ಚಿಕ್ಕಮಗಳೂರು,ಜು.23- ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಿಂಸೆಯ ಬೋವಿ ಕಾಲೋನಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಗೆ ಕೂಲಿ ಕೆಲಸಕ್ಕಾಗಿ ಪಶ್ಚಿಮ ಬಂಗಾಳದ ಮೂಲಕ ಅಗಮಿಸಿದ್ದು, ರಹುಲ್, ಅಬ್ದುಲ್, ಮೋಮಿನ್ ಅಲಿ, ಸಲೀಂ ಅಕ್ರಮವಾಗಿ ನೆಲೆಸಿದ್ದರು ಎಂದು ತಿಳಿದುಬಂದಿದೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಲನೆ ನಡೆಸಿದ್ದಾರೆ. ಈ ವೇಳೆ ಇವರು ಬಾಂಗ್ಲಾದೇಶದ ಪ್ರಜೆಗಳು ಎಂದು ತಿಳಿದುಬಂದಿದೆ. ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುತ್ತಿದ್ದಾರೆ.