ಕರ್ನಾಟಕ : ರಾಜ್ಯದಲ್ಲಿ ವಿವಿಧ ಕಾಮಗಾರಿ ಕೈಗೊಳ್ಳುವ ಗುತ್ತಿಗೆದಾರರಿಂದ 40 ಪರ್ಸೆಂಟ್ ಲಂಚ ಪಡೆಯುತ್ತಿರುವುದು ನಿಜ.ಈ ಬಗ್ಗೆ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚನೆ ಮಾಡುವಂತೆ ಗುತ್ತಿಗೆದಾರರ ಸಂಘ ಸರ್ಕಾರವನ್ನು ಆಗ್ರಹಿಸಿದೆ.
ಸಂಘದ ಪದಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಮ್ಮ ಹಲವು ಬೇಡಿಕೆಗಳ ಬಗ್ಗೆ ಸಿಎಂ ಜೊತೆ ಮಾತನಾಡಿದರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರ್ಸೇಂಟೇಜ್ ಲಂಚದ ಬಗ್ಗೆ ಹೇಳಿಕೆಗೆ ಈಗಲೂ ನಾನು ಬದ್ಧನಾಗಿರುವೆ ತನಿಖೆಗೆ ಆದೇಶಿಸಿದರೆ ಎಲ್ಲಾ ದಾಖಲೆ ನೀಡುತ್ತೇನೆ ಎಂದು ಸಿಎಂಗೆ ತಿಳಿಸಿದ್ದೇನೆ ಎಂದರು.
ಮುಖ್ಯಮಂತ್ರಿಗಳಿಗೆ ಗುತ್ತಿಗೆದಾರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಪ್ರಮುಖವಾಗಿ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡುವುದು, ಪ್ಯಾಕೇಜ್ ವ್ಯವಸ್ಥೆ ರದ್ದುಗೊಳಿಸುವುದು ಹಾಗು ಹಿರಿತನದ ಆಧಾರದಲ್ಲಿಯೇ ಬಿಲ್ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದ್ದು, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಕಾಮಗಾರಿಗಳನ್ನು ಟೆಂಡರ್ ನೀಡುವಾಗ ಪ್ಯಾಕೇಜ್ ವ್ಯವಸ್ಥೆ ರದ್ದುಗೊಳಿಸಬೇಕು, 50 ಕೋಟಿ ರೂ.ಗಿಂತಲೂ ಹೆಚ್ಚಿನ ಮೊತ್ತದ ಕಾಮಗಾರಿಗಳ ಮೇಲೆ ನಿಗಾ ವಹಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ರಚನೆ ಮಾಡಬೇಕು ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.
ಪ್ರಭಾವ ಹಾಗು ಲಂಚ ಕೊಟ್ಟು ಹಣ ಬಿಡುಗಡೆ ಮಾಡಿಸಿಕೊಳ್ಳುವ ವ್ಯವಸ್ಥೆಗೆ ತಡೆಯೊಡ್ಡಬೇಕು ಹಾಗು ಪ್ರಮುಖ ಇಲಾಖೆಗಳಲ್ಲಿ ಜಾರಿಯಲ್ಲಿರುವ 40 ಪರ್ಸೆಂಟ್ ಲಂಚದ ವ್ಯವಸ್ಥೆಯನ್ನು ನಿಯಂತ್ರಿಸಬೇಕುಹಿರಿತನದ ಆಧಾರದಲ್ಲಿಯೇ ಬಿಲ್ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದರು.
Previous Articleಕೋವಿಡ್ 4 ನೇ ಅಲೆ ಗ್ಯಾರಂಟಿ
Next Article ಎಲಾನ್ ಮಸ್ಕ್ ಈಗ ಟ್ವಿಟರ್ ಕಂಪನಿ ಓನರ್