ಬೆಂಗಳೂರು.
ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಟು ಟೀಕೆಗಳ ಮೂಲಕ ಗಮನ ಸೆಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ದೇಶದ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಇದ್ದಾರೆ ಅದು ಯಾವ ಕಾರಣಕ್ಕೆ ಎಂಬುದನ್ನು ತಿಳಿಯಲು ಈ ಸ್ಟೋರಿ ಓದಿ..
ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ADR), ದೇಶದ ಅಧಿಕಾರಸ್ತ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ಸಂಪನ್ಮೂಲ, ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಮಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಖಚಿತ ಮಾಹಿತಿಯನ್ನು ಸಾರ್ವಜನಿಕರ ಮುಂದೆ ತೆಗೆದಿಡುತ್ತಿದೆ.
ಇದೀಗ ಈ ಸಂಸ್ಥೆ ದೇಶದಲ್ಲಿರುವ ಎಲ್ಲಾ ಮುಖ್ಯಮಂತ್ರಿಗಳ ಆಸ್ತಿಯನ್ನು ಪಟ್ಟಿ ಮಾಡಿದೆ. ಇದರಲ್ಲಿ ಅತಿ ಹೆಚ್ಚು ಶ್ರೀಮಂತರ ಪೈಕಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರನೇ ಸ್ಥಾನದಲ್ಲಿದ್ದಾರೆ.
ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ADR), ವರದಿಯ ಪ್ರಕಾರ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು 931 ಕೋಟಿ ಆಸ್ತಿಯೊಂದಿಗೆ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ
ಅದೇ ರೀತಿಯಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರು 15 ಲಕ್ಷ ಆಸ್ತಿಯೊಂದಿಗೆ ಅತ್ಯಂತ ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿ ಎಂದು ವರದಿಯಲ್ಲಿ ಹೇಳಿದೆ
ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೇಮಾ ಖುಂಡು ಅವರು 2ನೇ ಅತಿ ಶ್ರೀಮಂತ ಮುಖ್ಯಮಂತ್ರಿ ಎನಿಸಿದ್ದು, ಇವರ ಒಟ್ಟು ಆಸ್ತಿ 332 ಕೋಟಿಯಾಗಿದೆ. 3ನೇ ಸ್ಥಾನದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದು, ಇವರ ಒಟ್ಟು ಆಸ್ತಿ ಮೌಲ್ಯ 51 ಕೋಟಿಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಆಸ್ತಿ 55 ಲಕ್ಷ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಸ್ತಿ 1.18 ಕೋಟಿ ಇದ್ದು. ಇವರು ಮಮತಾ ಅವರ ನಂತರದ ಸ್ಥಾನದಲ್ಲಿದ್ದಾರೆ.
ಪೇಮಾ ಖಂಡು ಅವರು 180 ಕೋಟಿ ಸಾಲ ಹೊಂದಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದು, 23 ಕೋಟಿ ಸಾಲ ಪಡೆದಿದ್ದಾರೆ. ಚಂದ್ರ ಬಾಬು ನಾಯ್ಡು 10 ಕೋಟಿ ಸಾಲ ಪಡೆದಿದ್ದಾರೆ ಎಂದು ವರದಿ ಹೇಳಿದೆ.
ತೆಲಂಗಾಣದ ರೇವಂತ್ ರೆಡ್ಡಿ ದೇಶದಲ್ಲೇ ಅತಿ ಹೆಚ್ಚು ಕ್ರಿಮಿನಲ್ ಆರೋಪ ಹೊಂದಿರುವ ಮುಖ್ಯಮಂತ್ರಿಯಾಗಿದ್ದಾರೆ.ಇವರ ವಿರುದ್ಧ ಒಟ್ಟು 89 ಅಪರಾಧ ಪ್ರಕರಣಗಳಿವೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 13 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ ಎಂದು ವರದಿ ತಿಳಿಸಿದೆ.
ಸಿದ್ದರಾಮಯ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ ಯಾಕೆ ಗೊತ್ತಾ..
Previous Articleಪೊಲೀಸರ ವಿರುದ್ಧವೇ ಪೊಲೀಸರಿಗೆ ದೂರು.
Next Article ಹೊಸ ವರ್ಷದಲ್ಲೂ ಬಿಜೆಪಿಗೆ ಬಂಡಾಯದ ಬಿಸಿ.