Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂದುಳಿದ ವರ್ಗಗಳ ವಿರೋಧಿ ಬಿಜೆಪಿ ನಾಯಕರು
    Trending

    ಹಿಂದುಳಿದ ವರ್ಗಗಳ ವಿರೋಧಿ ಬಿಜೆಪಿ ನಾಯಕರು

    vartha chakraBy vartha chakraಜುಲೈ 26, 202448 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,‌ಜು.26:
    ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸೇರಿಕೊಂಡು ನನ್ನ ಜೀವಮಾನದಲ್ಲೆ ಕಾಣದಷ್ಟು ಕೆಟ್ಟ ರಾಜಕಾರಣವನ್ನು ಮಾಡುತ್ತಿವೆ. ವಿಚಾರವೇ ಇಲ್ಲದೆ ವೈಯಕ್ತಿಕವಾಗಿ ತೇಜೋವಧೆ ಮಾಡುವ ಕೆಲಸವನ್ನು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕುರಿತು ವಿಧಾನಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಮಾಡಿದ ಆರೋಪಗಳಿಗೆ ಸುದ್ದಿಗೋಷ್ಠಿಯಲ್ಲಿ ಸುಧೀರ್ಘ ಉತ್ತರ ನೀಡಿದ ಅವರು,ರಾಜ್ಯದಲ್ಲಿ ಕುಸಿದು ಹೋಗುತ್ತಿರುವ ಜನಪ್ರಿಯತೆಯನ್ನು ಮರುಸ್ಥಾಪಿಸಿಕೊಳ್ಳಲು ಕಾಗಕ್ಕ-ಗೂಬಕ್ಕನ ಕಥೆ ಕಟ್ಟಿ ಜನರನ್ನು ನಂಬಿಸಲು ಹೊರಟಿದ್ದಾರೆ ಎಂದು ದೂರಿದರು.
    ಸಾವಿರ ಸಲ ಸುಳ್ಳನ್ನು ಸತ್ಯ ಎಂದು ಹೇಳಿದರೆ ಸುಳ್ಳೂ ನಿಜವಾಗಲಿದೆ ಎಂಬ ಹಿಟ್ಲರ್‌ವಾದಿ ಹಾಗೂ ಭಾರತದ ಪೇಶ್ವೆವಾದಿ ಮನಸ್ಥಿತಿಯನ್ನು ಹೊಂದಿರುವ ಬಿಜೆಪಿಯವರು ಅದನ್ನು ನಮ್ಮ ರಾಜ್ಯದಲ್ಲಿ ಪ್ರತಿಪಾದಿಸುತ್ತಿದ್ದಾರೆ. ಹಿಂದೆ ದೇವರಾಜ ಅರಸು ,ಧರ್ಮಸಿಂಗ್ ಅವರ ವಿಚಾರದಲ್ಲೂ ಹೀಗೆ ಆಯಿತು. ಅದಕ್ಕೂ ಮೊದಲು ಕಲ್ಯಾಣದ ಬಿಜ್ಜಳನನ್ನು ಇದೆ ಪೇಶ್ವೆ ಮನಸ್ಥಿತಿಯ ಜನರೆ ಕೊಲೆ ಮಾಡಿದರು. ಈಗ ನನ್ನ ವಿಚಾರಕ್ಕೂ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
    ಇದಕ್ಕೆ ಅಡ್ಡಿಯಿಲ್ಲ ಬನ್ನಿ, ಬಂದದ್ದು ಒಳ್ಳೆಯದೆ ಆಯಿತು. ರಾಜ್ಯದ ಜನ ನೋಡುತ್ತಿದ್ದಾರೆ. ದಮನಿತ ವರ್ಗಗಳ ಜನಸಮೂಹದಿಂದ ಬಂದವರು ರಾಜಕಾರಣವನ್ನೆ ಮಾಡಬಾರದೆಂಬ ನಿಲುವು ನಿಮ್ಮದಾಗಿದೆ ಆದ್ದರಿಂದಲೆ ಈ ರೀತಿ ಮುಡಾ ವಿಚಾರದಲ್ಲಿ ಒಂದು ಗುಲಗಂಜಿಯಷ್ಟು ನ್ಯೂನ್ಯತೆಯಿಲ್ಲದಿದ್ದರೂ ದೊಡ್ಡ ಸುದ್ದಿ ಮಾಡಿಕೊಂಡು ಕೂತಿದ್ದಾರೆ ಎಂದು‌ ಆಪಾದಿಸಿದರು
    ಸದನದಲ್ಲಿ ಗಲಾಟೆ ಮಾಡಿದ್ದು, ಅಸಂಸದೀಯವಾಗಿ ನಡೆದುಕೊಂಡಿದ್ದು, ಸಾರ್ವಜನಿಕರ ಹಣ ಪೋಲು ಮಾಡಿದ್ದು ಬಿಟ್ಟರೆ ಒಂದೇ ಒಂದು ದಾಖಲೆ ನೀಡಲಿಲ್ಲ. ದಾಖಲೆ ನೀಡದೆ, ಏನಾದರೂ ದಾಖಲೆಗಳಿದ್ದರೆ ಅವುಗಳನ್ನು ಬಿಡುಗಡೆ ಮಾಡದೆ ಬರೀ ಜಕ್ಕರಾಯನಕೆರೆ ಭಾಷಣ ಮಾಡುವ ಮೂಲಕ ಕಾಲಹರಣ ಮಾಡಿದರು ಎಂದು ದೂರಿದರು.
    ಬಿಜೆಪಿ ಜೆಡಿಎಸ್‌ನವರು ಯಾವುದೇ ದಾಖಲೆಗಳಿಲ್ಲದೆ ಎರಡು ವಾರಗಳ ಕಾಲ ಸದನವನ್ನು ದಿಕ್ಕುತಪ್ಪಿಸಿದರು. ಸಂಸದೀಯ ಪ್ರಜಾಪ್ರಭುತ್ವವು ಯಾವುದಕ್ಕೆ ಮಾದರಿಯಾಗಬಾರದೊ ಅದಕ್ಕೆ ಬಿಜೆಪಿಯವರು ಮಾದರಿಯಾದರು. ಇಂಥ ಬೇಜವಾಬ್ಧಾರಿ ವರ್ತನೆಯ ವಿರೋಧ ಪಕ್ಷವನ್ನು ನಾನು ನೋಡಿಯೇ ಇಲ್ಲ ಎಂದು ಕಿಡಿಕಾರಿದರು.
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ತಮ್ಮ ಪತ್ನಿಗೆ ಬದಲಿ ನಿವೇಶನ ಹಂಚಿಕೆ ಮಾಡಿರುವುದರಲ್ಲಿ ಯಾವ ಅಕ್ರಮವೂ ನಡೆದಿಲ್ಲ. ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ತಮ್ಮ ಪಾತ್ರವೂ ಇಲ್ಲ ಎಂದು ಸ್ಪಷ್ಟಪಡಿಸಿದರು
    ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ ನನ್ನ ಪತ್ನಿ ಪಾರ್ವತಿ ಹೆಸರಿನಲ್ಲಿದ್ದ 3 ಎಕರೆ 16 ಗುಂಟೆ ಜಮೀನನ್ನು ಮುಡಾ ಒತ್ತುವರಿ ಮಾಡಿಕೊಂಡು ಬಡಾವಣೆ ನಿರ್ಮಿಸಿತ್ತು.ಅದಕ್ಕೆ ಪರಿಹಾರವಾಗಿ ಬದಲಿ ನಿವೇಶನ ಹಂಚಿಕೆ ಮಾಡಿದೆ. ಇದರಲ್ಲಿ ಅಕ್ರಮ ಏನಿದೆ’ ಎಂದು ಪ್ರಶ್ನಿಸಿದರು.
    ಪರಿಶಿಷ್ಟ ಜಾತಿಯ ಜವರ ಎಂಬುವವರು 1935ರಲ್ಲಿ ಸರ್ಕಾರಿ ಹರಾಜಿನಲ್ಲಿ ಸದರಿ ಜಮೀನನ್ನು ಖರೀದಿಸಿದ್ದರು. ಅವರಿಗೆ ಮೂರು ಜನ ಮಕ್ಕಳಿದ್ದರು. ಜವರ ಮೃತರಾದ ಬಳಿಕ ಕುಟುಂಬದ ಇತರ ಸದಸ್ಯರ ಒಪ್ಪಿಗೆ ಮೇರೆಗೆ ದೇವರಾಜು ಎಂಬ ಮಗನಿಗೆ ಜಮೀನಿನ ಖಾತೆ ವರ್ಗಾವಣೆ ಆಗಿತ್ತು. ಅವರಿಂದ ನನ್ನ ಪತ್ನಿಯ ಅಣ್ಣ ಮಲ್ಲಿಕಾರ್ಜುನಸ್ವಾಮಿ ಖರೀದಿಸಿದ್ದರು. ಇದು ಹರಾಜಿನಲ್ಲಿ ಖರೀದಿಸಿದ ಜಮೀನು ಆಗಿರುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಜಮೀನು ಖರೀದಿ ನಿಷೇಧ (ಪಿಟಿಸಿಎಲ್) ಕಾಯ್ದೆ ಅನ್ವಯ ಆಗುವುದಿಲ್ಲ ಎಂದು ವಿವರಿಸಿದರು.
    ಕೆಸರೆ ಗ್ರಾಮದ 3 ಎಕರೆ 16 ಗುಂಟೆ ಜಮೀನಿನ ಸ್ವಾಧೀನಕ್ಕೆ ಮುಡಾ 1992ರಲ್ಲಿ ಪ್ರಾಥಮಿಕ ಅಧಿಸೂಚನೆ ಮತ್ತು 1997ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಜಮೀನು ಮಾಲೀಕರ ಮನವಿಯಂತೆ ಸದರಿ‌ ಜಮೀನನ್ನು ಡಿನೋಟಿಫೈ ಮಾಡಿ 1997ರಲ್ಲಿ ಆದೇಶ ಹೊರಡಿಸಲಾಗಿತ್ತು ಎಂದು ದಾಖಲೆ ಪ್ರದರ್ಶಿಸಿದರು.
    2005ರಲ್ಲಿ ಈ‌ ಜಮೀನು ಖರೀದಿಸಿದ್ದ ಮಲ್ಲಿಕಾರ್ಜುನ ಸ್ವಾಮಿ, ಭೂ ಪರಿವರ್ತನೆಯನ್ನೂ ಮಾಡಿಸಿದ್ದರು. 2006ರಲ್ಲಿ ತಮ್ಮ ಪತ್ನಿ ಪಾರ್ವತಿ ಅವರಿಗೆ ದಾನಪತ್ರ ಮಾಡಿಕೊಟ್ಟಿದ್ದರು ಎಂದರು.
    ಈ ಜಮೀನನ್ನು ಮುಡಾ ಒತ್ತುವರಿ ಮಾಡಿರುವುದು 2013ರಲ್ಲಿ ನಮ್ಮ ಕುಟುಂಬಕ್ಕೆ ಗೊತ್ತಾಯಿತು. ಬಳಿಕ ಬದಲಿ ಜಮೀನು ಕೊಡುವಂತೆ ಪಾರ್ವತಿ ಮುಡಾಕ್ಕೆ ಅರ್ಜಿ ಸಲ್ಲಿಸಿದ್ದರು‌. 2014 ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಬದಲಿ ನಿವೇಶನ ಕೋರಿರುವ ವಿಷಯವನ್ನು ಪತ್ನಿ ತಿಳಿಸಿದ್ದರು. ಮುಖ್ಯಮಂತ್ರಿ ಹುದ್ದೆಯಲ್ಲಿದ್ದು ಆ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದಿದ್ದೆ. ಸದರಿ ಕಡತದ ಬಗ್ಗೆ ನನ್ನ ಬಳಿ ಚರ್ಚಿಸದಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದೆ’ ಎಂದು ತಿಳಿಸಿದರು.
    ಬದಲಿ ನಿವೇಶನ ಹಂಚಿಕೆ ಮಾಡಿರುವುದು ಬಿಜೆಪಿ ಆಡಳಿತದ ಅವಧಿಯಲ್ಲಿ. ಬಿಜೆಪಿ ಶಾಸಕರಾಗಿದ್ದ ಎಸ್.ಎ. ರಾಮದಾಸ್, ನಾಗೇಂದ್ರ, ಜೆಡಿಎಸ್ ಶಾಸಕರಾಗಿದ್ದ ಜಿ.ಟಿ. ದೇವೇಗೌಡ ಉಪಸ್ಥಿತರಿದ್ದ ಮುಡಾ ಆಡಳಿತ ಮಂಡಳಿ ಸಭೆಯಲ್ಲಿ ನಿವೇಶನ ಹಂಚಿಕೆ ನಿರ್ಣಯ ಕೈಗೊಳ್ಳಲಾಗಿತ್ತು’ ಎಂದರು.
    ಇಂತಹದ್ದೇ ಪ್ರಕರಣದಲ್ಲಿ ಸುಂದರಮ್ಮ ಎಂಬುವವರಿಗೆ ಪೂರ್ಣ ವಿಸ್ತೀರ್ಣದ ಜಮೀನು ಪರಿಹಾರ ನೀಡಲಾಗಿದೆ. ತಮ್ಮ ಪತ್ನಿಗೆ ಶೇಕಡ 50ರಷ್ಟು ಪರಿಹಾರ ಮಾತ್ರ ನೀಡಲಾಗಿದೆ. ಇದರಲ್ಲಿ ತಮ್ಮ ತಪ್ಪೇನಿದೆ ಎಂದು ಪ್ರಶ್ನಿಸಿದರು.
    2023ರ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ಹತಾಶರಾಗಿದ್ದಾರೆ. ಆ ಕಾರಣದಿಂದ ತಮ್ಮ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಅದರ ಭಾಗವಾಗಿಯೇ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
    ಕುಟುಂಬದಲ್ಲಿ ಅನ್ಯೋನ್ಯರಾಗಿದ್ದವರನ್ನು ಪರಸ್ಪರ ಎತ್ತಿ ಕಟ್ಟಿ ಮನೆ ಮುರುಕ ರಾಜಕಾರಣ ಮಾಡಿದರೆ ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಇದರಲ್ಲಿ ನನ್ನದಾಗಲಿ, ನಮ್ಮ ಪತ್ನಿಯವರದ್ದಾಗಲಿ, ನಮ್ಮ ಬಾಮೈದುನನ ಪಾತ್ರ ಎಲ್ಲಿದೆ ಹೇಳಿ” ಎಂದು ಪ್ರಶ್ನಿಸಿದರು

    Bangalore BJP BJP-JDS Government JDS Karnataka News Politics Trending Varthachakra ಕಾಂಗ್ರೆಸ್ ಕಾನೂನು ಕೊಲೆ ಚುನಾವಣೆ ಜೆಡಿಎಸ್ ದೇವೇಗೌಡ ಧರ್ಮ ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಂಸತ್ ಭವನದ ಮುಂದೆ ರಾಜ್ಯ ಬಿಜೆಪಿ ಸಂಸದರ ಧರಣಿ.
    Next Article ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟ ಮತ್ತೊಮ್ಮೆ ಬಹಿರಂಗ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • overseas pharmacies ರಲ್ಲಿ ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    • 1xbet ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • online drugstore ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe