ಮಹಾರಾಷ್ಟ್ರ; ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ನಡುವೆ ಕೇಂದ್ರ ಸರ್ಕಾರ ಶಿವಸೇನೆಯ 15 ಮಂದಿ ಬಂಡಾಯ ಶಾಸಕರಿಗೆ ‘Y+’ ಶ್ರೇಣಿಯ ಸಿಆರ್‌ಪಿಎಫ್ ಭದ್ರತೆ ಒದಗಿಸಿದೆ.
ಬಂಡಾಯ ಶಾಸಕರಿಗೆ ಸೂಕ್ತ ಭದ್ರತೆ ಕಲ್ಪಿಸುವಂತೆ ರಾಜಕೀಯ ಮುಖಂಡರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.
ಇನ್ನು ಮಹಾ ವಿಕಾಸ್ ಆಘಾಡಿ (ಎಂವಿಎ) ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ಏಕನಾಥ ಶಿಂಧೆ ನೇತೃತ್ವದ 40ಕ್ಕೂ ಹೆಚ್ಚು ಶಾಸಕರು ಗುವಾಹಟಿಯ ರ್‍ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಬೀಡುಬಿಟ್ಟಿದ್ದಾರೆ. ಒಟ್ಟಿನಲ್ಲಿ ಮಹಾರಾಷ್ಟ್ರದಲ್ಲಿ ಅಧಿಕಾರದ ಚುಕ್ಕಾಣಿಗಾಗಿ ದೊಡ್ಡ ಹಣಾಹಣಿಯೇ ನಡೆಯುತ್ತಿದೆ.