Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ
    Viral

    7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ

    vartha chakraBy vartha chakraಮಾರ್ಚ್ 9, 202425 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ 9: ಮುಂದಿನ 7 ವರ್ಷಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ. ಈ ದಿಕ್ಕಿನಲ್ಲಿ ನಮ್ಮ ಸಿದ್ಧತೆಗಳು ಆಗಲೇ ಆರಂಭಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
    GKVK ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತ ಸೌರಶಕ್ತಿ ಮೇಳ ಉದ್ಘಾಟಿಸಿದರು. ಬಳಿಕ ಕುಸುಮ್ “ಬಿ” ಮತ್ತು “ಸಿ” ಯೋಜನೆಗಳ ಚಾಲನೆ ನೀಡಿ ವಿದ್ಯುತ್ ಉಪಕೇಂದ್ರಗಳನ್ನು ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
    ದೇಶದಲ್ಲೇ ಅತಿ ಹೆಚ್ಚು ಒಣಭೂಮಿ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ. ಹೀಗಾಗಿ ಒಣಭೂಮಿಯ ಕೃಷಿಗೆ ಆಧ್ಯತೆ ನೀಡಿ ಸಂಶೋಧನೆಗಳು ನಡೆಯಬೇಕು. ಜನಸಂಖ್ಯೆ ಹೆಚ್ಚಾಗಿ ರೈತರ ಬೆಳೆಗಳ ಇಳುವರಿ ಪ್ರಮಾಣ ಕಡಿಮೆ ಆಗುತ್ತಿದೆ. ಆದ್ದರಿಂದ ಸಮಗ್ರ ಕೃಷಿಗೆ ಹೆಚ್ವಿನ ಬೆಂಬಲ ನೀಡುವ ಸಲುವಾಗಿ ಕೃಷಿಯ ಉಪಕಸುಬುಗಳ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಸಹಕಾರ, ಬೆಂಬಲ ನೀಡುತ್ತಿದೆ ಎಂದು ನುಡಿದರು.‌

    ಪ್ರಸ್ತುತ ರಾಜ್ಯದಲ್ಲಿ 32 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ ಎಂದು ಘೋಷಿಸಿದರು.‌
    ಸೋಲಾರ್ ವಿದ್ಯುತ್ ಪಂಪ್ ಸೆಟ್ ಮತ್ತು ಪಾನಲ್ ಗಳಿಗೆ ರಾಜ್ಯ ಸರ್ಕಾರದ ಸಬ್ಸಿಡಿ ಮೊತ್ತವನ್ನು ಶೇ30 ರಿಂದ ಶೇ50 ಕ್ಕೆ ಹೆಚ್ಚಿಸಿದೆ. ನಮ್ಮ ಸರ್ಕಾರದ ಈ ಸೌಲಭ್ಯವನ್ನು ರೈತರು ಹೆಚ್ಚೆಚ್ಚು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.
    ಸೌರವಿದ್ಯುತ್ ಬಳಕೆಯನ್ನು ಹೆಚ್ಚೆಚ್ಚು ಮಾಡುವ ಮೂಲಕ ವಿದ್ಯುತ್ ಕೊರತೆಯನ್ನು ನೀಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ಈ ಬಗ್ಗೆ ರೈತರಿಗೆ ಹೆಚ್ಚೆಚ್ಚು ಮನವರಿಕೆ ಮಾಡಿಕೊಡಬೇಕು ಎಂದು ಸೂಚಿಸಿದರು.
    ಇವತ್ತಿನವರೆಗೂ ನಾಡಿನ ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳು ಬಳಸುತ್ತಿರುವ 200 ಯೂನಿಟ್ ವರೆಗಿನ ಉಚಿತ ವಿದ್ಯುತ್ ಗಾಗಿ ರಾಜ್ಯ ಸರ್ಕಾರ ಉಚಿತ ವಿದ್ಯುತ್ತಿನ ಬಾಬ್ತು 5320 ಕೋಟಿ ರೂಪಾಯಿಯನ್ನು ಇಂಧನ ಇಲಾಖೆಗೆ ನೀಡಿದೆ. ನಮ್ಮ ಜನರಿಗೆ ಜೀರೋ ಬಿಲ್ ಬರುತ್ತಿದೆ. ನಮ್ಮ ಸರ್ಕಾರ ಈ ಜನೋಪಯೋಗಿ ಗ್ಯಾರಂಟಿ ಯೋಜನೆಯನ್ನು ಯಶಸ್ವಿಯಾಗಿ ಮುಂದುವರೆಸಲಿದೆ ಎಂದು ಪುನರುಚ್ಚರಿಸಿದರು.

    ಸೌರಶಕ್ತಿ ಕ್ಷೇತ್ರದ ಹೊಸ ಆವಿಷ್ಕಾರಗಳು, ತಂತ್ರಜ್ಞಾನಗಳು ರೈತರ ಮನೆ ಬಾಗಿಲಿಗೆ ತಲುಪಿ, ಕೃಷಿಯಲ್ಲಿ ಬಳಕೆ ಆದರೆ ಮಾತ್ರ ಸಾರ್ಥಕತೆ ಬರುತ್ತದೆ. ಕೃಷಿ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಂಶೋಧನೆಗಳು ನಡೆದು ಅವು ರೈತರನ್ನು ಮುಟ್ಟಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರೈತರು ಹೆಚ್ಚೆಚ್ಚು ಆಹಾರ ಬೆಳೆದು ವಿದೇಶಕ್ಕೂ ರಫ್ತು ಮಾಡುವಂತಾಗಬೇಕು. ಇದಕ್ಕೆ ನಮ್ಮ ಸರ್ಕಾರ ಸಕಲ ನೆರವು ನೀಡುತ್ತದೆ ಎಂದರು.
    ಸೋಲಾರ್ ವಿದ್ಯುತ್ ಗೆ ಕೇಂದ್ರ ಸರ್ಕಾರ ಕೇವಲ ಶೇ30 ರಷ್ಟು ಸಬ್ಸಿಡಿ ನೀಡುತ್ತಿದೆ. ಆದರೆ ರಾಜ್ಯ ಸರ್ಕಾರ ಶೇ50 ರಷ್ಟು ಸಬ್ಸಿಡಿ ನೀಡುತ್ತಿದೆ. ಆದರೂ ಹೆಸರು ಮಾತ್ರ ಮೋದಿಯವರ ಸಬ್ಸಿಡಿ ಎಂದು ವ್ಯಂಗ್ಯವಾಡಿದರು.
    ಇಂಧನ ಸಚಿವ ಕೆ.ಜೆ.ಜಾರ್ಜ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಗೋವಿಂದರಾಜು, ನಸೀರ್ ಅಹಮದ್ , ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್, ಕ್ರೆಡೆಲ್ ಅಧ್ಯಕ್ಷರಾದ ಶೃಂಗೇರಿ ಶಾಸಕರಾದ ರಾಜುಗೌಡ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    Verbattle
    Verbattle
    Verbattle
    Government Karnataka News Politics Trending ತಂತ್ರಜ್ಞಾನ ರಾಜಕೀಯ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಎರಡು ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಜಾಲದಲ್ಲಿ ನಿರ್ಮಾಪ | Jaffer Sadiq
    Next Article ಬೀದರ್ ನಲ್ಲಿ ಸಿಕ್ಕಿತು‌ ಬರೋಬ್ಬರಿ 1596 ಕೆ.ಜಿ.ಗಾಂಜಾ | Ganja
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Marcusreomb ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • Marcusreomb ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • MichaelAffew ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.