Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣ ಸಂಗ್ರಹಕ್ಕೆ ವಾಮ ಮಾರ್ಗ – Congress ಆರೋಪ
    ಚುನಾವಣೆ 2024

    ಹಣ ಸಂಗ್ರಹಕ್ಕೆ ವಾಮ ಮಾರ್ಗ – Congress ಆರೋಪ

    vartha chakraBy vartha chakraಫೆಬ್ರವರಿ 15, 202325 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.

    ‘ಚುನಾವಣೆ ಸಮೀಪಿಸುತ್ತಿರುವಂತೆ ಹಣ ಮಾಡುವ ಹಪಾಹಪಿಗೆ ಬಿದ್ದಿರುವ BJP ರಾಜ್ಯ ಸರ್ಕಾರದ ಮೂಲಕ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ನೀರಾವರಿ ಇಲಾಖೆ (Irrigation Department) ಕಾಮಗಾರಿಗಳಲ್ಲಿ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’ ಎಂದು Congress ಆಪಾದಿಸಿದೆ.

    ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ (Randeep Singh Surjewala) ಜೊತೆಗೆ ಸುದ್ದಿಗೋಷ್ಠಿ ನಡೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar), ‘ಈ ಸರ್ಕಾರ ರಾಜ್ಯದ ಬೊಕ್ಕಸವನ್ನು ಎದ್ವಾತದ್ವಾ ಲೂಟಿ ಮಾಡಲು ಆರಂಭ ಮಾಡಿದೆ. ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಚುನಾವಣೆಗೆ ದುಡ್ಡು ಮಾಡಿಕೊಳ್ಳುವ ಉದ್ದೇಶದಿಂದ ಯಾವೆಲ್ಲ ಶಾಸಕರಿಗೆ ಮಂತ್ರಿ ಆಗದೆ ಇರುವುದರಿಂದ ಅಸಮಧಾನ ಇದೆಯೋ ಅವರಿಗೆ ದುಡ್ಡು ಮಾಡಿಕೊಡಲು ಹೊರಟಿದೆ’ ಎಂದು ಆಪಾದಿಸಿದರು.

    ‘ಇದಕ್ಕಾಗಿ ತರಾತುರಿಯಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ, ವಿಶ್ವೇರಯ್ಯ ನೀರಾವರಿ ನಿಗಮದಲ್ಲಿ, ಕರ್ನಾಟಕ ನೀರಾವರಿ ನಿಗಮಗಳ ಸಭೆ ಕರೆದು ಯೋಜನೆಗಳಿಗೆ ಅನುಮೋದನೆ ಪಡೆಯುತ್ತಿದ್ದಾರೆ, ಇದರಲ್ಲಿ ಪಾರದರ್ಶಕತೆ ಇಲ್ಲ. ಟೆಂಡರ್‌ ಹಣವನ್ನು ಕೂಡ ಎರಡು, ಮೂರು ಪಟ್ಟು ಹೆಚ್ಚಿಗೆ ಮಾಡಿಕೊಂಡಿದ್ದಾರೆ ಎಂದು ದೂರಿದರು. ರಾಜ್ಯದಲ್ಲಿ ಜನಜನಿತವಾಗಿರುವ 40% ಕಮಿಷನ್‌ ನ ಮುಂದುವರೆದ ಭಾಗವಿದು. ಟೆಂಡರ್‌ ಮೊತ್ತವನ್ನು ಹೆಚ್ಚು ಮಾಡಿ,ಯಾರು ಹೆಚ್ಚು ಕಮಿಷನ್‌ ನೀಡುತ್ತಾರೆ ಅವರಿಗೆ ಕಾಮಗಾರಿ ಕೊಡುತ್ತಿದ್ದಾರೆ, ತಮಗೆ ಬೇಕಾದ ಗುತ್ತಿಗೆದಾರರನ್ನು ಹುಡುಕಿ ಕೆಲಸ ನೀಡುತ್ತಿದ್ದಾರೆ. ಹೀಗೆ ಮಾಡಿ ಕಮಿಷನ್‌ ವಸೂಲಿ ಮಾಡಿಕೊಳ್ಳುತ್ತಿದ್ದಾರೆ’ ಎಂದು ವಿವರಿಸಿದರು.

    ‘ಲೋಕೋಪಯೋಗಿ, ನೀರಾವರಿ, ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸುಮಾರು 20,000 ಕೋಟಿ ರೂ. ಬಾಕಿ ಬಿಲ್‌ ಇದೆ. 10% ಕಮಿಷನ್‌ ಕೊಟ್ಟವರಿಗೆ ಕೆಲಸ ಮಾರಾಟ ಮಾಡುವ ಪ್ರಕ್ರಿಯೆ ನಡೆಯುತ್ತಿದೆ, ಇದು ಮುಖ್ಯಮಂತ್ರಿ ಕಚೇರಿಯಿಂದಲೇ ಆರಂಭವಾಗಿದೆ. ಈ ಬಗ್ಗೆ ದಾಖಲೆಗಳಿದ್ದು ಇದನ್ನು ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ’ ಎಂದು ಹೇಳಿದರು

    ‘ಸರ್ಕಾರಕ್ಕೆ, ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ. ಮುಂದೆ ಕಾನೂನುಬಾಹಿರವಾಗಿ ಈ ರೀತಿ ಮಾಡಿದರೆ ನೀವು ಸಿಕ್ಕಿಹಾಕಿಕೊಳ್ಳುತ್ತೀರ. ಈ ವಿಚಾರಕ್ಕೆ ತಾತ್ವಿಕ ಅಂತ್ಯ ಕಾಣಿಸುವವರೆಗೆ ನಾವು ಬಿಡುವುದಿಲ್ಲ. ನ್ಯಾಯಾಲಯದಲ್ಲಿ ಇವರ ವಿರುದ್ಧ ನಾವು ಸಿವಿಲ್‌ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತೇವೆ’ ಎಂದರು.

    Verbattle
    Verbattle
    Verbattle
    #BJP #Congress #siddaramaiah #surjewala art BJP Congress dk shivakumar irrigation department m shiva ಕಾಂಗ್ರೆಸ್ ಕಾನೂನು ಚುನಾವಣೆ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕದನ ಕೌತುಕ ಕಣ – ಲಕ್ಷ್ಮಿ ಸೋಲಿಗೆ ಸಾಹುಕಾರ್ ಪಣ
    Next Article Ramanuja Jeeyar ಗೆ ಭಾರಿ ಭದ್ರತೆ
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • LinwoodGah ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LeonardReawn ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.