ಬೆಂಗಳೂರು,ನ.29-
ಹಿರಿಯ ಪತ್ರಕರ್ತ ಹಾಗೂ ಉದ್ಯಮಿ ಕೆ.ಎನ್. ಶಾಂತಕುಮಾರ್ ಅವರಿಗೆ ರಾಜ್ಯ ಹೈಕೋರ್ಟ್‌ನಲ್ಲಿ ಗೆಲುವು ಲಭಿಸಿದೆ
ಇನ್ನೂರು ರೂಪಾಯಿ ಹಿಂಬಾಕಿ ಪಾವತಿಸಿಲ್ಲ ಎಂಬ ಕಾರಣಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷ ಹುದ್ದೆಗೆ ಸಲ್ಲಿಸಿದ ನಾಮಪತ್ರವನ್ನು ಪುರಸ್ಕರಿಸಲು ಸೂಚಿಸಿರುವ ಕೋರ್ಟ್ ನಿಗದಿಯಂತೆ ಚುನಾವಣೆ ನಡೆಸಲು ಆದೇಶಿಸಿದೆ.
ಚಂದಾ ಹಣ ಪಾವತಿಸಿಲ್ಲ ಎಂಬ ಕಾರಣ ನೀಡಿ ತಮ್ಮ ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ ಕ್ರಮ ಪ್ರಶ್ನಿಸಿ ಕೆ.ಎನ್.ಶಾಂತಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಪ್ರಕಟಿಸಿದೆ.
ಕೆಎಸ್‌ಸಿಎ ಚುನಾವಣೆಯಲ್ಲಿ
ಚುನಾವಣೆಗೆ ಈಗಾಲೇ ನೀಡಿರುವ ವೇಳಾಪಟ್ಟಿಯಂತೆ ಡಿ.7 ರಂದೇ ಮತದಾನ ನಡೆಸಲು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.
ಕೆ.ಎನ್.ಶಾಂತಕುಮಾರ್ ಸಲ್ಲಿಸಿರುವ ಅರ್ಜಿಯನ್ನು ಎರಡು ದಿನಗಳ ಹಿಂದೆ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡು, ಎರಡು ಕಡೆಯ ವಾದ-ವಿವಾದವನ್ನು ಆಲಿಸಿ ತೀರ್ಪು ಕಾಯ್ದಿರಿಸಿತ್ತು.ಇಂದು ತೀರ್ಪು ನೀಡಿದೆ. ಆದರೆ ಈಗಾಗಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (ಕೆಎಸ್‌ಸಿಎ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದೀಗ ಕೋರ್ಟ್ ಈ ಆದೇಶವನ್ನು ನೀಡಿರುವುದು ಗೊಂದಲಕ್ಕೆ ಕಾರಣವಾಗಿದೆ

