ಸೂಪರ್‌ಸ್ಟಾರ್ ರಜನಿಕಾಂತ್ ನಾಯಕರಾಗಿ ನಟಿಸುತ್ತಿರುವ , ನೆಲ್ಸನ್ ದಿಲೀಪ್‌ಕುಮಾರ್ ಆ್ಯಕ್ಷನ್ ಕಟ್ ಹೇಳಿರುವ ಬಹುನಿರೀಕ್ಷಿತ ಜೈಲರ್ ಚಿತ್ರದ ಚಿತ್ರೀಕರಣವು ಇಂದು (ಸೋಮವಾರ) ಪ್ರಾರಂಭವಾಯಿತು. ರಜನಿಕಾಂತ್ ಅವರ ಮೊದಲ ಪೋಸ್ಟರ್ ಅನ್ನು ಸಹ ಬಿಡುಗಡೆ ಮಾಡಲಾಗಿದ್ದು ಚಿತ್ರದ ನಿರ್ಮಾಪಕರು ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ರಜನಿಕಾಂತ್ ಅವರ 169ನೇ ಚಿತ್ರ ಇದಾಗಿದ್ದು, ಪಕ್ಕಾ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಎನ್ನಲಾಗಿದೆ. ಇದೇ ಮೊದಲ ಬಾರಿಗೆ ಶಿವಣ್ಣ ಮತ್ತು ರಜನಿಕಾಂತ್ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡುತ್ತಿರುವುದು ವಿಶೇಷ.
Previous Articleರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ
Next Article ಮಾಜಿ ಮುಖ್ಯಮಂತ್ರಿಗಳಿಗೆ Z+ Security