ಬೆಂಗಳೂರು,ನ.8-ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸುತ್ತಿರುವ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ
ನೀವು ಅಧಿಕಾರಕ್ಕೆ ಬರುವುದರ ಬಗ್ಗೆ ಚಿಂತಿಸುವುದನ್ನು ಬಿಟ್ಟು ನಿಮಗಾಗಿ ಒಂದು ಕ್ಷೇತ್ರವನ್ನು ಮೊದಲು ಅಂತಿಮಗೊಳಿಸಿ ಎಂದು ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುವುದರ ಬಗ್ಗೆ ಸಿದ್ದರಾಮಯ್ಯನವರು ಕನಸು ಕಾಣುತ್ತಿದ್ದಾರೆ. ನೀವೆಲ್ಲೇ ಸ್ರ್ಪಧಿಸಿದರೂ ಪರಮೇಶ್ವರ್, ಖರ್ಗೆ, ಡಿಕೆಶಿ ನಿಮಗೆ ಖೆಡ್ಡಾ ತೋಡುವುದು ಖಚಿತ ಎಂದು ಎಚ್ಚರಿಸಿದ್ದಾರೆ.
ಕಾಂಗ್ರೆಸ್ಸಿನ ಎವರ್ ಗ್ರೀನ್ ಬಾಲಕ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ಸಿಗರನ್ನು ಒಗ್ಗೂಡಿಸಲು ಮಾಡಿದ ಎಲ್ಲಾ ಕಸರತ್ತುಗಳು ವಿಫಲವಾಗಿದೆ.ರಾಹುಲ್ ಗಾಂಧಿ ಸಹಿತ ಯಾರಿಂದಲೂ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರನ್ನು ಜೋಡಿಸಲು ಸಾಧ್ಯವಿಲ್ಲ. ಇವರಿಬ್ಬರು ಒಂದಾಗಲು ಕುರ್ಚಿಯ ಆಸೆ ಬಿಡಬೇಕು, ಸಿದ್ದರಾಮಯ್ಯ ನಿಮ್ಮಿಂದ ಸಿಎಂ ಕುರ್ಚಿ ಆಸೆ ಬಿಡಲು ಸಾಧ್ಯವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.
ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರಂತೆ ಸಿಎಂ ಹುದ್ದೆಗಾಗಿ ಕಚ್ಚಾಡುತ್ತಿಲ್ಲ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿಗರು ಜೊತೆಯಾಗಿ ಜನಸಂಕಲ್ಪ ಯಾತ್ರ ಮಾಡುತ್ತಿದ್ದಾರೆ. ಯಾತ್ರೆಗೆ ರಾಜ್ಯಾದಾದ್ಯಂತ ಸಿಗುತ್ತಿರುವ ಜನ ಬೆಂಬಲದಿಂದ ಕಾಂಗ್ರೆಸ್ ನಾಯಕರು ಕಂಗಾಲಾಗಿದ್ದಾರೆ ಎಂದು ಕುಟುಕಿದ್ದಾರೆ.
Previous Articleಹಿಂದೂ ಎಂದರೆ ಅಶ್ಲೀಲ, ಕೇಸರಿ ಎಂದರೆ ಅಲರ್ಜಿ?
Next Article ಬ್ಲಾಕ್ ಮೇಲ್ ಗೆ ಬಲಿಯಾದ ಮಹಿಳೆ