ಬೆಂಗಳೂರು : ರಾಜ್ಯದ ಹಿರಿಯ ರಾಜಕಾರಣಿ, ರಾಜ್ಯ ಸರ್ಕಾರದ
ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಇನ್ನಿಲ್ಲ. ತೀವ್ರ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಅವರ ನಿವಾಸದಲ್ಲಿ ಟೀವಿ ನೋಡಿತ್ತಾ ಕುಳಿತಿದ್ದ ಉಮೇಶ್ ಕತ್ತಿ ಅವರು ರಾತ್ರಿ 10ರ ಸುಮಾರಿಗೆ ತೀವ್ರ ಎದೆನೋವಿನಿಂದ ಕುಸಿದು ಕುಳಿತರು .ತಕ್ಷಣವೇ ಅವರನ್ನು ಸಮೀಪದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಲಿಲ್ಲ.
ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಅವರನ್ನು ದಾಖಲು ಮಾಡಲಾಯಿತು.ಆದರೆ ಆ ವೇಳೆಗಾಗಲೆ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಆಸ್ಪತ್ರೆಗೆ ದೌಡಾಯಿಸಿದರು.