ಬೆಂಗಳೂರು: ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಣೆಗೆ ಕೆಲವೇ ದಿನಗಳು ಉಳಿದಿರುವಂತೆ ಅಧಿಕಾರ ಚುಕ್ಕಾಣಿ ಹಿಡಿಯಲು ಹರಸಾಹಸ ಮಾಡುತ್ತಿರುವ ಕಾಂಗ್ರೆಸ್ ಇದೀಗ ಬಿಜೆಪಿ ನೇತೃತ್ವದ ಭ್ರಷ್ಟ ಸರ್ಕಾರ ಕಿತ್ತೊಗೆಯಲು ಜನಾಂದೋಲನ ಮೂಡಿಸುವ ದೃಷ್ಟಿಯಿಂದ ಕರ್ನಾಟಕ ಬಂದ್ ಗೆ ಕರೆ ನೀಡಿದೆ..
ಈ ಸಂಬಂಧ ಹೇಳಿಕೆ ನೀಡಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯದಲ್ಲಿ ಬಿಜೆಪಿಯ ಭ್ರಷ್ಟಾಚಾರದ ದುರ್ವಾಸನೆ ವಾಕರಿಕೆ ತರಿಸಿದೆ. 40 % ಸರ್ಕಾರ ಎಲ್ಲ ವರ್ಗದ ಜನರ ಬದುಕು ನಾಶ ಮಾಡಿದೆ. ಭ್ರಷ್ಟಾಸುರ ಬೊಮ್ಮಾಯಿ ಸರ್ಕಾರವು ಭ್ರಷ್ಟಾಚಾರದಿಂದ, ಭ್ರಷ್ಟಾಚಾರಕ್ಕಾಗಿ, ಭ್ರಷ್ಟಾಚಾರಕ್ಕೋಸ್ಕರದ ಸರ್ಕಾರವಾಗಿದೆ ಎಂದು ಹೇಳಿದ್ದಾರೆ
ಬಿಜೆಪಿ ಸರ್ಕಾರದ ಸಾಧನೆಗಳೆಂದರೆ;
ಪ್ರತಿಯೊಂದು ಗುತ್ತಿಗೆಯಲ್ಲೂ 40% ಕಮಿಷನ್ ಶಾಲಾ ಅನುದಾನದಲ್ಲಿ 40% ಕಮಿಷನ್ ಧಾರ್ಮಿಕ ಮಠಗಳ ಅನುದಾನದಲ್ಲಿ 30% ಕಮಿಷನ್ ಮೈಸೂರು ಸ್ಯಾಂಡಲ್ ಸೋಪ್ ಅಕ್ರಮದಲ್ಲಿ ಲಂಚ ವರ್ಗಾವಣೆ ಮತ್ತು ಪೋಸ್ಟಿಂಗ್ ಗೆ ಲಂಚ
ನೇಮಕಾತಿ ಅಕ್ರಮ: ಪಿಎಸ್ಐ, ಸಹಾಯಕ ಪ್ರಾಧ್ಯಾಪಕ, ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್, ಜಿಲ್ಲಾ ಸಹಕಾರಿ ಬ್ಯಾಂಕ್, ಪೌರಕಾರ್ಮಿಕ ಕೆಲಸ, ಕೆಎಂಎಫ್ ಹುದ್ದೆ, ಸಹಾಯಕ ರಿಜಿಸ್ಟ್ರಾರ್ ಹುದ್ದೆ ನೇಮಕಾತಿ ಅಕ್ರಮಗಳು ಎಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಸರ್ಕಾರದ ಈ ಲೂಟಿ ವಿರೋಧಿಸಿ ಕಾಂಗ್ರೆಸ್ ಪಕ್ಷ ಮಾರ್ಚ್ 9 ರಂದು ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದೆ.ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಲು ಬೆಳಗ್ಗೆ 9 ಗಂಟೆಯಿಂದ ಬೆಳಗ್ಗೆ 11 ಗಂಟೆವರೆಗೂ ಸಾಂಕೇತಿಕ ಬಂದ್ ಮಾಡಲಾಗುವುದು. ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆ, ಸಾರಿಗೆ ಹಾಗೂ ಇತರ ಅಗತ್ಯ ಸೇವೆಗಳನ್ನು ಬಂದ್ ವ್ಯಾಪ್ತಿಯಿಂದ ಹೊರಗಿಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ರಾಜ್ಯದ ಪ್ರತಿ ನಗರದಲ್ಲಿ ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕನ್ನಡಿಗರು ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಪಣ ತೊಟ್ಟಿದ್ದಾರೆ ಎಂದಿದ್ದಾರೆ
ನಮ್ಮ ಬೇಡಿಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

1 ಟಿಪ್ಪಣಿ
?Celebremos a cada constructor de la opulencia !
Jugar en casinoretirosinverificacion permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casino sin kyc. Gracias a esta flexibilidad, cada sesiГіn se vuelve mГЎs cГіmoda al usar servicios como casino crypto sin kyc.
Jugar en casinoretirosinverificacion.com permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casino sin kyc. Gracias a esta flexibilidad, cada sesiГіn se vuelve mГЎs cГіmoda al usar servicios como casinoretirosinverificacion.com/.
sin trГЎmites – п»їhttps://casinoretirosinverificacion.com/
?Que la suerte te beneficie con que el destino te brinde emocionantes turnos apasionantes !