ಬೆಂಗಳೂರು : ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಬೆಂಗಳೂರಿನ ರಾಜರಾಜೇಶ್ವರಿ ನಗರದ ನ್ಯಾಷನಲ್ ಹಿಲ್ ವ್ಯೂ ಶಾಲೆಗೆ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಯಾರು ಈ ವ್ಯಕ್ತಿ ಎನ್ನುತ್ತೀರಾ..! ಅದು ಈ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.
ಇದೇ ಜುಲೈ 21ರಂದು ಪರೀಕ್ಷೆಗಳು ನಿಗದಿ ಆಗಿದ್ದವು. ಆದರೆ, ವಿದ್ಯಾರ್ಥಿ ಹೆಚ್ಚು ಓದಿರಲಿಲ್ಲ. ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ಭಯವಿತ್ತು. ಪರೀಕ್ಷೆ ಮುಂದೂಡುವ ಉದ್ದೇಶದಿಂದ ಬಾಂಬ್ ಬೆದರಿಕೆ ಕಳುಹಿಸಿದ್ದ’ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ
ಅಂದಹಾಗೆ ಈ ಹುಡುಗ ಓದಿನಲ್ಲಿ ಸಾಕಷ್ಟು ಮುಂದೆ ಇದ್ದಾನೆ.ಪ್ರತಿಭಾವಂತ, ಆದರೆ ಅಂದಿನ ಪರೀಕ್ಷೆಗೆ ಆತ ಸಿದ್ದಗೊಂಡಿರಲಿಲ್ಲ ಎನ್ನಲಾಗಿದೆ.
ತನ್ನ ತಂದೆಯ ಲ್ಯಾಪ್‌ಟಾಪ್‌ನಲ್ಲಿ ಹುಚ್ಚ ವೆಂಕಟ್ ಹೆಸರಿನಲ್ಲಿ ಇ-ಮೇಲ್ ಸೃಷ್ಟಿಸಿದ್ದ ಬಾಲಕ, ಅದೇ ಇ-ಮೇಲ್‌ನಿಂದ ಶಾಲೆ ಇ-ಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿದ್ದ. ಶಾಲೆ ಕ್ಯಾಂಪಸ್‌ನಲ್ಲಿ ಬಾಂಬ್ ಸ್ಫೋಟಗೊಳ್ಳುವುದಾಗಿ ಬೆದರಿಸಿದ್ದ ಎಂದು ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ. ಸೋಮವಾರವೂ ವಿದ್ಯಾರ್ಥಿ ಎಂದಿನಂತೆ ಶಾಲೆಗೆ ಬಂದಿದ್ದ. ಪೊಲೀಸರು ಶೋಧ ನಡೆಸುವಾಗಲೂ ಆತ ಕ್ಯಾಂಪಸ್‌ನಲ್ಲಿದ್ದ. ಈತ ಇ-ಮೇಲ್ ಕಳುಹಿಸಿದ್ದ ಸಂಗತಿ ಪೋಷಕರಿಗೂ ಗೊತ್ತಿರಲಿಲ್ಲವಂತೆ.