Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಗೆ ತಲೆ ನೋವಾದ ಐದು ಕ್ಷೇತ್ರಗಳು | BJP
    Trending

    ಬಿಜೆಪಿಗೆ ತಲೆ ನೋವಾದ ಐದು ಕ್ಷೇತ್ರಗಳು | BJP

    vartha chakraBy vartha chakraಮಾರ್ಚ್ 20, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.20- ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುವ ಮೂಲಕ ದಾಖಲೆ ನಿರ್ಮಿಸಬೇಕು ಎಂದು ಹವಣಿಸುತ್ತಿರುವ ಬಿಜೆಪಿಗೆ ಬೆಳಗಾವಿ ಸೇರಿದಂತೆ ಐದು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ.
    ಪ್ರಮುಖವಾಗಿ ಬೆಳಗಾವಿ ಉತ್ತರ ಕನ್ನಡ ರಾಯಚೂರು ಚಿತ್ರದುರ್ಗ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್ ಗೆ ತಲೆನೋವು ತಂದಿದೆ ಈ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಘಟಾನುಘಟಿ ನಾಯಕರು ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ಈ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಕೊಟ್ಟರು ಬಂಡಾಯ ಕಟ್ಟಿಟ್ಟ ಬುತ್ತಿ ಎಂಬ ವಾತಾವರಣ ಸೃಷ್ಟಿಯಾಗಿದ್ದು ಅದಕ್ಕೆ ಅವಕಾಶ ಕೊಡದ ರೀತಿಯಲ್ಲಿ ಟಿಕೆಟ್ ಹಂಚಿಕೆ ಮಾಡಲು ಹೈಕಮಾಂಡ್ ಚರ್ಚೆ ನಡೆಸಿದೆ.

    ಬೆಳಗಾವಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ ಆದರೆ ಇವರಿಗೆ ಟಿಕೆಟ್ ಕೊಡುವುದಕ್ಕೆ ಹಾಲಿ ಶಾಸಕರಾದ ಅಭಯ ಪಾಟೀಲ್ ಮಾಜಿ ಶಾಸಕ ಮಹಾಂತೇಶ ಕವಟಗಿಮಠ ಸಂಜಯ್ ಪಾಟೀಲ್ ಪ್ರಭಾಕರ ಕೋರೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
    ಶೆಟ್ಟರ್ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸುತ್ತಿರುವ ನಾಯಕರ ಜೊತೆ ಮಾತನಾಡಿ ಬಿಕ್ಕಟ್ಟು ಬಗೆಹರಿಸುವಂತೆ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದೆ.

    ಮತ್ತೊಂದೆಡೆ ಉತ್ತರ ಕನ್ನಡ ಕ್ಷೇತ್ರದಿಂದ ಕಣಕ್ಕಿಳಿಯಲು ಹಾಲಿ ಸಂಸದ ಅನಂತಕುಮಾರ್ ಹೆಗಡೆ ಪಟ್ಟು ಹಿಡಿದಿದ್ದಾರೆ ಇದಕ್ಕೆ ಪ್ರತಿಯಾಗಿ ಮಾಜಿ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಟಿಕೆಟಿಗಾಗಿ ಪ್ರಬಲ ಲಾಭಿ ನಡೆಸಿದ್ದಾರೆ. ಹೀಗಾಗಿ ಒಮ್ಮತದ ಆಯ್ಕೆ ಕಷ್ಟವಾಗಿದೆ.
    ರಾಯಚೂರಿನಲ್ಲಿ ಹಾಲಿ ಸಂಸದ ಅಮರಸಿಂಹ ನಾಯಕ್ ಮತ್ತೊಮ್ಮೆ ಕಣಕ್ಕಿಳಿಯಲು ಬಯಸಿದ್ದಾರೆ ಆದರೆ ಈ ಕ್ಷೇತ್ರದಿಂದ ಮಾಜಿ ಸಂಸದ ಬಿ. ವಿ. ನಾಯಕ್ ಟಿಕೆಟಿಗೆ ಬೇಡಿಕೆ ಸಲ್ಲಿಸಿದ್ದಾರೆ ಇವರಲ್ಲಿ ಯಾರಿಗೆ ಟಿಕೆಟ್ ಕೊಟ್ಟರು ಬಂಡಾಯ ಕಟ್ಟಿಟ್ಟ ಬುತ್ತಿ ಟಿಕೆಟ್ ವಂಚಿತರು ಕಾಂಗ್ರೆಸ್ ಸೇರಿ ಬಿಜೆಪಿ ಅಭ್ಯರ್ಥಿ ವಿರುದ್ಧ ಕೆಲಸ ಮಾಡುವುದು ಖಚಿತವಾಗಿದೆ.
    ಚಿತ್ರದುರ್ಗ ಕ್ಷೇತ್ರದಲ್ಲೂ ಇದೇ ರೀತಿಯಲ್ಲಿ ಪೈಪೋಟಿ ಉಂಟಾಗಿದ್ದು ಕೇಂದ್ರ ಸಚಿವ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಿದರೆ ಕಷ್ಟ ಎನ್ನುವ ವರದಿಗಳು ತಲುಪಿದೆ.

    ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಪುತ್ರ ಅಲೋಕ್ ವಿಶ್ವನಾಥ್ ಅವರ ನಡುವೆ ಟಿಕೆಟ್ ಪಡೆಯಲು ತೀವ್ರ ಸ್ಪರ್ಧೆ ಏರ್ಪಟ್ಟಿತ್ತು.ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡಿದರೆ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದೆಂಬ ಹಿನ್ನೆಲೆಯಲ್ಲಿ ಇಬ್ಬರ ಜಗಳ ಮೂರನೇಯವರಿಗೆ ಲಾಭ ಎಂಬಂತೆ ಚಿಕ್ಕಬಳ್ಳಾಪುರದಿಂದ ಸದಾನಂದಗೌಡರಿಗೆ ಅದೃಷ್ಟ ಖುಲಾಯಿಸುವ ಸಂಭವವಿದೆ.
    ಇದರ ಜೊತೆಗೆ ಈಗಾಗಲೇ ಘೋಷಣೆಯಾಗಿರುವ ಅಭ್ಯರ್ಥಿಗಳ ವಿರುದ್ಧ ಬಂಡಾಯ ಸಾರಿರುವ ನಾಯಕರ ಕಾರ್ಯವೈಖರಿ ಕೂಡ ಸವಾಲಾಗಿ ಪರಿಣಮಿಸಿದ್ದು ಅವರ ಮನವೊಲಿಕೆ ಕಾರ್ಯ ನಿರಂತರವಾಗಿ ಸಾಗಿದೆ.

    ಮಾ.22ಕ್ಕೆ ಪಟ್ಟಿ:
    ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ
    ರಾಜ್ಯದ ಬಾಕಿರುವ ಐದು ಲೋಕಸಭಾ ಕ್ಷೇತ್ರಗಳಿಗೆ ಇದೇ 22ರಂದು ಕೇಂದ್ರ ವರಿಷ್ಠರು ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
    ಟಿಕೆಟ್ ಹಂಚಿಕೆ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆ ಚರ್ಚಿಸಲಾಗಿದೆ. 22ರಂದು ಪ್ರಧಾನಿ ನರೇಂದ್ರಮೋದಿ ಅವರ ಜೊತೆ ಚರ್ಚಿಸಿದ ಬಳಿಕ ಅಂತಿಮ ಪಟ್ಟಿ ಘೋಷಣೆಯಾಗಲಿದೆ ಎಂದು ತಿಳಿಸಿದರು ಬೆಳಗಾವಿ, ಉತ್ತರಕನ್ನಡ, ಕೋಲಾರ, ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚಿಸಲಾಗಿದೆ. ಕೆಲವು ಕಾರಣಗಳಿಂದ ಚಿತ್ರದುರ್ಗ ಮತ್ತು ರಾಯಚೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಬಹುತೇಕ ಮೂರು ಕ್ಷೇತ್ರಗಳಿಗೆ 22ರಂದು ಅಭ್ಯರ್ಥಿ ಹೆಸರು ಘೋಷಣೆಯಾಗಬಹುದು. ಯಾರನ್ನು ಕಣಕ್ಕಿಳಿಸಬೇಕು ಎಂಬುದನ್ನು ಪಕ್ಷವೇ ತೀರ್ಮಾನಿಸುತ್ತದೆ. ವರಿಷ್ಠರ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕು, ಪ್ರಧಾನಿ ನರೇಂದ್ರಮೋದಿ ಅವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕಾದರೆ ನಾವು ಎಲ್ಲದಕ್ಕೂ ಸಿದ್ಧರಾಗಬೇಕೆಂದು ಮನವಿ ಮಾಡಿದರು.

    ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಕೋಲಾರ ಕ್ಷೇತ್ರವನ್ನು ನಾವು ಜೆಡಿಎಸ್‍ಗೆ ಬಿಟ್ಟುಕೊಡಬೇಕು. ನಮ್ಮ ಸಂಸದರಾಗಿರುವ ಮುನಿಸ್ವಾಮಿಗೆ ಈಗಾಗಲೇ ಮಾಹಿತಿಯನ್ನು ನೀಡಲಾಗಿದೆ. ಇದಕ್ಕೆ ಅವರು ಸಮ್ಮತಿಸಿದ್ದಾರೆ. ಯಾವುದೇ ರೀತಿಯ ಅಸಮಾಧಾನವಿಲ್ಲ ಎಂದು ಬಿಎಸ್‍ವೈ ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    BJP ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleತೇಜಸ್ವಿ ಸೂರ್ಯ, ಶೋಭಾ ವಿರುದ್ಧ ಜಾಗೃತ ನಾಗರೀಕರ ದೂರು | Tejasvi Surya
    Next Article ದೇವರಿಗೆ ರೋಬೋ ಆನೆ ಕೊಟ್ಟ ಪ್ರಿಯಾಮಣಿ | Priyamani
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Daviddek ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • RicardoCor ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.