Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಂಡಾಯದ ಕಹಳೆ ಊದಿದ ಈಶ್ವರಪ್ಪ
    ರಾಜ್ಯ

    ಬಂಡಾಯದ ಕಹಳೆ ಊದಿದ ಈಶ್ವರಪ್ಪ

    vartha chakraBy vartha chakraಡಿಸೆಂಬರ್ 19, 2022Updated:ಡಿಸೆಂಬರ್ 19, 2022ಯಾವುದೇ ಟಿಪ್ಪಣಿಗಳಿಲ್ಲ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಡಿ.19- ಸಂಘಟಿತ ಹೋರಾಟ ಮತ್ತು ಒಗ್ಗಟ್ಟು ಪ್ರದರ್ಶನದ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಹೊರಟಿರುವ ಬಿಜೆಪಿಗೆ ಇದೀಗ ಅಸಮಾಧಾನದ‌ ಧಗೆ ಆವರಿಸಿದೆ.
    ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಭಾರಿ ಕಸರತ್ತು ನಡೆಸಿದರೂ ಹೈಕಮಾಂಡ್ ಹಸಿರು ನಿಶಾನೆ ತೋರದ ಪರಿಣಾಮ ಇದೀಗ ಸಿಎಂ ‌ಅಸಮಧಾನದ ಧಗೆಯಲ್ಲಿ ನರಳುವಂತಾಗಿದೆ.
    ಭ್ರಷ್ಟಾಚಾರದ ಆರೋಪದ ಸುಳಿಯಲ್ಲಿ ಸಿಲುಕಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ನಾಯಕ ಈಶ್ವರಪ್ಪ ಇದೀಗ ಗುತ್ತಿಗೆದಾರ ಸಂತೋಷ್ ಸಾವಿನ ತನಿಖೆಯಲ್ಲಿ ನಿರ್ದೋಷಿಯಾಗಿದ್ದಾರೆ ಈ ಹಿನ್ನೆಲೆಯಲ್ಲಿ ಮತ್ತೆ ತಮಗೆ ಮಂತ್ರಿ ಸ್ಥಾನ ನೀಡುವಂತೆ ಪಟ್ಟು ಹಿಡಿದಿದ್ದಾರೆ.
    ಗುತ್ತಿಗೆದಾರನ ಸಾವಿನ ಪ್ರಕರಣದಲ್ಲಿ ತಮ್ಮನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲಾಯಿತು. ಜನ ಸಾಮಾನ್ಯರ ಮನಸ್ಸಿನಲ್ಲಿ ತಮ್ಮನ್ನು ಕಳಂಕಿತ ಎಂದು ಬಿಂಬಿಸಲಾಗಿದೆ ಈಗ ತನಿಖಾ ಸಂಸ್ಥೆ ತಮ್ಮನ್ನು ನಿರ್ದೋಷಿ ಎಂದು ಹೇಳಿರುವ ಹಿನ್ನೆಲೆಯಲ್ಲಿ ತಮಗೆ ಮತ್ತೆ ಮಂತ್ರಿ ಸ್ಥಾನ ಬೇಕು.ಹೀಗಾದರೆ ಮಾತ್ರ ತಮಗಂಟಿರುವ ಕಳಂಕ ದೂರಾಗಲಿದೆ ಎಂದು ವರಿಷ್ಠರ ಮುಂದೆ ಅಹವಾಲು ಮಂಡಿಸಿದ್ದಾರೆ. ಇದಕ್ಕೆ ವರಿಷ್ಠರು ಮುಖ್ಯಮಂತ್ರಿಯತ್ತ ಬೆರಳು ತೋರಿಸಿದ್ದು ಅವರು ತಮ್ಮನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡರೆ ತಮ್ಮದೇನು ಅಭ್ಯಂತರವಿಲ್ಲ ಎಂದಿದ್ದಾರೆಂದು ಗೊತ್ತಾಗಿದೆ.
    ಆದರೆ ಸಿಎಂ ಬೊಮ್ಮಾಯಿ‌ ಇವರೊಬ್ಬರಿಗಾಗಿ ಸಂಪುಟ ವಿಸ್ತರಣೆ ಮಾಡಿದರೆ ಬಿಕ್ಕಟ್ಟು ಎದುರಿಸಬೇಕಾಗಬಹುದು.ಇವರೊಂದಿಗೆ ಖಾಲಿ ಇರುವ ಸ್ಥಾನಗಳ ಭರ್ತಿಗೂ ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ ಅದರಲ್ಲೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಮಾಧಾನ ಪಡಿಸುವ ಅಗತ್ಯವಿದೆ‌ ಇದಕ್ಕಾಗಿ ಅವರ ಪುತ್ರ ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ವರಿಷ್ಠರು ಇದಕ್ಕೆ ಸಮ್ಮತಿಸಲು ನಿರಾಕರಿಸಿದ್ದಾರೆ ಎಂದು ಗೊತ್ತಾಗಿದೆ.
    ಮತ್ತೊಂದೆಡೆ ವರಿಷ್ಠರು ಅನುಮತಿ ನೀಡಿದರೂ ತಮಗೆ ಮಂತ್ರಿ ಸ್ಥಾನ ನೀಡುತ್ತಿಲ್ಲ ಎಂದು ಆಕ್ರೋಶಗೊಂಡು ಸಿಎಂ ಬೊಮ್ಮಾಯಿ‌ ವಿರುದ್ಧ ಮುನಿಸಿಕೊಂಡಿರುವ ಈಶ್ವರಪ್ಪ ಇದೀಗ ಸಿಎಂ ನೇತೃತ್ವದ ಎಲ್ಲಾ ಕಾರ್ಯಕ್ರಮಗಳನ್ನು ಬಹಿಷ್ಕರಿಸಿದ್ದಾರೆ.
    ತಮ್ಮ ತವರು ಜಿಲ್ಲೆ ಶಿವಮೊಗ್ಗದ ಹಲವೆಡೆ ನಡೆದ ಜನಸಂಕಲ್ಪ ಯಾತ್ರೆಯಿಂದಲೂ ದೂರ ಉಳಿಯುವ ಮೂಲಕ ತಮ್ಮ ಅಸಮಾಧಾನ ಬಹಿರಂಗ ಪಡಿಸಿದರೂ ಪ್ರಯೋಜನವಾಗಲಿಲ್ಲ. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಅವರು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ್ದಾರೆ.
    ಈ ಕುರಿತಂತೆ ಬಿಜೆಪಿಯ ಹಲವು ನಾಯಕರು ಮಧ್ಯ ಪ್ರವೇಶಿಸಿ ಬಿಕ್ಕಟ್ಟು ಇತ್ಯರ್ಥಕ್ಕೆ ಮಾಡಿದ ಪ್ರಯತ್ನ ವಿಫಲವಾಗಿದೆ. ಮುಖ್ಯಮಂತ್ರಿ ವಿರುದ್ಧ ಆಕ್ರೋಶ ಹೊರಹಾಕಿರುವ ಅವರು ತಾವು ಕಲಾಪಕ್ಕೆ ಬಂದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ ಹೀಗಾಗಿ ಅದರಿಂದ ದೂರ ಉಳಿಯುವುದೆ ಸೂಕ್ತ ಎಂಬ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದರು ಎಂದು ಉನ್ನತ ಮೂಲಗಳು ತಿಳಿಸಿವೆ.
    ಈ ನಡುವೆ ಬಾಗಲಕೋಟೆ ಪ್ರವಾಸದಲ್ಲಿರುವ ಈಶ್ವರಪ್ಪ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ತಾವು ವಿಧಾನಸಭೆ ಕಲಾಪದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದರು.
    ಸಚಿವ ಸಂಪುಟಕ್ಕೆ ನನ್ನನ್ನು ತೆಗೆದುಕೊಳ್ಳದ್ದಕ್ಕೆ ಅಭಿಮಾನಿಗಳಿಗೆ ನೋವಾಗಿದೆ‌. ಇದು ನನಗೂ ನೋವುಂಟು ಮಾಡಿದೆ. ಆದ್ದರಿಂದ ಬೆಳಗಾವಿ ವಿಧಾನಮಂಡಲ ಅಧಿವೇಶನದಿಂದ ದೂರ ಉಳಿಯುತ್ತೇನೆ’ ಎಂದರು.
    ಜನರು ಫೋನ್ ಮಾಡಿ ನಿಮ್ಮನ್ನೇಕೆ ಸಂಪುಟಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ಇದರಿಂದ ಅವಮಾನ ಆಗ್ತಿದೆ. ಇದನ್ನು ಅರ್ಥ ಮಾಡಿಸಲು ಸೌಜನ್ಯದ ಪ್ರತಿಭಟನೆ ಮಾಡುತ್ತಿದ್ದೇನೆ’
    ಇವತ್ತು, ನಾಳೆ ನಿಮ್ಮನ್ನ ಸಚಿವರನ್ನ ಮಾಡ್ತೀವಿ ಎಂದು ಸಿಎಂ ಬೊಮ್ಮಾಯಿ ಹೇಳುತ್ತಲೇ ಇದ್ದಾರೆ. ಯಾವ ಕಾರಣಕ್ಕೆ ತೆಗೆದುಕೊಳ್ಳುತ್ತಿಲ್ಲ ಗೊತ್ತಿಲ್ಲ’ ಎಂದು ಬೇಸರ ಹೊರ ಹಾಕಿದರು.
    ತಮ್ಮ ಮೇಲೆ ಆಪಾದನೆ ಬಂದಾಗ ನಾನೇ ರಾಜೀನಾಮೆ ಕೊಡಲು ಮುಂದಾದಾಗ ಪಕ್ಷದ ಹಿರಿಯರು ಆರಂಭದಲ್ಲಿ ಬೇಡ ಎಂದಿದ್ದರು. ನಂತರ ಅವರನ್ನು ಒಪ್ಪಿಸಿ ರಾಜೀನಾಮೆ ಕೊಟ್ಟಿದ್ದೆ. ನನಗೆ ವಯಸ್ಸಾಗಿಲ್ಲ. ಸಚಿವ ಸ್ಥಾನ ನೀಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಾಗಿರುವುದು ಮುಖ್ಯಮಂತ್ರಿಗಳು ಎಂದು ಹೇಳಿದರು.
    ಕಾಂಗ್ರೆಸ್ ಆಡಳಿತದ ಕಾಲದಲ್ಲಿ ಕೆ.ಜೆ.ಚಾರ್ಜ್ ಅವರ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಕೊಡಿ ಎಂದು ವಿಪಕ್ಷ ನಾಯಕನಾಗಿ ನಾನೇ ಒತ್ತಾಯಿಸಿದ್ದೆ. ಅವರು ರಾಜೀನಾಮೆ ಕೊಟ್ಟರು. ಕ್ಲೀನ್ ಚೀಟ್ ಬಂದ ತಕ್ಷಣ ಕಾಂಗ್ರೆಸ್ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡರು. ಇದೀಗ ನನಗೆ ಕ್ಲೀನ್ ಚಿಟ್ ಸಿಕ್ಕಿದರೂ, ಸಂಪುಟಕ್ಕೆ ಸೇರಿಸಿಲ್ಲ ಯಾಕೆಂಬುದು ನನಗೆ ಗೊತ್ತಿಲ್ಲ. ಈ ವಿಚಾರವಾಗಿ ಸಿಎಂ ರಾಜ್ಯದ ಜನತೆಗೆ ಉತ್ತರ ನೀಡಬೇಕಿದೆ ಎಂದರು.
    ವಿವಾದ ಮಾಡಬೇಡಿ :
    ಮತ್ತೊಂದೆಡೆ ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಲು ಮುಖ್ಯಮಂತ್ರಿ ಬೊಮ್ಮಾಯಿ‌ ನಿರಾಕರಿಸಿದ್ದಾರೆ.ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನೀವು ಅದನ್ನೆಲ್ಲ ಸೃಷ್ಟಿ ಮಾಡಿಕೊಂಡು ಹೇಳಬೇಡಿ. ನಾನು ಈಶ್ವರಪ್ಪ ಜೊತೆ ಮಾತಾಡ್ತೀನಿ ಎಂದು ಹೇಳಿದರು.

    Verbattle
    Verbattle
    Verbattle
    ಈಶ್ವರಪ್ಪ ಕಾಂಗ್ರೆಸ್ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಸುವರ್ಣಸೌಧದ ಮೆಟ್ಟಿಲ ಮೇಲೆ ಕುಳಿತ ಕಾಂಗ್ರೆಸ್ಸಿಗರು
    Next Article DK ಶಿವಕುಮಾರ್ ಗೆ ಮತ್ತೊಮ್ಮೆ IT ಹೊಡೆತ
    vartha chakra
    • Website

    Related Posts

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಫೆಬ್ರವರಿ 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • винлаб промокод на скидку ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 모임술집 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • AnthonyWig ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.