01 MAY 2024:
ʻಪದ್ಮ ವಿಭೂಷಣʼ, ʻಪದ್ಮಭೂಷಣʼ ಮತ್ತು ʻಪದ್ಮಶ್ರೀʼ ಪುರಸ್ಕಾರಗಳನ್ನು ಒಳಗೊಂಡ ʻಪದ್ಮ ಪ್ರಶಸ್ತಿʼಯು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾಗಿದೆ. 1954ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಎಲ್ಲಾ ಕ್ಷೇತ್ರಗಳು / ವಿಭಾಗಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು / ಸೇವೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರು. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ (ಪಿಎಸ್ಯು) ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ.
ಪದ್ಮ ಪ್ರಶಸ್ತಿಗಳನ್ನು ‘ಜನತೆಯ ಪದ್ಮ’ ಆಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ, ಎಲ್ಲಾ ನಾಗರಿಕರು ನಾಮನಿರ್ದೇಶನಗಳು / ಶಿಫಾರಸುಗಳನ್ನು ಮಾಡಲು ವಿನಂತಿಸಲಾಗಿದೆ. ಸ್ವಯಂ ನಾಮನಿರ್ದೇಶನವನ್ನೂ ಮಾಡಬಹುದು. ಮಹಿಳೆಯರು, ಸಮಾಜದ ದುರ್ಬಲ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ದಿವ್ಯಾಂಗ ವ್ಯಕ್ತಿಗಳು ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಲು ಸಂಘಟಿತ ಪ್ರಯತ್ನಗಳನ್ನು ಮಾಡಬಹುದು.
ನಾಮನಿರ್ದೇಶನಗಳು / ಶಿಫಾರಸುಗಳು ಮೇಲೆ ತಿಳಿಸಿದ ಪೋರ್ಟಲ್ನಲ್ಲಿ ಲಭ್ಯವಿರುವ ಸ್ವರೂಪದಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಸಂಬಂಧಿತ ವಿವರಗಳನ್ನು ಒಳಗೊಂಡಿರಬೇಕು. ಇದು ನಿರೂಪಣೆ ರೂಪದಲ್ಲಿ ಉಲ್ಲೇಖವನ್ನು (ಗರಿಷ್ಠ 800 ಪದಗಳು) ಹೊಂದಿರಬೇಕು ಮತ್ತು ಸಂಬಂಧಿತ ಕ್ಷೇತ್ರ / ವಿಭಾಗದಲ್ಲಿ ಶಿಫಾರಸು ಮಾಡಲಾದ ವ್ಯಕ್ತಿಯ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು / ಸೇವೆಯನ್ನು ಸ್ಪಷ್ಟವಾಗಿ ಅನಾವರಣಗೊಳಿಸಬೇಕು.
ಈ ಸಂಬಂಧದ ವಿವರಗಳು ಗೃಹ ಸಚಿವಾಲಯದ ವೆಬ್ಸೈಟ್ http://(https://mha.gov.in) ಮತ್ತು ಪದ್ಮ ಪ್ರಶಸ್ತಿ ಪೋರ್ಟಲ್ನಲ್ಲಿ http://(https://padmaawards.