ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಕುತೂಹಲ ಮೂಡಿಸಿದೆ.
ಉಪಚುನಾವಣೆಯ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ ಆದರೆ ಈಗಲೇ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್ ಪಾಳಯದಲ್ಲಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ತೀವ್ರಗೊಂಡಿದೆ.
ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿಪಿ ಯೋಗೇಶ್ವರ್ ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀವ್ರ ಪೈಪೋಟಿ ನಡೆಸಿದ್ದಾರೆ ಆದರೆ ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಹೀಗಾಗಿ ಆ ಸ್ಥಾನ ತಮಗೆ ಬೇಕು ಎಂದು ಜೆಡಿಎಸ್ ಪಟ್ಟು ಹಿಡಿದಿದೆ ಇದು ಉಭಯ ಪಕ್ಷಗಳ ನಡುವೆ ಬಿಕ್ಕಟ್ಟಿಗೆ ಕಾರಣವಾಗಿದೆ.
ಬಿಜೆಪಿ ಹೈಕಮಾಂಡ್ ಗೆಲುವಿನ ಮಾನದಂಡ ಆಧರಿಸಿ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದು ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಡಲು ಒಲವು ತೋರಿದ್ದಾರೆ ಎನ್ನಲಾಗಿದೆ.
ಈ ನಡುವೆ ತಮ್ಮ ಪಕ್ಷದ ನಾಯಕನ ಬೆಂಬಲಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಧಾವಿಸಿದ್ದಾರೆ.
ದೆಹಲಿಯಲ್ಲಿ ವರಿಷ್ಠ ನಾಯಕರನ್ನು ಭೇಟಿ ಮಾಡಿ ಈ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳಬೇಕು ನಮ್ಮ ಅಭ್ಯರ್ಥಿ ಯೋಗೇಶ್ವರ್ ಪರವಾಗಿ ಜನಾಭಿಪ್ರಾಯವಿದೆ ಅವರಿಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಲೋಕಸಭೆ ಚುನಾವಣೆ ಸಮಯದಲ್ಲಿ ಕೋಲಾರ ಕ್ಷೇತ್ರ ಬಿಜೆಪಿ ಗೆದ್ದಿದ್ದರೂ ಕೂಡ ಮೈತ್ರಿ ಧರ್ಮಕ್ಕೆ ಅನುಗುಣವಾಗಿ ಅದನ್ನು ಜೆ ಡಿ ಎಸ್ ಗೆ ಬಿಟ್ಟುಕೊಡಲಾಗಿತ್ತು ಈಗ ಅದೇ ಮಾನದಂಡವನ್ನು ಜೆಡಿಎಸ್ ಅನುಸರಿಸಿ ಬಿಜೆಪಿಗೆ ಬಿಟ್ಟುಕೊಡಬೇಕು ಎಂದು ಮಾನವೊಲಿಸುವಂತೆ ವರಿಷ್ಠ ನಾಯಕರಿಗೆ ಮನವಿ ಮಾಡಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಯೋಗೇಶ್ವರ್ ಪರವಾದ ಅಭಿಪ್ರಾಯವಿದೆ ಇದಲ್ಲದೆ ಜೆಡಿಎಸ್ ನಿಂದ ಕುಮಾರಸ್ವಾಮಿ ಅವರ ಪುತ್ರ ಕಣಕ್ಕೆ ಇಳಿಯುವುದು ಅನುಮಾನ ಹೀಗಾಗಿ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವಂತೆ ಜೆಡಿಎಸ್ ನಾಯಕರ ಮನವೊಲಿಸಬೇಕು ಎಂದು ಹೈಕಮಾಂಡ್ ಮುಂದೆ ವಾದ ಮಂಡಿಸಿದ್ದಾರೆ.
Previous Articleಸರ್ಕಾರಿ ಶಾಲೆ ದತ್ತು ಪಡೆಯಿರಿ.
Next Article ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್.