ಬೆಂಗಳೂರು,ಜು.9-ರಸ್ತೆಯಲ್ಲಿ ವಾಯು ವಿಹಾರಕ್ಕೆ ಹೋಗುವ ಮಹಿಳೆಯರ ಮೈಮುಟ್ಟಿ ವಿಕೃತ ಮೆರೆದಿದ್ದ ಕಾಮುಕನೊಬ್ಬನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
ಫೂಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಗಂಗಾಧರ ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
ಕಳೆದ ಜು.3 ರಂದು ಸದಾಶಿವನಗರದ ಸ್ಯಾಂಕಿ ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದ ಮಹಿಳೆಯರಿಗೆ ಮೈಮುಟ್ಟಿ ಆರೋಪಿಯು ಲೈಂಗಿಕ ಕಿರುಕುಳ ಕೊಟ್ಟಿದ್ದು ಈ ಸಂಬಂಧ ಸದಾಶಿವನಗರ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ.
ನಗರದ ಬೇರೆ ನೇರೆ ಭಾಗದಲ್ಲಿ ಅರೋಪಿಯು ಇದೇ ರೀತಿಯ ಕೃತ್ಯ ನಡೆಸಿರುವ ಮಾಹಿತಿಯಿದ್ದು ಹೆಚ್ಚಿನ ವಿಚಾರಣೆ ಕೈಗೊಳ್ಳಲಾಗಿದೆ ಎಂದರು.