ಬೆಂಗಳೂರು, ಜೂ.26:
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳು ಅಸಹಜವಾಗಿ ಮೃತಪಟ್ಟಿವೆ
ಬುಧವಾರ ಹುಲಿಗಳ ಮೃತದೇಹಗಳು ಪತ್ತೆಯಾಗಿದ್ದು ಮೇಲ್ನೋಟಕ್ಕೆ ವಿಷಪ್ರಾಶನದಿಂದ ಹುಲಿಗಳು ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.
ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.
ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.
Previous Articleಮಂತ್ರಿ ಕೆ.ಎನ್.ರಾಜಣ್ಣ ಹೇಳಿದ ಭವಿಷ್ಯ
Next Article ಕಾಲ್ತುಳಿತದ ಕಾರಣ ಹೇಳಿದ ದಯಾನಂದ್.
1 ಟಿಪ್ಪಣಿ
A Med Spa in Little Elm offers a sanctuary for rejuvenation and relaxation, blending medical expertise with spa luxury. Specializing in facial services, it provides a range of treatments tailored to individual skincare needs. Among them, the deep cleansing facial stands out as a transformative experience, targeting impurities and revitalizing the skin’s natural radiance. With the latest techniques and premium products, it ensures the best facial treatment in Little Elm, leaving clients feeling refreshed, renewed, and glowing with confidence.