Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೆ ಧೋನಿ ಸಾರಥ್ಯ
    ಸುದ್ದಿ

    ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೆ ಧೋನಿ ಸಾರಥ್ಯ

    vartha chakraBy vartha chakraಮೇ 1, 2022Updated:ಮೇ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಈ ಬಾರಿಯ ಟಾಟಾ ಐಪಿಎಲ್ ಪಂದ್ಯಾವಳಿ ಉದ್ಘಾಟನೆಗೆ ತುಸು ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ರವೀಂದ್ರ ಜಡೇಜಾ ಅವರಿಗೆ ಹಸ್ತಾಂತರಿಸಿ, ಮಹೇಂದ್ರ ಸಿಂಗ್ ಧೋನಿ ಅಚ್ಚರಿ ಮೂಡಿಸಿದ್ದರು. ಆದರೆ, ಜಡೇಜಾ ನಾಯಕತ್ವದಿಂದ ಕೆಳಗಿಳಿದ ಕಾರಣ ಮುಳುಗುತ್ತಿರುವ ಚೆನ್ನೈ ದೋಣಿಗೆ ಧೋನಿಯೇ ಮತ್ತೆ ನಾವಿಕನಾಗಬೇಕಾಗಿದೆ.
    ಈವರೆಗೆ ಆಡಿರುವ ಎಂಟು ಪಂದ್ಯಗಳ ಪೈಕಿ ಕೇವಲ 2ನ್ನು ಗೆದ್ದಿರುವ ಚೆನ್ನೈ, ಅಂಕಪಟ್ಟಿಯಲ್ಲಿ ಮುಂಬೈಗಿಂತ ಕೊಂಚ ಮೇಲಿದೆ ಅಷ್ಟೇ. ಅನುಭವಿ ಆಟಗಾರರನ್ನು ಹೊಂದಿರುವ ಚೆನ್ನೈ ಹಿಂದೆಂದೂ ಇಷ್ಟೊಂದು ಹೀನಾಯವಾಗಿ ಸೋತಿದ್ದಿಲ್ಲ. ನಾಯಕತ್ವದ ಒತ್ತಡವನ್ನು ನಿಭಾಯಿಸುವಲ್ಲಿ ಜಡೇಜಾ ವಿಫಲರಾಗಿರುವುದು ಸ್ಪಷ್ಟವಾಗಿತ್ತು. ನಾಯಕನಾಗಿ ಜಡೇಜಾ ಆಡಿರುವ 8 ಪಂದ್ಯಗಳಲ್ಲಿ ಕೇವಲ 112 ರನ್ ಹಾಗೂ 5 ವಿಕೆಟ್ ಗಳಿಸಿದ್ದು, ಸ್ಟ್ರೈಕ್ ರೇಟ್ ಕೂಡ ಕುಸಿದಿದೆ.
    ಹೀಗಾಗಿ, ತನ್ನ ಆಟದ ಮೇಲೆ ಹೆಚ್ಚು ಗಮನ ಹರಿಸುವ ಸಲುವಾಗಿ ನಾಯಕತ್ವವನ್ನು ತ್ಯಜಿಸುವ ನಿರ್ಧಾರವನ್ನು ಜಡೇಜಾ ತೆಗೆದುಕೊಂಡಿದ್ದಾರೆ ಹಾಗೂ ತಂಡವನ್ನು ಮತ್ತೆ ಮುನ್ನಡೆಸುವಂತೆ ಧೋನಿ ಅವರಲ್ಲಿ ಮನವಿ ಮಾಡಿದ್ದಾರೆಂದು ಸಿಎಸ್‌ಕೆಯ ಪ್ರಕಟಣೆ ತಿಳಿಸಿದೆ.
    2008ರಲ್ಲಿ ಐಪಿಎಲ್ ಪಂದ್ಯಾವಳಿ ಆರಂಭವಾದಲ್ಲಿಂದಲೂ ಧೋನಿಯೇ ಆ ತಂಡದ ನಾಯಕರಾಗಿದ್ದರು. 2013ರಲ್ಲಿ ಸ್ಪಾಟ್ ಫಿಕ್ಸಿಂಗ್ ಹಗರಣ ಬೆಳಕಿಗೆ ಬಂದ ಮೇಲೆ ಚೆನ್ನೈ ತಂಡ ಎರಡು ವರ್ಷ ಅಮಾನತಾಗಿತ್ತು. ತಂಡವನ್ನು ಮುನ್ನಡೆಸಿದ 213 ಪಂದ್ಯಗಳಲ್ಲಿ ಧೋನಿ 130 ಗೆಲುವು ಹಾಗೂ 81 ಸೋಲುಗಳನ್ನು ಕಂಡಿದ್ದು, ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಅವರ ನಾಯಕತ್ವದಲ್ಲಿ ಚೆನ್ನೈ ತಂಡ ನಾಲ್ಕು ಬಾರಿ ಚಾಂಪಿಯನ್ ಕೂಡ ಆಗಿದೆ.
    ಭಾನುವಾರ ರಾತ್ರಿ ಹೈದರಾಬಾದ್ ತಂಡದ ವಿರುದ್ಧ ನಡೆಯುವ ಪಂದ್ಯವನ್ನು ಚೆನ್ನೈ ಧೋನಿ ನಾಯಕತ್ವದಲ್ಲೇ ಆಡಲಿದೆ.

    Verbattle
    Verbattle
    Verbattle
    #Csk #Dhoni #jadeja #tataipl
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಮ್ ಬದಲಾಗ್ತಿದಾರೆ
    Next Article ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ: ಕೂದಲೆಳೆಯಲ್ಲಿ ಪಾರಾದ ಪ್ರಯಾಣಿಕರು
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Walterfak ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • prideandprejudicepCow ರಲ್ಲಿ ಬೆಂಗಳೂರಿನಲ್ಲಿ ಕೆನಡಾ ಗೆ ಇನ್ನು ವೀಸಾ ಸಿಗೋದಿಲ್ಲ! | Canada
    • 777bet_vopr ರಲ್ಲಿ ಮೋದಿಗೂ ಅದಾನಿಗೂ ಲವ್ವು – ಬೀದಿಗಿಳಿದ ಹತ್ತಿಪ್ಪತ್ತು ಹುಡುಗರ ಡವ್ವು
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.