ಬೆಂಗಳೂರು,
ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಬೆಂಗಳೂರು ವಿಶ್ವವಿದ್ಯಾಲಯದ ಪ್ರೊ. ಮೈಲಾರಪ್ಪ ವಿರುದ್ಧದ ಬೆದರಿಕೆ ಆರೋಪ ಪ್ರಕರಣದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ಸಿಲುಕಿದ್ದಾರೆ.
ಸ್ನೇಹಿಮಯಿ ಕೃಷ್ಣ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿಮತ್ತೊಂದು ಎಫ್‌ಐಆರ್ ದಾಖಲಾಗಿದೆ.
ಪವಿತ್ರ ಎನ್ನುವ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬೆದರಿಕೆ ಹಾಗೂ ಪ್ರೊ. ಮೈಲಾರಪ್ಪ ವಿರುದ್ಧ ದಾಖಲಿಸಿರುವ ಪ್ರಕರಣ ವಾಪಸ್ ಪಡೆದುಕೊಳ್ಳುವಂತೆ ತಮಗೆ ಬೆದರಿಕೆ ಹಾಕಿ ಒತ್ತಡ ಹೇರುತ್ತಿದ್ದಾರೆಂದು ಮಹಿಳೆ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಸ್ನೇಹಮಯಿ ಕೃಷ್ಣ ಅವರನ್ನು ಈ ಪ್ರಕರಣದಲ್ಲಿ ಎ1 ಆರೋಪಿಯನ್ನಾಗಿ ಉಲ್ಲೇಖಿಸಿರುವ ಬಸವೇಶ್ವರ ನಗರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಈಗಾಗಲೇ ಸ್ನೇಹಮಯಿ ಕೃಷ್ಣ ವಿರುದ್ಧ ಮುಡಾ ಮಾಜಿ ಆಯುಕ್ತ ನಟೇಶ್ ನೀಡಿದ ದೂರಿನನ್ವಯ ಎಫ್ ಐ ಆರ್ ದಾಖಲಿಸಲಾಗಿದೆ.
ಮುಂಬಡ್ತಿಗಾಗಿ ನಟೇಶ್, ಸಿಎಸ್ ಶಾಲಿನಿ ರಜನೀಶ್‌ಗೆ ಒಂದೂವರೆ ಕೋಟಿ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು. ತಮ್ಮ ವಿರುದ್ಧದ ಆರೋಪ ನಿರಾಧಾರ ಎಂದು ಸಿಎಸ್ ಹೇಳಿದ್ದರು. ಈ ಸಂಬಂಧ ಪೊಲೀಸ್ ಆಯುಕ್ತರಿಗೆ ಮುಡಾ ಮಾಜಿ ಆಯುಕ್ತ ನಟೇಶ್ ದೂರು ನೀಡಿದ್ದರು.

