ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮುಂದಿನ 2 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚಿನೆ ನೀಡಿದೆ. ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ 2 ದಿನ ಆರೆಂಜ್ ಅಲರ್ಟ್ ಘೋಷಿಸಿದೆ. ಇದಲ್ಲದೇ ಜುಲೈ.6 ಮತ್ತು 7ರಂದು ವ್ಯಾಪಕ ಮಳೆಯಾಗೋ ಕಾರಣ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಿದೆ.
ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ.7ರವರೆಗೆ ಭಾರೀ ಮಳೆಯಾಗಲಿದೆ. ಬೀದರ್, ರಾಯಚೂರು, ಧಾರವಾಡ, ವಿಜಯಪುರ, ಬಾಗಲಕೋಟೆ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗೋ ಕಾರಣ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ನಾಳೆ ಎರಡು ದಿನ ರಜೆ ಘೋಷಿಸಲಾಗಿದೆ. ಶೃಂಗೇರಿ, ಕಳಸ,ಹಾಗೂ ಮೂಡಿಗೆರೆ ತಾಲೂಕು, ಬಾಳೂರು ಹೋಬಳಿ ವ್ಯಾಪ್ತಿಯ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಅಬ್ಬರ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೂ ಇಂದು ರಜೆ ಘೋಷಿಸಲಾಗಿದೆ.
ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ, ಹಲವೆಡೆ ಶಾಲಾ ಕಾಲೇಜಿಗೆ ರಜೆ
Previous ArticleBig Boss 9 ಕನ್ನಡ: ಯಾವಾಗ ಶುರು ಏನ್ ಸ್ಪೆಷಲ್ ಇಲ್ಲಿದೆ ಡಿಟೇಲ್ಸ್
Next Article ಹಿಂದೂ ಭಾವನೆಗಳಿಗೆ ದಕ್ಕೆ ತಂದ ವ್ಯಕ್ತಿ Arrest!!