Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬ ಆಚರಣೆಗೆ ಸಜ್ಜಾದ ಹಳ್ಳಿ ಅಭಿಮಾನಿಗಳು
    ಸುದ್ದಿ

    ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬ ಆಚರಣೆಗೆ ಸಜ್ಜಾದ ಹಳ್ಳಿ ಅಭಿಮಾನಿಗಳು

    vartha chakraBy vartha chakraಆಗಷ್ಟ್ 2, 2022Updated:ಆಗಷ್ಟ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯನವರ 75 ನೇ ಹುಟ್ಟುಹಬ್ಬದ ಅಮೃತ ಮಹೋತ್ಸವದ ಬಗ್ಗೆ ಭಾರಿ ಚರ್ಚೆಯಾಗ್ತಿದೆ. ರಾಜ್ಯಾದ್ಯಂತ ಸಿದ್ಧರಾಮಯ್ಯನವರ ಲಕ್ಷ ಲಕ್ಷ ಅಭಿಮಾನಿಗಳು ಸಿದ್ಧರಾಮೋತ್ಸವ ಆಚರಣೆಗೆ ತೆರಳ್ತಿದ್ದಾರೆ. ಇತ್ತ ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿಯೂ ಸಹ ಸಿದ್ಧರಾಮೋತ್ಸವ ಆಚರಣೆಗೆ ಭರದಿಂದ ಸಿದ್ಧತೆ ನಡೆದಿದೆ. ಗ್ರಾಮದ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಸಿದ್ದರಾಮಯ್ಯನವರ 75 ವರ್ಷದ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ತಿಮ್ಮಾಪೂರ ಗ್ರಾಮದಲ್ಲಿ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಿದ್ದರಾಮಯ್ಯನವರ ಭಾವ ಚಿತ್ರಗಳ ಕಟೌಟ್ ಫ್ಲೆಕ್ಸ್ ಹಾಕಿ ರಾರಾಜಿಸುವಂತೆ ಮಾಡಿದ್ದಾರೆ. ಊರ ಅಗಸಿ ಬಾಗಿಲಕ್ಕೆ ಸಿದ್ಧರಾಮಯ್ಯನವರ ದೊಡ್ಡ ಕಟೌಟ್ ಹಾಕಿ ಶೃಂಗಾರ ಮಾಡಿದ್ದಾರೆ. ಇನ್ನು ಯುವಕರು ಸಿದ್ದರಾಮಯ್ಯನವರ ಭಾವಚಿತ್ರದ ಟೀ ಶರ್ಟ್ ಹಾಕಿಕೊಂಡು ಅಮೃತ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಅಮೃತ ಮಹೋತ್ಸವದ ಪ್ರಯುಕ್ತ 1 ಕ್ವಿಂಟಲ್ ಗೋದಿ ಹುಗ್ಗಿ, 2 ಕ್ವಿಂಟಲ್ ಅನ್ನ ಸಾರು ಮಾಡಿ ಗ್ರಾಮಸ್ಥರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

    ಈ ಗ್ರಾಮದಲ್ಲಿ ಇಷ್ಟೆಲ್ಲ ಸಂಭ್ರಮಿಸೋದಕ್ಕೆ ಕಾರಣವೂ ಇದೆ. ಯಾಕಂದರೆ ಸಿದ್ಧರಾಮಯ್ಯನವರಿಗೂ ಹಾಗು ತಿಮ್ಮಾಪೂರ ಗ್ರಾಮಕ್ಕೆ ಅವಿನಾಭಾವ ಸಂಬಂಧವಿದೆ. ಈ ಹಿಂದೆ 1996 ರಲ್ಲಿ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಚುನಾವಣೆ ಪ್ರಚಾರಕ್ಕೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನ ಉದ್ದೇಶಿಸಿ ಭಾಷಣ ಮಾಡಿದ್ದರು. ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 2016 ರಲ್ಲಿ ಬರಗಾಲದ ಅಧ್ಯಯನ ಕುರಿತು ಕೂಲಿ ಕಾರ್ಮಿಕರನ್ನು ಭೇಟಿ ನೀಡಿದ್ದರು. 2018 ರಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಉದ್ಘಾಟನೆ ಮಾಡಲು ಆಗಮಿಸಿದ್ದರು. ಸಿದ್ಧರಾಮಯ್ಯನವರು ಮೂರು ಬಾರಿ ಗ್ರಾಮಕ್ಕೆ ಭೇಟಿ ನೀಡಿದ ಇತಿಹಾಸ ಇದೆ ಅಂತ ಇಲ್ಲಿನ ಗ್ರಾಮಸ್ಥರು ಹೇಳ್ತಾರೆ.

    Verbattle
    Verbattle
    Verbattle
    Politics ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಫಾಝಿಲ್​​ ಹತ್ಯೆ ಪ್ರಕರಣದಲ್ಲಿ 6 ಮಂದಿ ಬಂಧನ: ತಪ್ಪೊಪ್ಪಿಕೊಂಡ ಆರೋಪಿಗಳು
    Next Article ದೊಣ್ಣೆಯಿಂದ ಹೊಡೆದು ಮಹಿಳೆ ಭೀಕರ ಕೊಲೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Inrhud ರಲ್ಲಿ ಜೈಲಿನಲ್ಲಿದ್ದ ಮಗನ ನೋಡಲು ಬಂದ ತಂದೆಗೆ ಆಗಿದ್ದೇನು.?
    • Bvrlvp ರಲ್ಲಿ ಕಣಕ್ಕಿಳಿದ ನಿಖಿಲ್ ಕುಮಾರಸ್ವಾಮಿ.
    • LinwoodGah ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.