ಬೆಂಗಳೂರು,ಆ.25– ಮಾದಕವಸ್ತು ಮಾರಾಟ ಮಾಡುತ್ತಿದ್ದ ಮೂವರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 60 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ನೈಜೀರಿಯಾ ದ ಒಸಸ್ ಮೋಸಸ್, ಮಾರ್ಕ್ ಮೌರೀಸ್ ಹಾಗು ಒಬಿನಾ ಪ್ರಾನ್ಸಿಸ್ ವಿಕ್ಟರ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತ ರಮಣ್ ಗುಪ್ತ ತಿಳಿಸಿದ್ದಾರೆ.
ಆರೋಪಿಗಳಿಂದ ಸುಮಾರು 60 ಲಕ್ಷ ಬೆಲೆ ಬಾಳುವ 561 ಗ್ರಾಂ ತೂಕದ ಮಾದಕ ವಸ್ತುವಾದ ಎಂಡಿಎಂಎ ಕ್ರಿಸ್ಟಲ್, ಮೂರು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ನೈಜೀರಿಯಾದಿಂದ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು ಅಕ್ರಮವಾಗಿ ನಗರದಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ವಾಸ ಮಾಡುತ್ತಿದ್ದರು.
ಡ್ರಗ್ಸ್ ದಂಧೆ ನಡೆಸುತ್ತಿದ್ದ ಆರೋಪಿಗಳು ಹೆಣ್ಣೂರು ಸುತ್ತಮುತ್ತಲಲ್ಲಿ ಕೇರಳ ಮೂಲದವರಿಗೆ ಹಾಗು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದರು.
ಆರೋಪಿಗಳ ಪೈಕಿ ಓರ್ವ 2021 ನೇ ಸಾಲಿನಲ್ಲಿ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮಾಧಕ ವಸ್ತು ಮಾರಾಟ ಮಾಡಿ ಸಿಕ್ಕಿಬಿದ್ದಿದ್ದು, ಆತನ ವಿರುದ್ದ ಪ್ರಕರಣ ದಾಖಲಾಗಿ ನ್ಯಾಯಾಂಗ ಬಂಧನದಲ್ಲಿದ್ದು, ಬಿಡುಗಡೆಯಾದ ಬಳಿಕ ಮತ್ತೆ ದಂಧೆ
ಮುಂದುವರೆಸಿರುವುದು ತನಿಖೆಯಿಂದ ಧೃಡಪಟ್ಟಿದೆ.
ಬಂಧಿತ ಆರೋಪಿಗಳ ವಿರುದ್ದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆ-1985 ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.
Drugs ಮಾರುತ್ತಿದ್ದ ನೈಜಿರಿಯಾ ಪ್ರಜೆಗಳು..!!
Previous Articleಜಾಕ್ವೆಲಿನ್ ಕಷ್ಟಪಟ್ಟ ಹಣವಂತೆ..!
Next Article ಅಧಿಕಾರಿಗಳ ಮೈ ಚಳಿ ಬಿಡಿಸಿದ ಸಾರ್ವಜನಿಕರು