Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿರುವುದು ಶೇ.60‌ ಪರ್ಸೆಂಟ್ ಸರ್ಕಾರವಂತೆ | R Ashok
    ಸುದ್ದಿ

    ರಾಜ್ಯದಲ್ಲಿರುವುದು ಶೇ.60‌ ಪರ್ಸೆಂಟ್ ಸರ್ಕಾರವಂತೆ | R Ashok

    vartha chakraBy vartha chakraನವೆಂಬರ್ 18, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ನ.18- ರಾಜ್ಯದಲ್ಲಿ ಆಡಳಿತ ನಢಸುತ್ತಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ, ಶೇಕಡಾ 60% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರವಾಗಿದೆ. ಇಂತಹ ಸರ್ಕಾರದ ವಿರುದ್ಧ ಬೆಳಗಾವಿ ವಿಧಾನ ಮಂಡಲ ಅಧಿವೇಶನದಿಂದ ಸಮರ ಆರಂಭಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ (R Ashok) ಘೋಷಿಸಿದ್ದಾರೆ.
    ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ನಂತರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರನ್ನು ಭೇಟಿ ಮಾಡಿ,ಪಕ್ಷದ ಕಚೇರಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

    ಸರ್ಕಾರದಲ್ಲಿ ವರ್ಗಾವಣೆ ದಂಧೆ ಈಗಲೂ ಎಗ್ಗಿಲ್ಲದೆ ನಡೆಯುತ್ತಿದೆ. ನಮ್ಮ ಸರ್ಕಾರವನ್ನು 40% ಕಮಿಷನ್ ಸರ್ಕಾರ ಎಂದು ಇದೇ ಕಾಂಗ್ರೆಸ್‍ನಾಯಕರು ಆರೋಪಿಸಿದ್ದರು. ಅಂದು ಯಾವುದೇ ದಾಖಲೆಗಳನ್ನು ಇಟ್ಟುಕೊಂಡು ಆರೋಪ ಮಾಡಿರಲಿಲ್ಲ. ಈಗ ಇವರ ವರ್ಗಾವಣೆ ದಂಧೆಗೆ ದಾಖಲೆಗಳೇ ಬಹಿರಂಗಗೊಂಡಿವೆ. ನನ್ನ ಪ್ರಕಾರ ಇದು 60% ಕಮಿಷನ್ ಸರ್ಕಾರ ಎಂದು ಆಪಾದಿಸಿದರು ಬೆಳಗಾವಿ ಅಧಿವೇಶನದಿಂದಲೇ ಸರ್ಕಾರದ ವಿರುದ್ಧ ನಮ್ಮ ಹೋರಾಟ ಆರಂಭವಾಗಲಿದೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲುವುದೇ ನಮ್ಮ ಮುಂದಿರುವ ಸವಾಲು. ಅದನ್ನು ನಾವು ಮೆಟ್ಟಿ ನಿಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದರು.

    ವಿರೋಧ ಪಕ್ಷವಾಗಿ ನಾವು ಎಲ್ಲವನ್ನು ವಿರೋಧ ಮಾಡುವುದೇ ನಮ್ಮ ಕೆಲಸವಲ್ಲ. ನಾಡಿನ ಪ್ರಚಲಿತ ಸಮಸ್ಯೆಗಳ ಬಗ್ಗೆ ಜನರ ದನಿಯಾಗಿ ಸದನದಲ್ಲಿ ಹೋರಾಟ ಮಾಡುತ್ತೇವೆ. ಸರ್ಕಾರ ತಪ್ಪು ಮಾಡಿದಾಗ ಕಿವಿ ಹಿಂಡುತ್ತೇವೆ. ಅದಕ್ಕೂ ಬಗ್ಗದಿದ್ದಾಗ ಸರ್ಕಾರವನ್ನೇ ಕಿತ್ತೆಸೆಯಲು ಹಿಂದೆಮುಂದೆ ನೋಡುವುದಿಲ್ಲ ಎಂದು ಎಚ್ಚರಿಸಿದರು.
    ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಎಂದೂ ಕೂಡ ಯಾವುದೇ ಹುದ್ದೆಗೆ ಲಾಬಿ ಮಾಡಿದವನಲ್ಲ. ವರಿಷ್ಠರು ನನ್ನ ಮೇಲೆ ಯಾವ ವಿಶ್ವಾಸ ಇಟ್ಟುಕೊಂಡು ಉನ್ನತ ಸ್ಥಾನ ನೀಡಿದ್ದಾರೋ ಅವರ ಗೌರವಕ್ಕೆ ಚ್ಯುತಿ ಬರದಂತೆ ಕೆಲಸ ಮಾಡುತ್ತೇನೆ. ಪಕ್ಷದೊಳಗೆ ಏನೇ ಅಸಮಾಧಾನ ಇದ್ದರೂ ಅಸಮಾಧಾನವಿದ್ದರೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮರ್ಥ ವಿರೋಧ ಪಕ್ಷವಾಗಿ ಹೊರಹೊಮ್ಮಲಿದ್ದೇವೆ ಎಂದರು.
    ಒಂದು ರಾಜಕೀಯ ಪಕ್ಷವೆಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸಗಳು ಇದ್ದೇ ಇರುತ್ತವೆ. ಒಬ್ಬರಿಗೆ ಒಂದು ಸ್ಥಾನ ಸಿಕ್ಕಾಗ ಕೈ ತಪ್ಪಿದವರು ಅಸಮಾಧಾನಗೊಳ್ಳುವುದು ಸಹಜ. ಆದರೆ ನಮ್ಮ ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ ಇರಲಿದ್ದಾರೆ ಎಂದು ಹೇಳಿದರು.

    Government Karnataka News Politics R Ashok Trending ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಲಕ್ಷ್ಮಿ ಹೆಬ್ಬಾಳ್ಕರ್ ಗೆ ಸುತ್ತಿಕೊಳ್ಳುತ್ತಾ ಕಮೀಷನ್ ಉರುಳು | Lakshmi Hebbalkar
    Next Article ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    vartha chakra
    • Website

    Related Posts

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kraken ರಲ್ಲಿ ವರಸೆ ಬದಲಿಸಿದ ಈಶ್ವರಪ್ಪ
    • kraken ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • Scotthem ರಲ್ಲಿ ಅಕ್ರಮಗಳ ಆಗರವಾದ BBMP.
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe