ಬೆಂಗಳೂರು – ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮುರುಘಾ ಶರಣರ ಬಂಧನವಾಗಿರುವುದಕ್ಕೆ ಅತೀವ ಬೇಸರ ಹೊರಹಾಕಿರುವ ಕಂದಾಯ ಸಚಿವ ಆರ್ .ಆಶೋಕ್ ಶ್ರದ್ದಾ ಕೇಂದ್ರಗಳಾಗಿರುವ ಮಠಗಳಲ್ಲಿ ಇಂತಹದೆಲ್ಲಾ ನಡೆಯಬಾರದು ಎಂದು ಹೇಳಿದ್ದಾರೆ.
ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅಶೋಕ್ ಮಾತನಾಡಿ, ಮಠಗಳ ಬಗ್ಗೆ ಗೌರವ ಇರುತ್ತೆ. ಮಠಗಳಲ್ಲಿ ಈ ರೀತಿ ಆಗಬಾರದು. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡುತ್ತಾರೆ ಎಂದರು.
ಕಾನೂನಿನಿಂದ ಏನು ಕ್ರಮ ಕೈಗೊಳ್ಳಬೇಕು ಕೈಗೊಳ್ಳಲಾಗುತ್ತೆ. ಇದರಲ್ಲಿ ಸರ್ಕಾರ ಎಂಟ್ರಿ ಕೊಡುವುದಿಲ್ಲ. ಕಾನೂನು ತನ್ನದೇ ಆದ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದೆ. ಈ ನೆಲದ ಕಾನೂನು ಏನಿದೆಯೋ ಅದನ್ನ ಸರ್ಕಾರ ಪಾಲನೆ ಮಾಡಲಿದೆ. ಪೊಲೀಸರು ಕಾನೂನಿನ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.