ಬೆಂಗಳೂರು,ಜು.25-ದ್ವಿಚಕ್ರವಾಹನಗಳನ್ನು ಕಳವು ಮಾಡುತ್ತಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ತೆಗೆದುಕೊಂಡಿರುವ ಸುಬ್ರಮಣ್ಯನಗರ ಪೊಲೀಸರು 3.5ಲಕ್ಷ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನಿಂದ 3.5 ಲಕ್ಷ ರೂ ಮೌಲ್ಯದ ವಿವಿಧ ಕಂಪನಿಯ 7 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡು ಆತನನ್ನು ಬಾಲ ಮಂದಿರಕ್ಕೊಪಿಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳು ದ್ವಿಚಕ್ರವಾಹನವನ್ನು ಕಳವು ಮಾಡಿ, ವಿಲೇವಾರಿ ಮಾಡಲು ಕಾನೂನು ಸಂಘರ್ಷಕ್ಕೊಳಗಾದ ಬಾಲಕನಿಗೆ ನೀಡಿದ್ದ ಎಂದು ಪೊಲೀಸರು ತಿಳಿಸಿದರು.
ಮಲ್ಲೇಶ್ವರಂ ಪಶ್ಚಿಮದ ಮಿಲ್ಕ್ ಕಾಲೋನಿಯ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಹೋಂಡಾ ಆಕ್ಟೀವಾ ಸ್ಕೂಟರ್ ಕಳ್ಳತನ ಮಾಡಿ ಪರಾರಿಯಾಗಿದ್ದು ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡು ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಆರೋಪಿಗಳ ಮಾಹಿತಿ ಮೇರೆಗೆ ಸುಬ್ರಮಣ್ಯನಗರ-3, ರಾಜಾಜಿನಗರ-1, ಪೀಣ್ಯ-1, ಮೈಸೂರು ನಗರ ಮಂಡಿ ಪೊಲೀಸ್ ಠಾಣೆ-1, ಬಿಡದಿ-1 ದ್ವಿಚಕ್ರವಾಹನ ಕಳವು ಪ್ರಕರಣ ಸೇರಿ 7 ದ್ವಿಚಕ್ರವಾಹನ ಕಳವು ಪ್ರಕರಣ ಪತ್ತೆಯಾಗಿವೆ.
Previous Articleವಿನೋದ್ ಪ್ರಭಾಕರ್ ನಟಿಸಿರುವ ಲಂಕಾಸುರ ಟೈಟಲ್ ಟ್ರ್ಯಾಕ್ ಬಂತು
Next Article ಕಾಂಗ್ರೆಸ್ ಪುಂಗಿ ಊದುವವರು ಯಾರು?