಡೆದಿಲ್ಲ ಎಂದರೆ ಆಯುಕ್ತರು, ಅಧಿಕಾರಿಗಳನ್ನು ವರ್ಗಾವಣೆ ಮಾಡಿ ತನಿಖೆಗೆ ಆದೇಶ ಮಾಡಿರುವುದು ಏಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂ. ಬೆಲೆ ಬಾಳುವ ನಿವೇಶನಗಳನ್ನು ಹಿಂಬಾಲಕರಿಗೆ ಹಂಚಿಕೆ ಮಾಡಿದ್ದಾರೆ. ಇದೀಗ ಈ ಹಗರಣದಲ್ಲಿ ಸ್ವತಃ ಸಿಎಂ ಅವರ ಪತ್ನಿಯೂ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮುಖ್ಯಮಂತ್ರಿ ಕುಟುಂಬದ ಮೇಲೆ ಆರೋಪ ಬಂದಾಗ ರಾಜ್ಯಸರ್ಕಾರದ ತನಿಖಾ ಸಂಸ್ಥೆಗಳು ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ ಹೀಗಾಗಿ ಸಿಬಿಐ ತನಿಖೆ ಅಗತ್ಯ ಎಂದು ಹೇಳಿದರು.
ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ಈಗ ಅದೇ ಬ್ರಹಾಂಡ ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಿದೆ. ಲೋಕಸಭಾ ಚುನಾವಣೆಯಲ್ಲೂ ಜನತೆ ಸರಿಯಾದ ಪಾಠವನ್ನು ಕಲಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಜಯೇಂದ್ರ ಎಚ್ಚರಿಸಿದರು.
Previous Articleಬಿಜೆಪಿ ನಾಯಕರ ಬಂಧನ ಮತ್ತು ಬಿಡುಗಡೆ..
Next Article ನೀರು ಕಲುಷಿತಗೊಂಡರೆ ಜೋಕೆ.!
2 ಪ್ರತಿಕ್ರಿಯೆಗಳು
Снять алкогольную интоксикацию на дому fizioterapijakeskic.com .
абстинентный синдром при алкоголизме лечение [url=http://xn—–7kcablenaafvie2ajgchok2abjaz3cd3a1k2h.xn--p1ai/]абстинентный синдром при алкоголизме лечение[/url] .