ಮೈಸೂರು: ಆಷಾಢ ಮಾಸದ ನಾಲ್ಕನೇ ಶುಕ್ರವಾರ ಹಿನ್ನೆಲೆಚಾಮುಂಡಿ ಬೆಟ್ಟಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದರು.
ಆರೋಪ ಮುಕ್ತರಾದ ಬಳಿಕ ನಾಡ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನದ ಬಳಿಕ ದೇವಸ್ಥಾನ ಮುಂಭಾಗ ಪ್ರಸಾದ ವಿತರಿಸಿದ ಮಾಜಿ ಸಚಿವ ಈಶ್ವರಪ್ಪ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.
ಡಿ.ಕೆ.ಶಿವಕುಮಾರ್ ಸಿದ್ದರಾಮಯ್ಯ ಇಬ್ಬರು ಸೇರಿ ಕಾಂಗ್ರೆಸ್ ಗೆ ಜಾತಿ ಪಟ್ಟ ಅಂಟಿಸಿದ್ದಾರೆ. ಡಿ.ಕೆ.ಶಿವಕುಮಾರ್ ಒಬ್ಬ ಒಳ್ಳೆಯ ನಾಯಕ ಎಂದುಕೊಂಡಿದ್ದೆ. ತಾನು ಸಿಎಂ ಆಗಲು ತನ್ನ ಸಮುದಾಯ ತನ್ನ ಬೆನ್ನಿಗೆ ಬರಬೇಕು ಎಂದು ಹೇಳುವ ಮೂಲಕ ಡಿ.ಕೆ.ಶಿ ಜಾತಿವಾದಿ ಆಗಿದ್ದಾರೆ. ಸಿದ್ದರಾಮಯ್ಯ ಕುರುಬರ ನಾಯಕ ಎಂದು ಹೇಳುವ ಮೂಲಕ ಅವರು ಸಹ ಜಾತಿವಾದಿಯಾಗಿದ್ದಾರೆ.
ಇವರಿಬ್ಬರು ಸೇರಿ ಕಾಂಗ್ರೆಸ್ ಗೆ ಜಾತಿಯ ಕೆಸರು ಅಂಟಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ, ಹರಿಪ್ರಸಾದ್ ಈ ವಿಚಾರದಲ್ಲಿನ ಹೇಳಿಕೆಗಳಿಗೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರಿಬ್ಬರು ಮಾತ್ರ ಕಾಂಗ್ರೆಸ್ ಗೌರವ ತರುವ ಮಾತನಾಡಿದ್ದಾರೆ.
ನಾನು ಸಚಿವ ಸಂಪುಟ ಮತ್ತೆ ಸೇರುವುದು ಪಕ್ಷದ ನಾಯಕರುಗಳಿಗೆ ಬಿಟ್ಟ ವಿಚಾರ ನಂದು ಯಾವ ತಪ್ಪು ಇರದಿದ್ದರು ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದೆ. ಈಗ ಆರೋಪ ಮುಕ್ತನಾಗಿದ್ದೇನೆ. ಸಂಪುಟ ಭಾಗವಾಗುವ ಎಲ್ಲಾ ನಿರ್ಧಾರಗಳು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.