Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಲ್ಲಸಮುದ್ರದಲ್ಲಿ ಚಾಕು ಇರಿತ ಪ್ರಕರಣ ವದಂತಿಗಳಿಗೆ ಕಿವಿಗೊಡಬಾರದು: ಎಸ್ಪಿ
    ಸುದ್ದಿ

    ಮಲ್ಲಸಮುದ್ರದಲ್ಲಿ ಚಾಕು ಇರಿತ ಪ್ರಕರಣ ವದಂತಿಗಳಿಗೆ ಕಿವಿಗೊಡಬಾರದು: ಎಸ್ಪಿ

    vartha chakraBy vartha chakraಆಗಷ್ಟ್ 11, 2022Updated:ಆಗಷ್ಟ್ 11, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ: ಇಂದು ಕೋಮುಗಲಭೆಗಳು ಸಮಾಜದ ಸ್ವಾಸ್ಥ್ಯಕ್ಕೆ ಕೊಳ್ಳಿ ಇಡುತ್ತಿವೆ. ಆದರೆ ಗದಗದಲ್ಲಿ ಆಗಬಹುದಾದ ಅನಾಹುತವನ್ನು ತಡೆಗಟ್ಟೆ ಸರಿಸಮಯಕ್ಕೆ ಸೂಕ್ತ ಸ್ಪಂದನೆ ನೀಡುವ ಮೂಲಕ ಜಿಲ್ಲಾ ಪೊಲೀಸ್ ಜನರಿಂದ ಸೈ ಎನಿಸಿಕೊಂಡಿದೆ. ಹೌದು ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಮಂಗಳವಾರ ಮೊಹರಂ ವೇಳೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಪತ್ರಿಕಾಗೋಷ್ಟಿ ನಡೆಸಿ, ಜನರಿಗೆ ಜಾಗೃತಿ ಮೂಡಿಸುವ ಮೂಲಕ ಅಶಾಂತಿ ನಿರ್ಮಿಸದಂತೆ ಮನವಿ ಮಾಡಿದ್ದಾರೆ.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಜನರ ಮೇಲೆ ದೂರು ದಾಖಲಾಗಿದ್ದು, ಆ ಪೈಕಿ ಶ್ರೀರಾಮಸೇನೆ ಕಾರ್ಯಕರ್ತ ಸೋಮು ಗುಡಿ, ಯಲ್ಲಪ್ಪ ಮಲ್ಲಾಪುರ ಹಾಗೂ ಆತನ ಸ್ನೇಹಿತ ಸಲ್ಮಾನ್ ಬಡೇಖಾನ್ ಎಂಬುರವನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಾದ ರಾಮಕೃಷ್ಣ ಹಂಡಿ, ಶಿವು ಗದಗಿನ, ದಯಾನಂದ ಗುಡಿ ಬಂಧನಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದರು.

    ಮೊಹರಂ ಮೆರವಣಿಗೆ ವೇಳೆ ಕಾಲು ತುಳಿದ ಕ್ಷುಲ್ಲಕ ವಿಷಯಕ್ಕೆ ಜಗಳವಾಗಿದೆ. ಆದರೆ ಚಾಕು ಇರಿಯುವ ಮಟ್ಟಿಗೆ ಗಂಭೀರವಾಗಲು ಏನು ಕಾರಣ ಎನ್ನುವುದು ತನಿಖೆಯಿಂದ ಗೊತ್ತಾಗಲಿದೆ. ಮೇಲ್ನೋಟಕ್ಕೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಅಂದಾಜಿಸಲಾಗಿದೆ. ಕೋಮು ದ್ವೇಷದ ಹಿನ್ನೆಲೆಯಲ್ಲಿ ನಡೆದ ಘಟನೆ ಇದಲ್ಲ ಎಂದು ಸ್ಪಷ್ಟಪಡಿಸಿದರು.

    ಘಟನೆಯಲ್ಲಿ ಗಾಯಗೊಂಡ ತೌಸಿಫ್ ನಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆತಿದೆ. ಮಂಗಳವಾರ ರಾತ್ರಿಯೇ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಜಿಮ್ಸ್ ತಜ್ಞ ವೈದ್ಯರು ನಿರಂತರ ನಿಗಾ ವಹಿಸುತ್ತಿದ್ದಾರೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಯಾರೊಬ್ಬರೂ ಘಟನೆ ಕುರಿತು ವದಂತಿ ಹಬ್ಬಿಸಬಾರದು ಎಂದು ಮನವಿ ಮಾಡಿಕೊಂಡರು.

    ಚಾಕು ಇರಿತ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆಯಾಗಿ ಜಿಲ್ಲಾ ಸಶಸ್ತ್ರ ಪಡೆಯ ಎರಡು ತುಕಡಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ ಎಂದರು.

    ಮಲ್ಲಸಮುದ್ರ ಗ್ರಾಮದಲ್ಲಿ ನಡೆದ ಚಾಕು ಇರಿತ ಪ್ರಕರಣದ ನಂತರ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಸಂಬಂಧ 15ಜನರ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ. ಘಟನೆ ನಂತರ ಗಾಯಾಳುಗಳ ಪರವಾಗಿ ಗುಂಪೊಂದು ಆರೋಪಿಗಳ ಮನೆಗೆ ನುಗ್ಗಲು ಯತ್ನಿಸಿದೆ. ಪೊಲೀಸರ ಮಾತಿಗೂ ಬೆಲೆ ಕೊಡದೆ ನುಗ್ಗಿದ 15ಜನರ ವಿರುದ್ಧ ವಿವಿಧ ಕಲಂ ಅಡಿ ಗದಗ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದರು.

    Verbattle
    Verbattle
    Verbattle
    crime ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಎರಡು ಗುಂಪಿನ‌ ಮಧ್ಯೆ ಮಾರಾಮಾರಿ
    Next Article ಬೆಂಗಳೂರಿನಲ್ಲೂ ಅಗ್ನಿಪಥ್ ನೇಮಕಾತಿ..
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Wywhyp ರಲ್ಲಿ ಸೋಮಣ್ಣ ಕಾಂಗ್ರೆಸ್ ಗೆ ಓಕೆ ಆದರೆ ಇವೆಲ್ಲಾ ಬೇಡ | V Somanna
    • Ronaldoblig ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.