ಮೈಸೂರು.
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸರಣಿ ಆರೋಪಗಳ ದೂರು ಸಲ್ಲಿಸುವ ಮೂಲಕ ಗಮನ ಸೆಳೆದಿದ್ದ
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ.
ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಆದರೆ ಕಳೆದ ಮೂರು ದಿನದಿಂದ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು ಅವರು ಎಲ್ಲಿದ್ದಾರೆ ಎಂಬ ಬಗ್ಗೆ ಯಾರಿಗೂ ಮಾಹಿತಿ ಇಲ್ಲ.
ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು.
ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ಬಂದ ಸೀರೆಗಳನ್ನು ಕಾರ್ಯದರ್ಶಿ ರೂಪಾ ಅವರ ಕಾರಿನಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತಿದೆ. ಯುವಕನೊಬ್ಬ ಕಾರಿಗೆ ಸೀರೆ ತುಂಬಿಸಿಕೊಂಡು ಹೋಗುವ ವಿಡಿಯೋದ ಸಿಡಿಯನ್ನು ದೂರಿನೊಂದಿಗೆ ಲಗ್ಗತ್ತಿಸಿದ್ದರು.
ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದಾರೆ.ಇದೀಗ ಪೊಲೀಸರು ಸ್ನೇಹಮಯಿ ಕೃಷ್ಣಗಾಗಿ ಹುಡುಕಾಟ ಆರಂಭಿಸಿದ್ದಾರೆ.
Previous ArticleCCB ಹೆಸರಲ್ಲಿ ಒಂದು ಕೋಟಿ ರೂಪಾಯಿ ವಂಚನೆ
Next Article ವಿಜಯೇಂದ್ರ ಬದಲಾವಣೆಗೆ ಪಟ್ಟು.