Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲದ ಸುಳಿಯಲ್ಲಿ…
    ಸುದ್ದಿ

    ಸಾಲದ ಸುಳಿಯಲ್ಲಿ…

    vartha chakraBy vartha chakraಏಪ್ರಿಲ್ 22, 2022Updated:ಏಪ್ರಿಲ್ 22, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಮನಗರ : ಆ ಕೆರೆ ತಾಲೂಕಿನ ಬೃಹತ್ ಕೆರೆಯಲ್ಲಿ ಒಂದು. ಅಂತಹ ಕೆರೆಯಲ್ಲಿ ಮೀನುಗಾರಿಕೆ ಮಾಡಲು ಲಕ್ಷಾಂತರ ರೂಪಾಯಿ ಟೆಂಡರ್ ಕರೆಯಲಾಗಿತ್ತು. ಆದ್ರೆ ಮೀನು ಹಿಡಿಯುವ ಸಮಯಕ್ಕೆ ಕೆರೆಯಲ್ಲಿ‌ ಮೀನುಗಳು ಅನುಮಾನಸ್ಪದವಾಗಿ ಸಾಯುತ್ತಿವೆ. ಇತ್ತ ಟೆಂಡರ್ ಪಡೆದ ಗುತ್ತಿಗೆದಾರನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಈ ಕುರಿತು ಒಂದು ವರದಿ…

    ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿಯ ರಾಮಮ್ಮನ ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪುತ್ತಿವೆ. ಪ್ರತಿದಿನ ಮೀನುಗಳು ಸಾವನ್ನಪ್ಪಿ ಗಾಳಿ ಬೀಸಿದ ಹಾಗೆ ದಡಕ್ಕೆ ಬರುತ್ತಿವೆ. ತಿಟ್ಟಮಾರನಹಳ್ಳಿ ಗ್ರಾಮದ ಸಂಪತ್ ಕುಮಾರ್ ಮೀನುಗಾರಿಕೆ ಇಲಾಖೆ ವತಿಯಿಂದ ಮೀನುಸಾಕಾಣೆಗಾಗಿ ಕೆರೆಯನ್ನ 26,30,000 ಲಕ್ಷ ರೂಪಾಯಿಗೆ ಟೆಂಡರ್ ಪಡೆದಿದ್ರು. ಆದ್ರೆ ಇದೀಗ ಮೀನುಗಳು ಅನುಮಾನಸ್ಪದವಾಗಿ ಸಾಯುತ್ತಿರುವುದರಿಂದ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ.

    1 ಲಕ್ಷ ಮೀನಿನ ಮರಿಗಳನ್ನ ಕೆರೆಗೆ ಬಿಡಲಾಗಿತ್ತು ಮೀನುಗಳು ಸಹ 1-2 ಕೆಜಿ ತೂಕದಷ್ಟು ಬೆಳವಣಿಗೆ ಆಗಿದ್ದವು. ಇನ್ನೇನು ಕೆರೆಗೆ ಬಲೆ ಹಾಕಿ ಮೀನುಗಳನ್ನ ಹಿಡಿದು ಮಾರಾಟ ಮಾಡುವಂತಹ ಸಮಯದಲ್ಲಿ ಮೀನುಗಳು ಸಾವನ್ನಪ್ಪುತ್ತಿವೆ ಇದ್ರಿಂದ ಗುತ್ತಿಗೆದಾರ ಸಾಲದ ಸುಳಿಗೆ ಸಿಲುಕಿದ್ದಾನೆ. ಈ ಬಗ್ಗೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ್ರೆ ಅಸಡ್ಡೆ ಹಾಗೂ ಬೇಜವಾಬ್ದಾರಿ ತನ ತೋರುತ್ತಾರೆ.

    ಈ ರಾಮಮ್ಮನ ಕೆರೆಗೆ ಚನ್ನಪಟ್ಟಣದ ಸುಮಾರು 40% ತ್ಯಾಜ್ಯ ನೀರು ಈ ಕೆರೆಯನ್ನ ಸೇರುತ್ತಿದೆ. ಇದಕ್ಕೆ ಪ್ರಮುಖವಾಗಿ ಚನ್ನಪಟ್ಟಣ ನಗರದ ಬಡಾಮಕಾನ್, ಎಲೇಕೇರಿ, ಕೋಟೆ ಸೇರಿ ಹಲವು ಬಡಾವಣೆಯ ಕೊಳಚೆ ನೀರು ಇದ್ರ ಜತೆಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ತ್ಯಾಜ್ಯ ಕೂಡ ಕೆರೆ ಸೇರಿತ್ತಿದ್ದು ಇದ್ರಿಂದ ವಿಷಪೂರಿತ ವಸ್ತು ಕೆರೆಯನ್ನು ಸೇರಿ ನೀರು ಮಲಿನಗೊಂಡು ಮೀನುಗಳು ಸಾಯುತ್ತಿರಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ. ಅಲ್ಲದೇ ಇತ್ತೀಚೆಗೆ ಏತ ನೀರಾವರಿ ಯೋಜನೆ ಮೂಲಕ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದ್ದು ಇದ್ರಲ್ಲಿ ನಿಷೇಧಿತ ಕ್ಯಾಟ್ ಫಿಶ್ ಕೆರೆಗಳನ್ನ ಸೇರುತ್ತಿವೆ ಇವುಗಳು ಸಹ ಉಳಿದ ಮೀನುಗಳನ್ನ ಸಾಯಿಸುತ್ತಿವೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

    ಒಟ್ಟಾರೆ ಲಕ್ಷಾಂತರ ರೂಪಾಯಿ ಟೆಂಡರ್ ಪಡೆದು ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಿ ಲಾಭದ ನಿರೀಕ್ಷೆಯಲ್ಲಿದ್ದ ಸಂಪತ್ ಕುಮಾರ್ ಇದೀಗ ಮೀನು ಹಾಗೂ ಹಣ ಕಳೆದುಕೊಂಡು ಸಾಲದ ಸುಳಿಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿದ್ದಾರೆ.

    Verbattle
    Verbattle
    Verbattle
    #badamakan #elekeri #fish #tender
    Share. Facebook Twitter Pinterest LinkedIn Tumblr Email WhatsApp
    Previous Articleನಿರಾಪರಾಧಿಗಳ ಮೇಲೆ ಕ್ರಮ ಬೇಡ – ಸಿದ್ಧರಾಮಯ್ಯ
    Next Article ಮೂರು ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಫೆಬ್ರವರಿ 2, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamespiedy ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Jamespiedy ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • 1win_mzor ರಲ್ಲಿ ಬೇರೆಯವರ ಮನೆ ಕದ ತಟ್ಟಿ ಕೊಲೆಯಾದ | Murder
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ಫೆಬ್ರವರಿ 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.