ಬೆಳಗಾವಿ.
ಗರ್ಭಿಣಿಯರು ಮತ್ತು ಅವರ ಕುಟುಂಬ ಸದಸ್ಯರನ್ನು ಹೆದರಿಸಿ ಸಿಸೇರಿಯನ್ ಹೆರಿಗೆಗಳ ಮೂಲಕ ಸುಲಿಗೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಗೆ ತರುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ವಿಧಾನ ಪರಿಷತ್ ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ನ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022 ರಲ್ಲಿ 35% ಇದ್ದ ಸಿಸೇರಿಯನ್ ಪ್ರಮಾಣ, 2022-23 ಕ್ಕೆ 38%ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ 46% ಇದೆ. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ 61 ರಷ್ಟು ಸಿಸೇರಿಯನ್ ಗಳನ್ನ ಮಾಡಲಾಗುತ್ತಿದೆ. ಸಿಸೇರಿಯನ್ ಗಳಿಂದ ಹೆಚ್ಚು ಆದಾಯ ಬರುತ್ತದೆ ಮತ್ತು ಸುಲಭವಾಗಿ ಸಿಸೇರಿಯನ್ ಮಾಡಬಹುದು ಎಂಬ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳು ಸಿಸೇರಿಯನ್ ಹೆರಿಗೆಗಳನ್ನೇ ಹೆಚ್ಚು ಮಾಡುತ್ತಿದ್ದಾರೆ ಎಂದು ಹೇಳಿದರು
ತಾಯಿ ಮತ್ತು ಮಗುವಿನ ಆರೋಗ್ಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರನ್ನ ಸಹಜ ಹೆರಿಗೆ ಮಾಡಿಸಿಕೊಳ್ಳಲು ಮಾನಸಿಕವಾಗಿ ಸಜ್ಜುಗೊಳಿಸಿಬೇಕಿದೆ. ಇದಕ್ಕಾಗಿ ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ತಿಳಿಸಿದರು.
Previous Articleಮೊಬೈಲ್ ಕಳ್ಳರನ್ನು ಚೇಸ್ ಮಾಡಿದ ಮಾಜಿ ಕಾರ್ಪೊರೇಟರ್.
Next Article ಮಂಗಳಮುಖಿಯ ಈ ಸಾಧನೆ ನೋಡಿ.