ತುಮಕೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಬಂದ್ ಕರೆ ನೀಡಲಾಗಿದೆ. ಬಂದ್ ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ತವರಲ್ಲಿ ಉತ್ತಮ ಪ್ರಕ್ರಿಯೆ ವ್ಯಕ್ತವಾಗಿದೆ. ತುಮಕೂರು ಜಿಲ್ಲೆ ತಿಪಟೂರಿನಲ್ಲಿ ಬೆಳಗಿನಿಂದಲೇ ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಲಾಗಿದೆ. ಆದರೆ ಬಂದ್ ಬಗ್ಗೆ ಸೂಕ್ತ ಮಾಹಿತಿ ಇಲ್ಲದ ಕಾರಣ ವಿದ್ಯಾರ್ಥಿಗಳು ನಗರಕ್ಕೆ ಆಗಮಿಸಿ ಮತ್ತೆ ಹಿಂದಿರುಗುವಂತಾಗಿದೆ. ಪ್ರಯಾಣಿಕರು ಕೂಡ ಸಮಸ್ಯೆ ಎದುರಿಸುವಂತಾಗಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರವೇ ಅಧಿಕಾರದಲ್ಲಿದ್ದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ವಕ್ಷೇತ್ರದಲ್ಲಿಯೇ ಬಿಜೆಪಿ ಭದ್ರಕೋಟೆಯಂತಿರುವ ಹಿಂದೂಗಳೇ ಬಂದ್ ಗೆ ಕರೆ ನೀಡಿರುವುದು ಶಿಕ್ಷಣ ಸಚಿವ ಬಿ ಸಿ ನಾಗೇಶ್‌ಗೆ ಹಿನ್ನಡೆಯೇ ಆದಂತಾಗಿದೆ. ದಕ್ಷಿಣ ಕನ್ನಡದ ಸುಳ್ಯದಲ್ಲಿ ಮಂಗಳೂರು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಹಾಗು ರಾಜ್ಯದಲ್ಲಿ ನಿರಂತರ ನಡೆಯುತ್ತಿರುವ ಹಿಂದೂಗಳ ಹತ್ಯೆ ಖಂಡಿಸಿ ಇಂದು ಬಜರಂಗದಳ ಹಾಗು ಹಿಂದೂ ಹಿತರಕ್ಷಣಾ ಸಮಿತಿ ತಿಪಟೂರು ಬಂದ್‌ಗೆ ಕರೆ ನೀಡಿದೆ.