ಹುಬ್ಬಳ್ಳಿ,ಡಿ. 20-
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಬಿಜೆಪಿಯ ಸಿ.ಟಿ. ರವಿ ಅವರ ನಡುವಿನ ವಿವಾದಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪೋಟಕ ತಿರುವು ನೀಡಿದ್ದಾರೆ
ಬೆಳಗಾವಿಯಲ್ಲಿ ನಡೆದ ವಿದ್ಯಮಾನಗಳ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂತ್ರಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿಯ ಸಿ.ಟಿ.ರವಿ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿ ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತಾಗಿ ಯಾವುದೇ ಆಡಿಯೋ ರೆಕಾರ್ಡ್ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ವರು ಸದಸ್ಯರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರು ನೀಡಿರುವ ದೂರನ್ನೂ ಪಡೆದಿದ್ದೇನೆ ಅದನ್ನು ಪರಿಶೀಲಿಸಲಾಗುತ್ತಿದೆ…