ಚಿತ್ರದುರ್ಗ.
ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರುಘಾ ಮಠ (Murugha Mutt)ದ ಶಿವಮೂರ್ತಿ ಶರಣ (Shivamurthy Murugha Sharanaru) ರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಎರಡನೇ ಪ್ರಕರಣದ ತನಿಖೆ ನಡೆಸಿದ ಪೊಲೀಸರು, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ 761 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.
ತನಿಖಾಧಿಕಾರಿ ಜನವರಿ 10ರಂದು ಸಲ್ಲಿಸಿದ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯ ಫೆಬ್ರವರಿ 10ರಂದು ಸ್ವೀಕರಿಸಿದೆ. ‘ಎ’ ಮತ್ತು ‘ಬಿ’ ಎಂಬ ಎರಡು ದೋಷಾರೋಪ ಪಟ್ಟಿಗಳನ್ನು ತನಿಖಾಧಿಕಾರಿ ನೀಡಿದ್ದಾರೆ. ‘ಎ’ 366 ಹಾಗೂ ‘ಬಿ’ 395 ಪುಟಗಳ ದೋಷಾರೋಪ ಪಟ್ಟಿ ಇದೆ. 73 ಸಾಕ್ಷ್ಯಗಳನ್ನು ಪೊಲೀಸರು ಉಲ್ಲೇಖಿಸಿದ್ದಾರೆ. ನಾಲ್ವರು ಸಂತ್ರಸ್ತ ವಿದ್ಯಾರ್ಥಿನಿಯರ ಪೈಕಿ ಇಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಹೇಳಿದ್ದಾರೆ.

