Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರವನ್ನು ವಜಾಗೊಳಿಸಿ..!
    ಸುದ್ದಿ

    ಸರ್ಕಾರವನ್ನು ವಜಾಗೊಳಿಸಿ..!

    vartha chakraBy vartha chakraಜುಲೈ 5, 2022Updated:ಜುಲೈ 5, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ನೈತಿಕತೆ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲು ರಾಜೀನಾಮೆ ಕೊಡಬೇಕು’ ಎಂದು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರೆ, ರಾಜ್ಯ ಸರ್ಕಾರವನ್ನೇ ವಜಾಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಒತ್ತಾಯಿಸಿದ್ದಾರೆ.
    ಜಂಟಿ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಈ ನಾಯಕರು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ರಾಜ್ಯದಲ್ಲಿದೆ. ಇದರ ವಿರುದ್ಧ ಹೋರಾಟ ಮಾಡುತ್ತೇವೆ. ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕು‘ ಎಂದು ಶಿವಕುಮಾರ್ ಆಗ್ರಹಿಸಿದರು.
    ನೇಮಕಾತಿಯಲ್ಲಿ ನಡೆದ ಅಕ್ರಮದಿಂದಾಗಿ ಇಡೀ ಭಾರತದ ಇತಿಹಾಸದಲ್ಲಿ ರಾಜ್ಯಕ್ಕೆ ಕಪ್ಪು ಚುಕ್ಕೆ ಬಂದಿದೆ. ಇದರಿಂದಾಗಿ ಕರ್ನಾಟಕದ ಆಡಳಿತ, ಗೌರವಕ್ಕೆ ಮಸಿ ಬಳಿದಂತಾಗಿದೆ. ನ್ಯಾಯಾಲಯ ಸಾಮಾನ್ಯ ಜನರ ರಕ್ಷಣೆಗೆ ಬಂದಿದೆ. ಆದರೆ, ನ್ಯಾಯಾಂಗಕ್ಕೂ ರಕ್ಷಣೆ ಇಲ್ಲದಂತಾಗಿದೆ. ನ್ಯಾಯಾಧೀಶರ ಸ್ಥಾನಕ್ಕೆ ಕಂಟಕ ಬರುವ ರೀತಿ ನ್ಯಾಯಾಧೀಶರು ಹೇಳಿಕೊಂಡಿದ್ದಾರೆ. ನ್ಯಾಯಾಲಯದ ಆದೇಶದ ಮೇರೆಗೆ ಇಬ್ಬರು ಅಧಿಕಾರಿಗಳ ಬಂಧನವಾಗಿದೆ’ ಎಂದು‌ ಹೇಳಿದರು.
    ಉಪ್ಪಿನ ಅಂಗಡಿ ತೆರೆದವರು ಯಾರು? ಸರ್ಕಾರ ಇದರಲ್ಲಿ ಸಂಪೂರ್ಣ ಶಾಮೀಲಾಗಿದೆ. ಉಪ್ಪು ಖರೀದಿಸಿದವರನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ. ದೊಡ್ಡ ದೊಡ್ಡವರನ್ನು ಹಾಗೇ ಬಿಟ್ಟಿದ್ದಾರೆ. ದೊಡ್ಡ ಅಧಿಕಾರಿಯನ್ನು ಬಂಧಿಸಿ ಅರ್ಧ ಗಂಟೆ ಮಾತ್ರ ವಿಚಾರಣೆ ನಡೆಸಿದ್ದಾರೆ. ಇವರಿಗೆ ನಾಚಿಕೆಯಾಗಬೇಕು. ನಮ್ಮನ್ನು ಗಂಟೆಗಟ್ಟಲೆ‌ ಕೂರಿಸಿಕೊಳ್ಳುತ್ತಾರೆ. ಇವರನ್ನು ಯಾಕೆ ಕಡಿಮೆ ಅವಧಿ ವಿಚಾರಣೆ ಮಾಡಿದ್ದಾರೆ?’ ಎಂದು ವಾಗ್ದಾಳಿ ನಡೆಸಿದರು.
    ‘ನಮ್ಮ ನಾಯಕ ರಾಹುಲ್ ಗಾಂಧಿ ಅವರನ್ನು ಈ ಹಿಂದೆ ಇಡಿ ಅಧಿಕಾರಿಗಳು 50 ಗಂಟೆ ವಿಚಾರಣೆ ನಡೆಸಿದ್ದರು. ಆದರೆ, ಈಗ ಬಂಧಿಸಿರುವ ಅಧಿಕಾರಿ ವಿಚಾರವಾಗಿ ಯಾಕೆ ಹೀಗೆ? ಹಾದಿ ತಪ್ಪಿಸಲು, ಕಣ್ಣೊರೆಸಲು ಏನೇನೋ ಮಾಡುತ್ತಿದ್ದಾರೆ. ಎಷ್ಟೋ ಜನ ಕೆಲಸಕ್ಕಾಗಿ ಲಕ್ಷಾಂತರ ಹಣ ಕಳೆದುಕೊಂಡಿದ್ದಾರೆ. ಸಮಗ್ರ ವಿಚಾರಣೆ ನಡೆಸದೆ ವೈದ್ಯ ಪರೀಕ್ಷೆಗೆ ಕಳುಹಿಸಿದ್ದು ಗೊತ್ತಿಲ್ಲವೇ‘ ಎಂದೂ ಹೇಳಿದರು.
    ರಾಜೀನಾಮೆ ಕೊಡಿ:
    ‘ಈ ಹಗರಣದಲ್ಲಿ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿದೆ. ಇದರ ಬಗ್ಗೆ ನಾಡಿನ ಜನರಿಗೆ ಗೊತ್ತಾಗಬೇಕಲ್ಲವೇ? ಇವರನ್ನೆಲ್ಲಾ ರಕ್ಷಣೆ ಮಾಡುತ್ತಿರುವವರು ಯಾರು? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಕ್ಷಿಸುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಆರೋಪಿಸಿದರು.
    ವರ್ಗಾವಣೆ ಮಾಡುವುದಾಗಿ ನ್ಯಾಯಾಧೀಶರನ್ನೇ ಹೆದರಿಸಿದ್ದಾರೆ. ನ್ಯಾಯಾಧೀಶರಿಗೇ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಲಂಚಾವತಾರ ಮುಗಿಲು ಮುಟ್ಟಿದೆ. ಎಸಿಬಿ ಆ್ಯಂಟಿ ಕರೆಪ್ಷನ್ ಬ್ಯೂರೋ ಅಲ್ಲ, ಕಲೆಕ್ಷನ್ ಬ್ಯೂರೋ. ಅದನ್ನು ಹುಟ್ಟು ಹಾಕಿದ್ದೇ ತಪ್ಪಾ? ಭ್ರಷ್ಟಾಚಾರದ ನಿಯಂತ್ರಣಕ್ಕೆ ಹುಟ್ಟು ಹಾಕಿದ್ದು. ಹಾಗಂತ ವ್ಯವಸ್ಥೆಯೇ ಭ್ರಷ್ಟಾಚಾರದ ರೂಪ ಪಡೆದರೆ ಹೇಗೆ? ಎಸಿಬಿ ಹುಟ್ಟು ಹಾಕಿದ್ದು ನಾವೇ? ಇದು ನಮ್ಮ ಕೂಸು. ಅವರ ಕೂಸು ಎಂದು ಅಲ್ಲ. ಇದನ್ನು ಹುಟ್ಟು ಹಾಕಿರುವುದು ಭ್ರಷ್ಟಾಚಾರ ಕಡಿಮೆ ಮಾಡಲಿ. ಭ್ರಷ್ಟರಿಗೆ ಶಿಕ್ಷೆಯಾಗಲಿ ಎಂಬ ಕಾರಣಕ್ಕೆ’ ಎಂದರು.
    ‘ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಇದ್ದಾರೆ ಎಂಬ ಮಾಹಿತಿ ನನಗೆ ಬಂದಿದೆ. ಅವರ ಮೇಲೂ ಆರೋಪಗಳು ಕೇಳಿಬಂದಿವೆ. ಇನ್ನೂ ಬಹಳ ಜನರು ಇದ್ದಾರೆ. ಅಶ್ವತ್ಥ ನಾರಾಯಣ್, ಅಧಿಕಾರಿಗಳೂ ಇದಾರೆ. ಅವರು ಅಧಿಕಾರದಲ್ಲಿ ಮುಂದುವರೆಯಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಅವರ ಕಾಲ, ಇವರ ಕಾಲ ಎಂದು ಸಮರ್ಥಿಸಿಕೊಳ್ಳುವುದು ಸರಿಯಲ್ಲ’ಕೂಡಲೆ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕಾದ ಎಂದು ಆಗ್ರಹಿಸಿದರು.

    Verbattle
    Verbattle
    Verbattle
    Politics ಕಲೆ ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಡೆಲಿವರಿ ಬಾಯ್ ಆಗಿ ಸತೀಶ್ ನೀನಾಸಂ!
    Next Article ಚಂದ್ರಶೇಖರ್ ಗುರೂಜಿ ಕೊಲೆ ಆರೋಪಿಗಳಿಬ್ಬರ ಬಂಧನ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Qtdqbf ರಲ್ಲಿ ಮಂಗಳಮುಖಿಯ‌ ಈ ಸಾಧನೆ ನೋಡಿ.
    • LarryCax ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.