ಬೆಂಗಳೂರು.
ಮಾಜಿ ಮಂತ್ರಿ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸಂಕಷ್ಟಕ್ಕೆ ಸಿಲುಕಿದ್ದಾರೆ.ಇವರ ವಿರುದ್ಧದ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಸಾಬೀತಾಗಿದೆ ಎಂದು ಹೇಳಿ ತನಿಖಾ ತಂಡ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.
ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಒಟ್ಟು ಏಳು ಜನರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್ಐಟಿ ರಚಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಎಸ್ಐಟಿ, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಅವರ ಸಹಚರರ ಮೇಲೆ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣ ಸಂಬಂಧ ಎಸ್ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಇದರಲ್ಲಿ ನ್ಯಾಯಾಧೀಶರ ಮುಂದೆ ಸಿಆರ್ಪಿಸಿ 164ರಡಿ 8 ಜನರ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಎಸ್ಐಟಿ ಸಲ್ಲಿಕೆ ಮಾಡಿದೆ
ತಮ್ಮ ವಿರೋಧಿಗಳನ್ನು ಹೆಚ್ಐವಿ-ಏಡ್ಸ್ ಪೀಡಿತರ ಮೂಲಕ ಹನಿಟ್ರ್ಯಾಪ್ ಬಲಗೆ ಬೀಳಿಸಿ ಏಡ್ಸ್ ಹರಡುವಿಕೆಗೆ ಶಾಸಕ ಮುನಿರತ್ನ ದುಷ್ಕೃತ್ಯ ಎಸಗಿದ್ದರು ಎಂದು ಎಸ್ಐಟಿ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದೆ.
ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ. ಸದ್ಯ ಇನ್ಸ್ಪೆಕ್ಟರ್ ಬಿ. ಐಯ್ಯಣ್ಣ ರೆಡ್ಡಿಯನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ.


2 ಪ್ರತಿಕ್ರಿಯೆಗಳು
Ваш сайт не привлекает клиентов из Гродно? Нужна комплексная раскрутка! Начинаем с аудита и юзабилити. Далее — оптимизация под ключевые запросы «Гродно» и его окрестностей seo продвижение сайта гродно. Разрабатываем контент-план, работаем с картами и отзывами. Системный подход гарантирует устойчивый рост в поиске.
Профессиональный монтаж окон в Молодечно. Важно не только купить купить пластиковое окно молодечно, но и правильно установить. Доверьтесь нам.