ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆ ರಾತ್ರಿ ಒರಾಯನ್ ಮಾಲ್ನ ಪಿವಿಆರ್ ಥಿಯೇಟರ್ನಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಡೊಳ್ಳು ಸಿನೆಮ ವೀಕ್ಷಿಸಿದರು. ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಿಸಿದ ಈ ಸಿನೆಮ ಬಗ್ಗೆ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ನಿರ್ದೇಶಕ ಸಾಗರ್ ಪುರಾಣಿಕ್ ಹಾಗು ನಿರ್ಮಾಪಕರಾದ ಪವನ್ ಒಡೆಯರ್, ಅಪೇಕ್ಷಾ ಒಡೆಯರ್ ಅವರನ್ನು ಅಭಿನಂದಿಸಿದರು. ಈ ವೇಳೆ, ನಾಯಕ ನಟ ಕಾರ್ತಿಕ್ ಮಹೇಶ್, ನಾಯಕಿ ನಿಧಿ ಹೆಗಡೆ ಹಾಗು ಮಾಜಿ ಸಚಿವ ಜಮೀರ್ ಅಹಮದ್ ಹಾಜರಿದ್ದರು. ‘ನಾಡಿನ ಜಾನಪದ ಕಲೆಯನ್ನು ಜಗತ್ತಿನ ಮುಂದೆ ತೆರೆದಿಡುವಂತಹ ಚಿತ್ರ ನಿರ್ಮಾಣ ಮಾಡಿರುವ ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್ ಹಾಗು ನಿರ್ಮಾಪಕರಾದ ಪವನ್ ಒಡೆಯರ್, ಅಪೇಕ್ಷಾ ಒಡೆಯರ್ ಅವರಿಗೆ ಅಭಿನಂದನೆಗಳು. ನಾಯಕ ನಟ ಕಾರ್ತಿಕ್ ಮಹೇಶ್, ನಾಯಕಿ ನಿಧಿ ಹೆಗಡೆ ಹಾಗು ಮಾಜಿ ಸಚಿವರಾದ ಜಮೀರ್ ಅಹ್ಮದ್ ಅವರು ನನ್ನೊಂದಿಗೆ ಚಿತ್ರ ವೀಕ್ಷಿಸಿದರು’ ಎಂದು ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ. ಆಗಸ್ಟ್ 26ರಂದು ‘ಡೊಳ್ಳು’ ಚಿತ್ರ ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಸಂಭಾಷಣೆ ಮತ್ತು ಚಿತ್ರಕಥೆಯನ್ನು ಶ್ರೀನಿಧಿ ಬರೆದಿದ್ದಾರೆ. ಅನಂತ್ ಕಾಮತ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಅಭಿಲಾಷ್ ಕಲಾಥಿ ಛಾಯಾಗ್ರಹಣ ಈ ಚಿತ್ರಕ್ಕಿದೆ.
ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನೆಮ ವೀಕ್ಷಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
Previous Articleಗುತ್ತಿಗೆ ಬಿಲ್ ಪಾವತಿಗೆ ಶೇ.40 ಕಮೀಷನ್ ಕಡ್ಡಾಯ
Next Article ಚಿರತೆ ಸೆರೆಗೆ ಆನೆ, ಹಂದಿ ಬಲೆ