ಸುರತ್ಕಲ್: ಮಂಗಳೂರು ನಗರದ ಫಾಝಿಲ್ ಹತ್ಯೆ ಪ್ರಕರಣದ ಬಳಿಕ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ಉಲ್ಲಂಘಿಸಿರುವ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ತಿಳಿಸಿದ್ದಾರೆ.
ಫಾಝಿಲ್ ಹತ್ಯೆಯ ಬಳಿಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮಂಗಳೂರು ನಗರದ ಸುರತ್ಕಲ್, ಬಜ್ಪೆ, ಮುಲ್ಕಿ ಹಾಗು ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಆದರೆ ಈ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ರಾತ್ರಿ ವೇಳೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಷೇಧಾಜ್ಞೆ ಜಾರಿಯಾಗಿರುವ ಸ್ಥಳಗಳಲ್ಲಿ 19 ಚೆಕ್ ಪೋಸ್ಟ್ ಮೂಲಕ ಬಂದೋಬಸ್ತ್ ಏರ್ಪಡಿಸಲಾಗಿದೆ