Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫಸ್ಟ್ Rank ಪಡೆದವರೇ ಅರೆಸ್ಟ್!
    ಅಪರಾಧ

    ಫಸ್ಟ್ Rank ಪಡೆದವರೇ ಅರೆಸ್ಟ್!

    vartha chakraBy vartha chakraನವೆಂಬರ್ 3, 2022Updated:ನವೆಂಬರ್ 3, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಲಬುರಗಿ,ನ.3-ಸಬ್​ ಇನ್​ಸ್ಪೆಕ್ಟರ್​(ಪಿಎಸ್‌ಐ) ನೇಮಕಾತಿ ಅಕ್ರಮದ ಸಂಬಂಧ
    ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾ ಹುಂಡೇಕರ್ ನನ್ನು ಬಂಧಿಸಿರುವ ಸಿಐಡಿ ಪೊಲೀಸರು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.
    ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಅವರು ಮೊದಲ ರ‍್ಯಾಂಕ್ ಪಡೆದಿದ್ದ ಸುಪ್ರಿಯಾ ಅಕ್ರಮ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡು ನಿನ್ನೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.
    ಆರೋಪಿಯನ್ನು ವಿಚಾರಣೆ ಒಳಪಡಿಸಿ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಲಾಗಿದ್ದು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ವಶಕ್ಕೆ ತೆಗೆದುಕೊಂಡು ಅಕ್ರಮವಾಗಿ ಪರೀಕ್ಷೆ ಬರೆದಿರುವ ಮತ್ತಷ್ಟು ಮಂದಿಯ ಬಗ್ಗೆ ಮಾಹಿತಿಯನ್ನು ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ತಂಡವು, ಇನ್ನೊಬ್ಬ ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದು, ಹುಡುಕಾಟ ನಡೆಸುತ್ತಿದೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲ್ಲೂಕು ಹಿಪ್ಪರಗಾ ಗ್ರಾಮದ ನಿವಾಸಿ ಸುಪ್ರಿಯಾ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿರುವ ಆರೋಪ ಎದುರಿಸುತ್ತಿದ್ದಾರೆ.
    ಕಲಬುರ್ಗಿಯ ಸರ್ಕಾರಿ ಪದವಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸುಪ್ರಿಯಾ ಪರೀಕ್ಷೆ ಬರೆದಿದ್ದರು. ಮೊದಲ ರ‍್ಯಾಂಕ್ ಪಡೆದಿದ್ದ ಸುಪ್ರಿಯಾ 1ನೇ ಪತ್ರಿಕೆಯಲ್ಲಿ 50ಕ್ಕೆ 24, 2ನೇ ಪತ್ರಿಕೆಯಲ್ಲಿ 150ಕ್ಕೆ 131.25 ಅಂಕ ಪಡೆದಿದ್ದರು. ಎರಡೂ ಪತ್ರಿಕೆಗಳಿಂದ 155.25 ಅಂಕ ಪಡೆದಿದ್ದ ಸುಪ್ರಿಯಾ ಹುದ್ದೆಗೆ ಆಯ್ಕೆಯಾಗಿದ್ದರು.
    ಪಿಎಸ್​ಐ ಅಕ್ರಮಕ್ಕೆ ಸಂಬಂಧಿಸಿದಂತೆ ಈವರೆಗೆ 52 ಮಂದಿಯನ್ನು ಸಿಐಡಿ ಬಂಧಿಸಿದೆ. ಕರ್ನಾಟಕ ಸರ್ಕಾರವು ಅಕ್ಟೋಬರ್ 2021ರಲ್ಲಿ ಪಿಎಸ್​ಐ ನೇಮಕಾತಿಗಾಗಿ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಿತ್ತು. ಸುಮಾರು 54,041 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಅಭ್ಯರ್ಥಿಗಳಿಂದ ಲಂಚ ಪಡೆದಿರುವ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರದ ಸಿಬ್ಬಂದಿ ಅಕ್ರಮ ಎಸಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿತ್ತು. ಒತ್ತಡ ಹೆಚ್ಚಾಗಿ, ದೂರುಗಳು ದಾಖಲಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ಆದೇಶಿಸಿತ್ತು.
    ಆರಂಭದಲ್ಲಿ ಕಲಬುರ್ಗಿ ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ್ದ ಹಲವರನ್ನು ಪೊಲೀಸರು ಬಂಧಿಸಿದ್ದರು. ನಂತರ ಪೊಲೀಸ್ ಅಧಿಕಾರಿಗಳ ಬಂಧನವಾಯಿತು. ನೇಮಕಾತಿ ವಿಭಾಗದ ಎಡಿಜಿಪಿ, ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಅವರ ಬಂಧನ-ವಿಚಾರಣೆಯೂ ನಡೆಯಿತು.
    ಸೇಡಂ ಪಟ್ಟಣದ ವೀರೇಶ್ ಎಂಬ ವಿದ್ಯಾರ್ಥಿಯ ವಿಚಾರಣೆಯ ನಂತರ ಹಗರಣದ ಹಲವು ಮಹತ್ವದ ಅಂಶಗಳು ಬೆಳಕಿಗೆ ಬಂದವು. ಕಲಬುರ್ಗಿಯ ಜ್ಞಾನಜ್ಯೋತಿ ಶಾಲೆಯೇ ಅಕ್ರಮದ ಕೇಂದ್ರ ಎಂಬುದು ಸಾಬೀತಾಯಿತು. ಹಗರಣದ ಪ್ರಮುಖ ಆರೋಪಿಯಾಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಇದೇ ಶಾಲೆಯ ಆಡಳಿತ ಮಂಡಳಿಯ ಜವಾಬ್ದಾರಿ ಹೊತ್ತಿದ್ದರು. ದಿವ್ಯಾ ಹೆಸರು ಬಹಿರಂಗವಾದ ನಂತರ ರಾಜಕಾರಿಣಿಗಳ ಹಸ್ತಕ್ಷೇಪ ಇದ್ದ ಬಗ್ಗೆಯೂ ಮಾತುಗಳು ಕೇಳಿಬಂದಿದ್ದವು.
    ಹಗರಣಕ್ಕೆ ಸಂಬಂಧಿಸಿದಂತೆ ಈವರೆಗೆ ಕಲಬುರ್ಗಿ, ಬೆಂಗಳೂರು ಮತ್ತು ಇತರ ನಗರಗಳಲ್ಲಿ ಈವರೆಗೆ ನೂರಕ್ಕೂ ಹೆಚ್ಚು ಜನರಲ್ಲಿ ಸಿಐಡಿ ಬಂಧಿಸಿದೆ. ಈ ಪೈಕಿ 52 ಅಭ್ಯರ್ಥಿಗಳು ಸೇರಿದ್ದಾರೆ. ಕಲಬುರ್ಗಿಯಲ್ಲಿ 8 ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ ಸಿಐಡಿ ಅಧಿಕಾರಿಗಳು
    ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

    Verbattle
    Verbattle
    Verbattle
    ಕಾಲೇಜು ನ್ಯಾಯ ವಿದ್ಯಾರ್ಥಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮಡಿಕೇರಿಯ ತುಫೈಲ್ ಬಂಧನ ಯಾವಾಗ?
    Next Article ವರ್ಷಾಂತ್ಯದಲ್ಲಿ ಸಿನೆಮ ಹಬ್ಬ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    ಸಫಾರಿಗೆ ಹಸಿರು ನಿಶಾನೆ. ಆದರೆ, ಈ ಷರತ್ತು ಪಾಲಿಸಲೇಬೇಕು

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Go Here ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • espect_cu_jzpn ರಲ್ಲಿ ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    • Neiroset dlya ychebi_amsl ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.