Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 250 ಮಕ್ಕಳನ್ನು ಮಾರಾಟ‌ ಮಾಡಿದ ಕೇಡಿಗಳು | Child Trafficking
    Viral

    250 ಮಕ್ಕಳನ್ನು ಮಾರಾಟ‌ ಮಾಡಿದ ಕೇಡಿಗಳು | Child Trafficking

    vartha chakraBy vartha chakraನವೆಂಬರ್ 30, 2023Updated:ಡಿಸೆಂಬರ್ 2, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.30- ರಾಜ್ಯವನ್ನು ಬೆಚ್ಚಿ ಬೀಳಿಸಿದ ಹಸುಗೂಸು ಮಾರಾಟ (Child Trafficking ) ಜಾಲದ‌ ಬಂಧಿತ ಆರೋಪಿಗಳು ಇದುವರೆಗೆ 250ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿರುವ ಅಘಾತಕಾರಿ‌ ಸಂಗತಿಯು ಸಿಸಿಬಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
    ಹಸುಗೂಸು ಮಾರಾಟ ಜಾಲದ ಆರೋಪಿಗಳು 50 ರಿಂದ60 ಮಕ್ಕಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಿದರೆ, ಉಳಿದ ಮಕ್ಕಳನ್ನು ತಮಿಳುನಾಡಿನಲ್ಲಿ ಮಾರಾಟ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

    ಈ ಆರೋಪಿಗಳು ವಿಚಾರಣೆಯಲ್ಲಿ ಕಳೆದ  3 ವರ್ಷಗಳಲ್ಲಿ 250 ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿದ ವಿಚಾರವನ್ನು ಬಾಯಿಬಿಡುತ್ತಿದ್ದಂತೆ ತನಿಖೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಕರ್ನಾಟಕದಲ್ಲಿ ಮಾರಾಟ ಆಗಿರುವ ಮಕ್ಕಳ ಬಗ್ಗೆ ಆರೋಪಿಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ.
    ಸದ್ಯ 10 ಮಕ್ಕಳ ಸುಳಿವು ಸಿಕ್ಕಿದ್ದು, ಉಳಿದ ಮಕ್ಕಳನ್ನು ಎಲ್ಲಿ, ಯಾರಿಗೆ ಮಾರಾಟ ಮಾಡಲಾಗಿದೆ ಎಂದು ವಿಚಾರಣೆ ನಡೆಸುತ್ತಿದ್ದಾರೆ.

    ಕೋಟಿಗಟ್ಟಲೆ ಆಸ್ತಿ:
    ಜಾಲದ ಕರ್ನಾಟಕದ ಗ್ಯಾಂಗ್ ಲೀಡರ್ ಮಹಾಲಕ್ಷ್ಮೀ ನಾಲ್ಕೈದು ವರ್ಷಗಳ ಹಿಂದೆ ಬಾಡಿಗೆ ಮನೆಯಲ್ಲಿ ಇದ್ದುಕೊಂಡು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡಿಕೊಂಡಿದ್ದರು ಈಗ ಮಕ್ಕಳ ಮಾರಾಟ ಜಾಲದಿಂದ ಕೋಟ್ಯಾಧಿಪತಿಯಾಗಿದ್ದಾಳೆ. 2017 ರಿಂದಲೂ ಈ ದಂಧೆಯನ್ನು ಮಾಡುತ್ತಾ ಇರುವ ಮಹಾಲಕ್ಷ್ಮೀ, ಇಂದು ಸ್ವಂತ ಮನೆ, ಕಾರು ಜೊತೆಗೆ ಮೈತುಂಬಾ ಚಿನ್ನಾಭರಣ ಹೊಂದಿದ್ದಾಳೆ.
    2015 ರಿಂದ 2017 ರವರೆಗೂ ಗಾರ್ಮೆಟ್ಸ್ನಲ್ಲಿ ಕೇವಲ 8 ಸಾವಿರ ಸಂಬಳಕ್ಕೆ ಕೆಲಸ ಮಾಡುತ್ತಿದ್ದ ವೇಳೆ ಆಕೆಯ ಪರಿಚಯವಾದ ಮಹಿಳೆಯೊಬ್ಬರು ಅಂಡಾಣು ಕೊಟ್ಟರೇ ಹಣ ಕೊಡುವುದಾಗಿ ಕೇಳಿದ್ದಳು.ಆಗ ಅಂಡಾಣು ನೀಡಿದ್ದ ಮಹಾಲಕ್ಷ್ಮೀಗೆ ಸುಮಾರು 20 ಸಾವಿರ ನೀಡಿದ್ದಳು. ನಂತರ ದಿನಗಳಲ್ಲಿ ಅಂಡಾಣು ಕೊಡುವರನ್ನು ಪತ್ತೆ ಮಾಡಿ ಅದರಿಂದ ಕಮೀಷನ್ ಪಡೆಯುವ ಕೆಲಸ ಮಾಡಿಕೊಂಡಿದ್ದಳು ಎಂಬ ವಿಚಾರವೂ ತನಿಖೆಯಿಂದ ತಿಳಿದುಬಂದಿದೆ.

    ಆರೋಪಿಗಳು 2021 ರಿಂದಲೂ  ಬಾಡಿಗೆ ತಾಯಿಯಾಗಿ ಮಕ್ಕಳನ್ನು ಕೊಡಿಸುವ ಏಜೆಂಟ್ ಗಳಾಗಿ ಕೆಲಸ ಮಾಡುತ್ತಿದ್ದು, 2021 ರ ಬಳಿಕ ಯಾರು ಗರ್ಭಪಾತ ಮಾಡಿಸಲು  ಆಸ್ಪತ್ರೆಗೆ ಬರಲಿದ್ದಾರೆ ಎನ್ನುವ ಮಾಹಿತಿಯನ್ನು ತಿಳಿದು ಅವರನ್ನು ಸಂಪರ್ಕಿಸಿ  ಅವರಿಗೆ ಗರ್ಭಪಾತ ಮಾಡಿಸಬೇಡಿ, ನಾವು ನೋಡಿಕೊಳ್ಳುವಾಗಿ ಮಗು ಆಗುವವರೆಗೂ ಖರ್ಚು ವೆಚ್ಚ ಎಲ್ಲವೂ ನಮ್ಮದೆ ಹೆರಿಗೆ ಬಳಿಕ ಮಗುವನ್ನು ನಮಗೆ ಕೊಡಿ ಅಂತ ಮನವೊಲಿಕೆ ಮಾಡಿ. ಹೆಣ್ಣು‌ ಮಗುವಿಗೆ 2 ಲಕ್ಷ, ಗಂಡು ಮಗುವಿಗೆ 3 ಲಕ್ಷ ಕೊಡುವ ಒಪ್ಪಂದ ಮಾಡಿ ಆ ಮಕ್ಕಳನ್ನು ಹೊರಗಡೆ 8ರಿಂದ 10 ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು.

    ಪಗಿರಾಕಿಗಳಿಗೆ ಗಾಳ:
    ಬಂಧಿತರು ಮಗು ಹುಟ್ಟಿದ ಬಳಿಕ ತಾಯಿಗೆ ಒಪ್ಪಂದದಂತೆ ಆಕೆಗೆ ಹಣ ಕೊಟ್ಟು, ಆ ಮಕ್ಕಳ ಫೋಟೋಗಳನ್ನು ಅವರದ್ದೇ ಗ್ರೂಪಲ್ಲಿ ಹಾಕಿ ಶೇರ್ ಮಾಡುವಂತೆ ಹೇಳಿ ಕಿರಾಕಿಗಳಿಗೆ ಗಾಳ ಹಾಕುತ್ತಿದ್ದರು, ಮಗುವಿನ ಅಗತ್ಯವಿರುವವರು ಅವರನ್ನು ಸಂಪರ್ಕಿಸಿದರೆ,ಅವರೊಂದಿಗೆ ಇವರು ಮಾತನಾಡಿ ವ್ಯವಹಾರ ಕುದುರಿಸುತ್ತಿದ್ದರು. ಮಗುವಿನ ಲಿಂಗ, ಬಣ್ಣದ ಮೇಲೆ ಬೆಲೆ ನಿಗಧಿ ಮಾಡಲಾಗುತ್ತಿತ್ತು.
    ಹೆಣ್ಣು ಮಗು ಆದರೆ 4ರಿಂದ 6 ಲಕ್ಷ, ಗಂಡು ಮಗು ಆದರೆ, 8ರಿಂದ 10 ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಇನ್ನು ಆರೋಪಿಗಳಲ್ಲಿ ಮುರುಗೇಶ್ವರಿ ತನ್ನದೇ ಮಗುವನ್ನು ಮಾರಾಟ ಮಾಡಲು ಮುಂದಾಗಿದ್ಳು ಜನನ ಪತ್ರವೂ ಮಾಡಿಕೊಡುವುದು ತನಿಖೆ ವೇಳೆ ಬಯಲಾಗಿದೆ.

    Verbattle
    Verbattle
    Verbattle
    child Child Trafficking Government Karnataka News traffic Trending ಕಲೆ ಕಾರು ಚಿನ್ನ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರಿಗಳ ಮೈ ಚಳಿ ಬಿಡಿಸಿದ ಮಂತ್ರಿ ಕೆ.ಜೆ.ಜಾರ್ಜ್ | KJ George
    Next Article ಅಕ್ರಮ ಕಟ್ಟಡ ಸಕ್ರಮಕ್ಕೆ ಸಿದ್ಧತೆ | Akrama Sakrama
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • Jeffreymaf ರಲ್ಲಿ ಮೆಟ್ರೋದಲ್ಲಿ ಹೀಗೆಲ್ಲಾ ಮಾಡುತ್ತಾರೆ ಹುಷಾರ್..
    • kvartira-borisovpoisk ರಲ್ಲಿ ಮಂತ್ರಿ ರಾಜಣ್ಣ ಯಾಕೆ ಹೀಗಾಡುತ್ತಿದ್ದಾರೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.