Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಂದರಿಯರ ಪೋಟೋ ನೋಡಿ ಯಾಮಾರಿದ್ರೆ ಅಷ್ಟೇ…?
    ಸುದ್ದಿ

    ಸುಂದರಿಯರ ಪೋಟೋ ನೋಡಿ ಯಾಮಾರಿದ್ರೆ ಅಷ್ಟೇ…?

    vartha chakraBy vartha chakraಜುಲೈ 29, 2022Updated:ಜುಲೈ 29, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಜು.29-ಸಾಮಾಜಿಕ ಜಾಲತಾಣದಿಂದ ರಾತ್ರೋರಾತ್ರಿ ಖ್ಯಾತಿ ಪಡೆಯಬೇಕು ಎಂದು ಅದೆಷ್ಟೋ ಯುವತಿಯರು ಫೇಸ್​ಬುಕ್, ಇನ್​ಸ್ಟಾಗ್ರಾಮ್​ಗಳಲ್ಲಿ ಫೋಟೋ ಹಾಕಿ ಲೈಕ್ ಕಮೆಂಟ್​ಗಳನ್ನು ಗಿಟ್ಟಿಸಿಕೊಳ್ಳುತ್ತಾರೆ‌.
    ಇದನ್ನೇ ಲಾಭ ಮಾಡಿಕೊಂಡ‌ ಖತರ್ನಾಕ್ ಖದೀಮನೊಬ್ಬ ಅದೇ ಸುಂದರ ಯುವತಿಯರ ಫೋಟೋಗಳನ್ನೇ ಬಳಸಿಕೊಂಡು ಹಲವು ಯುವಕರಿಗೆ 19 ಲಕ್ಷಕ್ಕೂ ಹೆಚ್ಚಿನ ವಂಚನೆ ನಡೆಸಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
    ನಿಪ್ಪಾಣಿ ತಾಲೂಕಿನ ನಾಯಿ ಹಿಂಗ್ಲಜ್ ಗ್ರಾಮದ ಮಹಾಂತೇಶ್ ಮೂಡಸೆ ಬಂಧಿತ ಆರೋಪಿಯಾಗಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ.ಬೋರಲಿಂಗಯ್ಯ ಅವರು ತಿಳಿಸಿದ್ದಾರೆ.
    ಕಳೆದ 2016ರಲ್ಲಿ ಎಂ‌. ಸ್ನೇಹಾ ಎಂಬ ಹೆಸರಿನಲ್ಲಿ ನಕಲಿ ಫೇಕ್ ಐಡಿ ಸೃಷ್ಟಿಸಿ ಫೇಸ್‌ಬುಕ್‌, ಇನ್​​ಸ್ಟಾಗ್ರಾಂನಲ್ಲಿ ಖಾತೆ ತೆರೆದು ಹಣ ಮಾಡಲು ಕಳ್ಳದಾರಿ ಹಿಡಿದು ಸಾಮಾಜಿಕ ಜಾಲತಾಣದಲ್ಲಿ‌ ಅಪ್ಲೋಡ್ ಮಾಡಿದ ಯುವತಿಯರ ಸುಂದರ ಪೋಟೋಗಳನ್ನು ಡೌನ್ಲೋಡ್ ಮಾಡಿಟ್ಟಿಕೊಳ್ಳುತ್ತಿದ್ದನು.
    ವಾಟ್ಸ್​ಆ್ಯಪ್​ನ ಡಿಪಿಗೂ ಅದೇ ಯುವತಿಯ ಫೋಟೋಗಳನ್ನು ಹಾಕುತ್ತಿದ್ದನು. ಬಳಿಕ ಫೇಸ್‌ಬುಕ್‌, ಇನ್​​ಸ್ಟಾಗ್ರಾಂಗಳಲ್ಲಿ ಯುವಕರಿಗೆ ಮನವಿ ಕಳುಹಿಸುತ್ತಿದ್ದು ಇತ್ತ ಯುವತಿ ಫೋಟೋವನ್ನು ‌ನೋಡಿ ಹಿಂಬಾಲಿಸುವ ಯುವಕರನ್ನೇ ಗುರಿಯಾಗಿಸಿ ಪರಿಚಯ ಮಾಡಿಕೊಂಡು ಸಲುಗೆಯಿಂದ ಇರುತ್ತಿದ್ದ.
    ಚೆಂದದ ಯುವತಿಯ ಫೋಟೋಗಳನ್ನು ನೋಡಿ ಮಳ್ಳಾದ ಯುವಕರಿಂದ ಹೇಗೋ ಅವರ ಫೋನ್ ನಂಬರ್​ಗಳನ್ನು ಪಡೆದುಕೊಳ್ಳುತ್ತಿದ್ದನು. ಆದರೆ, ಯುವಕರೊಂದಿಗೆ ಫೋನ್​ನಲ್ಲಿ ಮಾತನಾಡದೇ ಬರೀ ಚಾಟ್ ಮಾಡುತ್ತಿದ್ದ.
    ಈ ವೇಳೆ ಕೆಲವು ಯುವಕರಿಗೆ ಫೋಟೋಗಳನ್ನ ವಾಟ್ಸ್​ಆ್ಯಪ್​ ಮಾಡುತ್ತಿದ್ದನಂತೆ. ಯುವತಿ ಅಂತಾ ನಂಬಿದ ಕೆಲವರಿಗೆ ಪಂಗನಾಮ ಹಾಕಿದ್ದಾನೆ. ಹಣದ ಅವಶ್ಯಕತೆ ಇದೆ ಅಂತಾ ಹತ್ತು ಸಾವಿರ, ಇಪ್ಪತ್ತು ಸಾವಿರ, ಐವತ್ತು ಸಾವಿರವರೆಗೂ ಹಣ ಹಾಕಿಸಿಕೊಂಡು ಬಳಿಕ ನಂಬರ್ ಬ್ಲಾಕ್ ಮಾಡುತ್ತಿದ್ದ.
    ಹೀಗೆ ಒಂದೇ ಯುವತಿ ಫೋಟೋ ಹಾಕಿ ಅವರ ಹೆಸರಿನಲ್ಲಿ ಮಾಡಿದ್ದ ಅಕೌಂಟ್‌ಗೆ ಹದಿನೈದು ಸಾವಿರ ಪಾಲೋವರ್ಸ್ ಇದ್ದಾರೆ.
    ತನ್ನ ಪೋಟೋ ಬೇರೆಯವರು ಬಳಸುತ್ತಿದ್ದ ವಿಚಾರ ತಿಳಿದ ಯುವತಿ ಶಾಕ್ ಆಗಿದ್ದಾರೆ. ಇತ್ತ ಯುವತಿ ದುಬೈನಲ್ಲಿ ಸೆಟ್ಲ್ ಆಗಿದ್ದು, ತನ್ನ ಪೋಟೋ ಮಿಸ್‌ ಯೂಸ್ ಆಗಿದ್ದನ್ನ ಕಂಡು ಶಾಕ್ ಆಗಿ ಖುದ್ದು ಮಹಾಂತೇಶ್‌ಗೆ ಮೆಸೇಜ್ ಮಾಡಿ ಅಕೌಂಟ್ ಡಿಲೀಟ್ ಮಾಡುವಂತೆ ಮನವಿ ಮಾಡಿದ್ದಾಳೆ‌.
    ಇಷ್ಟಾದರೂ ಆತ ಮಾತು ಕೇಳದಿದ್ದಾಗ, ಜು.4ರಂದು ಬೆಳಗಾವಿಗೆ ಆಗಮಿಸಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
    ದೈಹಿಕ ಪರೀಕ್ಷೆ ಪಾಸ್ :
    ಬಂಧಿತ ಆರೋಪಿ ಮಹಾಂತೇಶ ಕಳೆದ ಹಲವು ದಿನಗಳ ಹಿಂದೆ ನಡೆದಿದ್ದ ಪಿಎಸ್ಐ ದೈಹಿಕ ಪರೀಕ್ಷೆಯಲ್ಲಿ ಪಾಸ್ ಆಗಿದ್ದನು ಎಂಬ ವಿಚಾರ ತನಿಖೆಯಲ್ಲಿ ಪತ್ತೆಯಾಗಿದೆ.
    ಯುವಕರಿಗೆ ಮೋಸ ಮಾಡಿ ಬಂದ ಹಣವನ್ನ ತೆಗೆದುಕೊಂಡು ಗೋವಾ ರಾಜ್ಯಕ್ಕೆ ಹೋಗಿ ತನ್ನ ಗೆಳೆಯರೊಂದಿಗೆ ಮೋಜು ಮಸ್ತಿ ಮಾಡಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಪೋಟೋಗಳನ್ನು ಹಾಕುವ ಮುನ್ನವೇ ಯುವತಿಯರು ಎಚ್ಚರಿಕೆಯಿಂದ ಇರಬೇಕು ಎಂದು ಎಂ.ಬಿ.ಬೋರಲಿಂಗಯ್ಯ ಅವರು ಮನವಿ‌ ಮಾಡಿದ್ದಾರೆ.

    Verbattle
    Verbattle
    Verbattle
    fake account nippani social media ನಿಪ್ಪಾಣಿ ಫೇಸ್ಬುಕ್
    Share. Facebook Twitter Pinterest LinkedIn Tumblr Email WhatsApp
    Previous Articleಸುರತ್ಕಲ್: ಫಾಝಿಲ್ ಮೃತದೇಹ ಅಂತ್ಯಕ್ರಿಯೆಗೆ ಮಸೀದಿಗೆ
    Next Article ನಾಪತ್ತೆಯಾಗಿದ್ದವರು ಚೆನ್ನೈನಲ್ಲಿ ಪತ್ತೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Tracymix ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • Tracymix ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.